Karnataka Budget 2026: ಕರ್ನಾಟಕ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆ ನಿರೀಕ್ಷೆಗಳು
Karnataka Budget 2026: ಕೇಂದ್ರ ಬಜೆಟ್ ಅನ್ನು ಫೆಬ್ರವರ 1ರಂದು ಮಂಡನೆ ಮಾಡಲಾಗುತ್ತದೆ. ಬಳಿಕ ರಾಜ್ಯ ಅಯವ್ಯಯ ಮಂಡನೆ ಆಗಲಿದ್ದು, ಈ ವೇಳೆ ದಾವಣಗೆರೆ ಜಿಲ್ಲೆಗೆ ತರಲಾಗುವ ಯೋಜನೆಗಳ ಬಗ್ಗೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಬಿಚ್ಚಿಟ್ಟರು. ಇಲ್ಲಿದೆ ನೋಡಿ ಸಂಪೂರ್ಣ ಮಾಹಿತಿ.
ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ತರುತ್ತೇವೆ. 22 ಕೆರೆಗಳಿಗೆ ನೀರು ತುಂಬಿಸುವುದು, ಭೈರನಪಾದ ಯೋಜನೆಗೆ ಅನುದಾನ ಸಿಗುವ ನಿರೀಕ್ಷೆ ಇದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದರು. ಗಣರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬಜೆಟ್ ಪೂರ್ವಭಾವಿ ಸಭೆ ಬಗ್ಗೆ ಮಾಹಿತಿ: ಭದ್ರಾ ಜಲಾಶಯದ ಕೊನೆಯ ಭಾಗಕ್ಕೆ ನೀರು ತಲುಪಬೇಕಿದೆ. 22 ಕೆರೆ ಏತ ನೀರಾವರಿ ಯೋಜನೆಯಲ್ಲಿ ಗುಣಮಟ್ಟದ ಪೈಪ್‌ಗಳನ್ನು ಅಳವಡಿಕೆ ಮಾಡಲು ಟೆಂಡರ್ ಕರೆಯಲಾಗಿದೆ. ಈ ಬಾರಿಯ ರಾಜ್ಯ ಬಜೆಟ್ ಬಗ್ಗೆ ಫೆಬ್ರವರಿಯಲ್ಲಿ ಬಜೆಟ್ ಪೂರ್ವಭಾವಿ ಸಭೆಗಳು ನಡೆಯಲಿವೆ. ಹರಿಹರ ತಾಲೂಕಿನ ಭೈರನಪಾದ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲಾಗಿದ್ದು, ನೀರಾವರಿಗೆ ಹೆಚ್ಚಿನ ಅನುದಾನ ಘೋಷಿಸುವ ಸಾಧ್ಯತೆಯಿದೆ ಎಂದು ತಿಳಿಸಿದರು.
ವಿವಿಧ ಕ್ಷೇತ್ರಕ್ಕೆ ಕೊಡುಗೆಗಳು: ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 77ನೇ ಗಣರಾಜ್ಯೋತ್ಸವದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಜಿಲ್ಲೆಯ ಜನತೆಯನ್ನುದ್ದೇಶಿಸಿ ಮಾತನಾಡಿ, ದಾವಣಗೆರೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಯೇ ಸರ್ಕಾರದ ಮೊದಲ ಆದ್ಯತೆಯಾಗಿದೆ. ನೀರಾವರಿ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದರು.
1947ರಲ್ಲಿ ಬ್ರಿಟೀಷರ ಗುಲಾಮಗಿರಿಯಿಂದ ಸ್ವಾತಂತ್ರ್ಯವಾಯಿತು. ಆದರೆ, 1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬರುವ ಮೂಲಕ ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂಬ ಹೆಮ್ಮೆಗೆ ಪಾತ್ರವಾಯಿತು. ಡಾ.ಬಿ.ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚನೆಯಾದ ಸಂವಿಧಾನವು ನಮಗೆ ಸಮಾನತೆ, ಸ್ವಾತಂತ್ರ್ಯ ಮತ್ತು ನ್ಯಾಯವನ್ನು ನೀಡಿದೆ.
ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಿಕ್ರಿಯೆ: ಶಕ್ತಿ ಯೋಜನೆಯಡಿಯಲ್ಲಿ ಜಿಲ್ಲೆಯಲ್ಲಿ ಇದುವರೆಗೆ 12.30 ಕೋಟಿ ಮಹಿಳೆಯರು ಸಾರಿಗೆ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಇವರ ಟಿಕೆಟ್ ವೆಚ್ಚ 361.67 ಕೋಟಿ ರೂಪಾಯಿ ಮೊತ್ತವನ್ನು ಸರ್ಕಾರ ಭರಿಸಿದೆ.
ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಜಿಲ್ಲೆಯ 3.74 ಲಕ್ಷ ಮಹಿಳೆಯರಿಗೆ ಮಾಸಿಕ 2,000 ರೂಪಾಯಿನಂತೆ ಒಟ್ಟು 1,690 ಕೋಟಿ ರೂಪಾಯಿ ಜಮಾ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಡಿ ಜಿಲ್ಲೆಯ 13.95 ಲಕ್ಷ ಫಲಾನುಭವಿಗಳು ಇದರ ಲಾಭ ಪಡೆಯುತ್ತಿದ್ದು, ಫೆಬ್ರವರಿ 2025 ರಿಂದ ನಗದು ಬದಲಾಗಿ ಅಕ್ಕಿ ನೀಡಲಾಗುತ್ತಿದೆ ಎಂದು ಹೇಳಿದರು.
ಗೃಹಜ್ಯೋತಿಯಡಿ 4.62 ಲಕ್ಷ ಕುಟುಂಬಗಳು 200 ಯುನಿಟ್‌ವರೆಗೆ ಸಬ್ಸಿಡಿ ಪಡೆಯುತ್ತಿವೆ. ಯುವನಿಧಿಯಡಿ 9,858 ಪದವೀಧರರಿಗೆ 28.63 ಕೋಟಿ ರೂಪಾಯಿ ಹಾಗೂ ಡಿಪ್ಲೊಮಾ ಪದವೀಧರರಿಗೆ 23.29 ಲಕ್ಷ ರೂಪಾಯಿ ನಿರುದ್ಯೋಗ ಭತ್ಯೆ ನೀಡಲಾಗಿದೆ ಎಂದು ಹೇಳಿದರು.
ಜಿಲ್ಲೆಯ 1.30 ಲಕ್ಷ ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲಾಗಿದೆ. ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲೆಯ 10 ಸಾವಿರ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಿಸಲಾಗುವುದು.ಕುಡಿಯುವ ನೀರು ಪೂರೈಕೆಗೆ ವಿಶೇಷ ಆದ್ಯತೆ ನೀಡಿದ್ದು ಜಿಲ್ಲೆಯ 62 ಗ್ರಾಮಗಳು 24*7 ನೀರು ಪೂರೈಕೆ ಗ್ರಾಮಗಳೆಂದು ಘೋಷಿಸಲ್ಪಟ್ಟಿವೆ ಎಂದರು.
ದಾವಣಗೆರೆ ನಗರ ಭಾಗದಲ್ಲಿ ಏಪ್ರಿಲ್ 2026ರೊಳಗೆ ಎಲ್ಲರಿಗೂ ನಿರಂತರ ನೀರು ಒದಗಿಸಲಾಗುವುದು. ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತವಾಗಿಸಲು ಕೈಗೊಂಡ ವೈಜ್ಞಾನಿಕ ಕ್ರಮಗಳಿಂದ ದಾವಣಗೆರೆಗೆ ರಾಜ್ಯ ಮಟ್ಟದ ಇಂದಿರಾ ಪ್ರಿಯದರ್ಶಿನಿ ಪ್ರಶಸ್ತಿ ಲಭಿಸಿದೆ. ಜಿಲ್ಲೆಯ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಐ.ಟಿ. ಹಬ್ ಮೂಲಕ ಪ್ರತಿಷ್ಠಿತ ಕಂಪನಿಗಳನ್ನು ಆಹ್ವಾನಿಸಲಾಗಿದೆ. ಇದಕ್ಕೆ ಬೇಕಾದ ಮೂಲಭೂತ ಸೌಕರ್ಯ ಮತ್ತು ಕೌಶಲ್ಯಾಭಿವೃದ್ಧಿ ತರಬೇತಿ ನೀಡಲಾಗುತ್ತಿದೆ ಎಂದರು.
ಕರ್ನಾಟಕ ಹಿಮೋಫೀಲಿಯಾ ಸೊಸೈಟಿ ಅಧ್ಯಕ್ಷರಾಗಿ ಸಾಕಷ್ಟು ಜನರ ಸೇವೆ ಮಾಡಿದ ದಾವಣಗೆರೆಯ ಡಾ.ಸುರೇಶ್ ಹಾನಗವಾಡಿ ಅವರಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದ್ದು ಇದು ಜಿಲ್ಲೆಯ ಹೆಮ್ಮೆ ವಿಷಯವಾಗಿದೆ, ಇವರಿಗೆ ಸರ್ಕಾರದಿಂದ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications