ರಾಜ್ಯ ಬಜೆಟ್‌ನಲ್ಲಿ ಬೆಣ್ಣೆನಗರಿ ದಾವಣಗೆರೆ ಜಿಲ್ಲೆಗೆ ಸಿಕ್ಕ ಕೊಡುಗೆಗಳೇನು?
ದಾವಣಗೆರೆ, ಮಾರ್ಚ್, 08: ಸಿಎಂ ಸಿದ್ದರಾಮಯ್ಯ ಅವರು ಮಾರ್ಚ್ 7ರಂದು ರಾಜ್ಯ ಬಜೆಟ್ ಮಂಡನೆ ಮಾಡಿದ್ದಾರೆ. ಈ ವೇಳೆ ಹಲವು ವಿಶೇಷ ಘೋಷಣೆಗಳನ್ನು ಮಾಡಿದ್ದಾರೆ. ಹಾಗಾದ್ರೆ ದಾವಣಗೆರೆ ಜಿಲ್ಲೆಗೆ ಏನು ಘೋಷಿಸಿದ್ದಾರೆ? ಈ ಬಗ್ಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಹೇಳಿದ್ದೇನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಸರ್ಕಾರ ಪ್ರಣಾಳಿಕೆಯಲ್ಲಿ ಕೊಟ್ಟ ಮಾತನ್ನು ಬಜೆಟ್‌ನಲ್ಲಿ ಅನುದಾನ ಹಂಚಿಕೆ ಮೂಲಕ ಉಳಿಸಿಕೊಂಡಿದ್ದೇವೆ ಎಂದು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಶಾಮನೂರು ಶಿವಶಂಕರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್ ಮಂಡನೆ ಮಾಡಿದ್ದು, ಸಮೃದ್ಧಿಯ ಪ್ರತೀಕವಾಗಿದೆ. ಬಿಜೆಪಿಯವರಿಗೆ ನಾಚಿಕೆ ಆಗಬೇಕು. ನಾವು ಕೊಟ್ಟ ಮಾತುಗಳನ್ನ ಉಳಿಸಿಕೊಂಡಿದ್ದೇವೆ. ಅವರ ಕಾಲದ ಬಜೆಟ್ ರೀತಿ ನಮ್ಮದು ಇರುವುದಿಲ್ಲ. ಕೇಂದ್ರ ಬಜೆಟ್‍ನಲ್ಲಿ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ. ಕರ್ನಾಟಕ ಉಳಿಸಿ ಎಂದು ಹೇಳುವುದಕ್ಕೆ ಅವರಿಗೆ ನೈತಿಕತೆ ಇಲ್ಲ. ನಾವು ನಮ್ಮ ಜನರನ್ನು ಕಾಪಾಡುತ್ತೇವೆ, ಕಾಪಾಡಿದ್ದೇವೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾಸ್ಪತ್ರೆ ಸೇರಿ ಇತರೆ ಜಿಲ್ಲೆಗಳ ಒಟ್ಟು 8 ತಾಲ್ಲೂಕು ಆಸ್ಪತ್ರೆಗಳನ್ನು 650 ಕೋಟಿ ರೂಪಾಯಿ ವೆಚ್ಚದಲ್ಲಿ ನವೀಕರಣ ಮಾಡಲಾಗಿದೆ ಇದು ಉತ್ತಮವಾಗಿದೆ. ಬಂಜಾರ ಸಮುದಾಯದ ಪ್ರಮುಖ ಧಾರ್ಮಿಕ ಸ್ಥಳವಾದ ದಾವಣಗೆರೆ ಜಿಲ್ಲೆಯ ಸಂತ ಸೇವಾಲಾಲ್ ಪುಣ್ಯಕ್ಷೇತ್ರವಾದ ಸೂರಗೊಂಡನ ಕೊಪ್ಪದಲ್ಲಿ ಒಂದು ವಸತಿ ಶಾಲೆಯನ್ನು ಕೈಸ್ ವತಿಯಿಂದ ಪ್ರಾರಂಭಿಸಲಾಗುತ್ತಿದೆ.
ದಾವಣಗೆರೆಯ ಕೊಂಡಜ್ಜಿಯ ಪರಿಸರದಲ್ಲಿ ಸ್ಥಾಪನೆ ಮಾಡಲಾಗಿರುವ ವೃತ್ತಿರಂಗಭೂಮಿ ರಂಗಾಯಣದಲ್ಲಿ ಮೂಲಭೂತ ಸೌಕರ್ಯ, ವೃತ್ತಿ ರಂಗಾಯಣ ಸಮುಚ್ಛಯ ಹಾಗೂ ಥಿಯೇಟರ್ ಮ್ಯೂಸಿಯಂ ನಿರ್ಮಾಣಕ್ಕೆ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ 3 ಕೋಟಿ ರೂಪಾಯಿ ತೆಗೆದಿರಿಸಿರುವುದು ಸ್ವಾಗತಾರ್ಹ ಎಂದರು.
ಜಗಳೂರು ಕೆರೆ ತುಂಬಿಸುವ ಯೋಜನೆ, ಹೊನ್ನಾಳಿಯ ಬೆನಕನಹಳ್ಳಿ ಗೋವಿನಕೋವಿ ಮತ್ತು ಹನುಮಸಾಗರ ಕೆರೆ ತುಂಬಿಸುವ ಯೋಜನೆಗೆ ಅನುದಾನ ಘೋಷಣೆ ಮಾಡಿರುವುದು ಹಾಗೂ ರಾಜ್ಯ ಸರ್ಕಾರವು ರೈಲ್ವೆ ಸಹಯೋಗದೊಂದಿಗೆ ತುಮಕೂರು-ದಾವಣಗೆರೆ ಸೇರಿದಂತೆ 9 ವಿವಿಧ ರೈಲ್ವೇ ಯೋಜನೆಗಳಿಗೆ ಮಂಜೂರಾತಿ ನೀಡಿದೆ. ಇದು ರಾಜ್ಯ ಮತ್ತು ಜಿಲ್ಲೆಯನ್ನು ಸಮೃದ್ಧಿಯಡೆಗೆ ತೆಗೆದುಕೊಂಡು ಹೋಗುತ್ತಿದೆ ಎಂದು ಕಾಣುತ್ತಿದೆ ಎಂದು ಹೇಳಿದರು.
ಇನ್ನು ಕಟ್ಟಡ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡಲು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ರಾಜ್ಯದ 31 ಜಿಲ್ಲೆಗಳಲ್ಲಿ 6-12ನೇ ತರಗತಿಯವರೆಗಿನ ವಸತಿ ಶಾಲೆಗಳ ನಿರ್ಮಾಣ, ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕಿಯರಿಗೆ ಹಾಗೂ ಬಿಸಿಯೂಟ ಕಾರ್ಯಕರ್ತರಿಗೆ ವೇತನ ಹೆಚ್ಚಳ, ನಿವೃತ್ತ ಪತ್ರಕರ್ತರಿಗೆ ಗೌರವ ಸಂಭಾವನೆ ಹೆಚ್ಚಳ, ಪತ್ರಕರ್ತರಿಗೆ ಆರೋಗ್ಯ ಸಂಜೀವಿನಿ ಯೋಜನೆ ಸೇರಿದಂತೆ ಹೀಗೆ ಎಲ್ಲಾ ವಲಯಕ್ಕೂ ಈ ಬಜೆಟ್ ಪೂರಕವಾಗಿದೆ ಎಂದು ಹೇಳಿದರು.
ಇನ್ನು ಇದು ಸಿದ್ದರಾಮಯ್ಯ ಅವರು ಮಂಡನೆ ಮಾಡಿದ ದಾಖಲೆಯ 16ನೇ ಬಜೆಟ್ ಆಗಿದೆ. ಇನ್ನು ಬಹುತೇಕ ಮಂದಿ ಅಂದರೆ ವಿಪಕ್ಷಗಳು ಈ ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಾಗುತ್ತದೆ. ಹಣ ಎಲ್ಲಿದೆ ಕೊಡಲು ಅವರ ಬಳಿ ಎಂದು ವ್ಯಗ್ಯವಾಡಿದ್ದರು. ಆದರೆ, ಸಿದ್ದರಾಮಯ್ಯ ಅವರು, ಬಜೆಟ್‌ನಲ್ಲಿ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ. ಅಲ್ಲದೆ, ಆ ಯೋಜನೆಗಳಿಗಾಗಿಯೇ ಬಜೆಟ್‌ನಲ್ಲಿ ಅನುದಾನ ಮೀಸಲಿಡುವುದಾಗಿ ಘೋಷಣೆ ಮಾಡುವ ಮೂಲಕ ಟೀಕಕಾರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ.
-
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
ಸಕಲೇಶಪುರದಲ್ಲಿ ಫೋಟೋಗ್ರಾಫರ್ಗಳ ಮೇಲೆ ಹಲ್ಲೆ ಪ್ರಕರಣ: ದುಬಾರಿ ಕ್ಯಾಮೆರಾಗೆ ಹಾನಿ, ಆರೋಪಿಗಳ ಬಂಧನ -
Price Hike: ಕೇಂದ್ರದಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಹೇಳಿಕೆ, ದರ ಹೆಚ್ಚಿಸಿದ್ದೇ ಕಾಂಗ್ರೆಸ್; ಡಿಕೆಶಿಗೆ ತಿರುಗೇಟು -
Gen Z ಪ್ರತಿಭಟನೆಯಲ್ಲಿ 'ಪಾತ್ರ': ಬಲೆನ್ ಪ್ರಮಾಣ ವಚನ ಸ್ವೀಕರಿಸಿದ ಮರುದಿನವೇ ನೇಪಾಳ ಮಾಜಿ ಪ್ರಧಾನಿ ಕೆಪಿ ಶರ್ಮಾ ಒಲಿ ಬಂಧನ -
ತಮಿಳುನಾಡು ಚುನಾವಣೆ 2026: ಟಿವಿಎಕೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಎರಡು ಕ್ಷೇತ್ರಗಳಿಂದ ನಟ ದಳಪತಿ ವಿಜಯ್ ಸ್ಪರ್ಧೆ -
ಕುಕ್ಕರ್ ಬಾಂಬ್ ಬ್ಲಾಸ್ಟ್ ಕೇಸ್: ಕಾಂಗ್ರೆಸ್ ಉಗ್ರರಿಗೆ 'ಗ್ಯಾರಂಟಿ ಭಾಗ್ಯ' ನೀಡಿದರೂ ಅಚ್ಚರಿಯಿಲ್ಲ; ವಿಜಯೇಂದ್ರ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಸೋಷಿಯಲ್ ಮೀಡಿಯಾಗೆ ವಯೋಮಿತಿ ಫಿಕ್ಸ್?: ಕಠಿಣ 'ಎಐ' ಕಾನೂನು ಜಾರಿಗೆ ಸಂಸದೀಯ ಸಮಿತಿ ಶಿಫಾರಸು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications