ಬೆಣ್ಣೆನಗರಿಯಲ್ಲಿ ಅರವಿಂದ್ ಕೇಜ್ರಿವಾಲ್ 'ಹವಾ': ಆಪ್ ಕಾರ್ಯಕರ್ತರ ಜೈಕಾರ
ದೆಹಲಿಯಲ್ಲಿ ಎರಡನೇ ಬಾರಿ ಸಿಎಂ ಆದ ಬಳಿಕ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ಅರವಿಂದ ಕೇಜ್ರಿವಾಲ್ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಆಪ್ ನಾಯಕರು ವೇದಿಕೆ ಮೇಲೆ ಬರುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಜೈಕಾರ ಕೂಗಿದರು.
ದಾವಣಗೆರೆ, ಮಾರ್ಚ್ 4: ಮುಂಬರುವ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷವು ದಾವಣಗೆರೆಯಿಂದ ಅಧಿಕೃತವಾಗಿ ಪ್ರಚಾರಕ್ಕೆ ಚಾಲನೆ ಕೊಟ್ಟಿದೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಪಂಜಾಬ್ ಸಿಎಂ ಭಗವಾನ್ ಸಿಂಗ್ ಮಾನ್ ಭರ್ಜರಿ ಪ್ರಚಾರ ನಡೆಸಿದರು. ಆಪ್ ನಾಯಕರು ವೇದಿಕೆ ಮೇಲೆ ಬರುತ್ತಿದ್ದಂತೆ ಸಾವಿರಾರು ಕಾರ್ಯಕರ್ತರು ಜೈಕಾರ ಕೂಗಿದರು.
ದೆಹಲಿಯಲ್ಲಿ ಎರಡನೇ ಬಾರಿ ಸಿಎಂ ಆದ ಬಳಿಕ ಮೊದಲ ಬಾರಿಗೆ ದಾವಣಗೆರೆಗೆ ಆಗಮಿಸಿದ ಅರವಿಂದ ಕೇಜ್ರಿವಾಲ್ ಅವರಿಗೆ ಭರ್ಜರಿ ಸ್ವಾಗತ ಕೋರಲಾಯಿತು. ಹೆಲಿಕಾಪ್ಟರ್ ಮೂಲಕ ದಾವಣಗೆರೆಗೆ ಬಂದಿಳಿದ ಅರವಿಂದ್ ಕೇಜ್ರಿವಾಲ್ ಹಾಗೂ ಭಗವಾನ್ ಸಿಂಗ್ ಮಾನೆ ಅವರು ಮಧ್ಯಾಹ್ನ 1.35ಕ್ಕೆ ವೇದಿಕೆಗೆ ಆಗಮಿಸಿದರು.

ನಗರದ ಹೈಸ್ಕೂಲ್ ಮೈದಾನದಲ್ಲಿ ಏರ್ಪಡಿಸಿದ್ದ ಬಹಿರಂಗ ಸಭೆಯಲ್ಲಿ ರಾಜ್ಯ ಮುಖಂಡರು, ಆಮ್ ಆದ್ಮಿ ಪಕ್ಷದ ರಾಷ್ಟ್ರದ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಆಗಮಿಸಿದ್ದರು. ಕೇಜ್ರಿವಾಲ್ ಹಾಗೂ ಭಗವಾನ್ ಮಾನೆಗೆ ಆಮ್ ಆದ್ಮಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಅದ್ಧೂರಿಯಾಗಿ ಬರಮಾಡಿಕೊಂಡರು.
ಅರವಿಂದ್ ಕೇಜ್ರಿವಾಲ್ ಹಾಗೂ ಭಗವಾನ್ ಸಿಂಗ್ ಮಾನ್ ಆಗಮನ ಹಿನ್ನೆಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಮಾತ್ರವಲ್ಲ, ಭದ್ರತಾ ಸಿಬ್ಬಂದಿ ದೆಹಲಿ ಹಾಗೂ ಪಂಜಾಬ್ ನಿಂದ ಆಗಮಿಸಿದ್ದರು. ಸ್ಥಳೀಯ ಪೊಲೀಸರು ಸಹ ಬಿಗಿ ಬಂದೋಬಸ್ತ್ ಕೈಗೊಂಡಿದ್ದರು.

40ರಿಂದ 50 ಸಾವಿರ ಜನರು ಆಗಮಿಸುವ ನಿರೀಕ್ಷೆ ಸಮಾವೇಶದ ಆಯೋಜಕರ ನಿರೀಕ್ಷೆಯಾಗಿತ್ತು. ಆದರೆ ಕೇವಲ ನಾಲ್ಕರಿಂದ ಐದು ಸಾವಿರ ಜನರು ಮಾತ್ರ ಆಗಮಿಸಿದ್ದರು. ಆಮ್ ಆದ್ಮಿ ಪಕ್ಷದ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಅನೇಕರು ಕಾರ್ಯಕ್ರಮದ ಉಸ್ತುವಾರಿ ವಹಿಸಿದ್ದರು. ಆಯ್ದ ಪದಾಧಿಕಾರಿಗಳು, ಆಕಾಂಕ್ಷಿಗಳಿಗೆ ವೇದಿಕೆ ಮುಂಭಾಗ ಅವಕಾಶ ಕಲ್ಪಿಸಿಕೊಡಲಾಗಿತ್ತು.
ವೇದಿಕೆಯಲ್ಲಿ ಮಾತನಾಡಿದ ಆಮ್ ಆದ್ಮಿ ಪಕ್ಷದ ಮುಖಂಡ ಬ್ರಿಜೇಶ್ ಕಾಳಪ್ಪ, "ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಪುತ್ರಿ ಮದುವೆ ವೈಭೋವೋಪೇತವಾಗಿ ಮಾಡಿದರು. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ ಪ್ರಶಾಂತ್ ಮಾಡಾಳ್ ಅವರು ಕಚೇರಿ ಹಾಗೂ ಮನೆಯಲ್ಲಿಟ್ಟಿದ್ದ ಕೋಟ್ಯಾಂತರ ಹಣ ಪತ್ತೆಯಾಗಿದೆ. ಆದರೂ ಯಾಕೆ ಐಟಿ, ಇಡಿ ದಾಳಿ ಮಾಡಿಲ್ಲ. ಯಾಕೆ ಇದುವರೆಗೆ ಗಂಭೀರ ಕ್ರಮ ಆಗಿಲ್ಲ ಎಂದು ಪ್ರಶ್ನಿಸಿದರು. ಕಾರ್ಯಕ್ರಮದಲ್ಲಿ
ಹಾಸ್ಯ ನಟ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡ ಟೆನಿಸ್ ಕೃಷ್ಣ ಮಾತನಾಡಿ, ಎಲ್ಲರೂ ಆಮ್ ಆದ್ಮಿ ಪಕ್ಷ ಬೆಂಬಲಿಸಿ. ರಾಜ್ಯದಲ್ಲಿ ಅಧಿಕಾರಕ್ಕೆ ತನ್ನಿ ಎಂದು ಮನವಿ ಮಾಡಿದರು.












Click it and Unblock the Notifications