Get Updates
Get notified of breaking news, exclusive insights, and must-see stories!

ದಾವಣಗೆರೆಯಲ್ಲಿ ₹9,96,542 ಮೌಲ್ಯದ ಅಕ್ರಮ ಮದ್ಯ ವಶಪಡಿಸಿಕೊಂಡ ಅಬಕಾರಿ ಇಲಾಖೆ

ದಾವಣಗೆರೆ, ಏಪ್ರಿಲ್‌, 11: ರಾಜ್ಯದಲ್ಲಿ ವಿಧಾನಸಭಾ ಚುನಾವಣಾ ಕಾವು ದಿನದಿಂದ ಏರುತ್ತಲೇ ಇದೆ. ಹಾಗೆಯೇ ಈ ಸಮಯದಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ಎಲ್ಲೆಡೆ ಅಲರ್ಟ್‌ ಆಗಿದ್ದು, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿದ್ದಾರೆ. ಹೀಗೆ ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 9,96,542 ರೂಪಾಯಿ ಮೌಲ್ಯದ ಅಕ್ರಮ ಮದ್ಯ, ಬಿಯರ್ ಹಾಗೂ ದ್ವಿಚಕ್ರ ವಾಹನವನ್ನು ಅಬಕಾರಿ ಇಲಾಖೆ ಜಪ್ತಿ ಪಡಿಸಿಕೊಂಡಿದೆ.

ಅಲ್ಲದೇ ಈ ಸಂಬಂಧ ಒಟ್ಟಾರೆ 101 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾ ಅಬಕಾರಿ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವ ಸಲುವಾಗಿ ಜಾರಿ ಮತ್ತು ತನಿಖಾ ಕಾರ್ಯಗಳನ್ನು ಚುರುಕುಗೊಳಿಸಿ ದಾಳಿಯನ್ನು ನಡೆಸಲಾಗಿದೆ.

Karnataka elections 2023: Excise department seized illegal Alcohol worth ₹9,96,542 in Davangere

ಮಾರ್ಚ್ 29ರಿಂದ ಏಪ್ರಿಲ್ 9ರವರೆಗೆ 556.335 ಲೀಟರ್‌ ಮದ್ಯ, 70.870 ಲೀಟರ್‌ ಬಿಯರ್ ಹಾಗೂ 20 ದ್ವಿಚಕ್ರ ವಾಹನಗಳು ಸೇರಿದಂತೆ ಒಟ್ಟು 9,96,542 ರೂಪಾಯಿ ಮೊತ್ತದ ದಾಸ್ತಾನನ್ನು ವಶಪಡಿಸಿಕೊಳ್ಳಲಾಗಿದೆ.

ಮದ್ಯ ಸಾಗಾಣಿಕೆ, ದಾಸ್ತಾನು ಕುರಿತಂತೆ 27 ಘೋರ ಮೊಕದ್ದಮೆಗಳು, ಸಾರ್ವಜನಿಕ ಸ್ಥಳಗಳಲ್ಲಿ ಮದ್ಯ ಮಾರಾಟ ಕುರಿತು 55 ಮೊಕದ್ದಮೆಗಳು ಹಾಗೂ ಮದ್ಯದಂಗಡಿಗಳಲ್ಲಿನ ಸನ್ನದು ಷರತ್ತುಗಳ ಉಲ್ಲಂಘನೆಗಾಗಿ 19 ಬಿ.ಎಲ್.ಸಿ ಮೊಕದ್ದಮೆಗಳನ್ನು ಒಳಗೊಂಡಂತೆ ಒಟ್ಟಾರೆಯಾಗಿ 101 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಅಕ್ರಮ ಚಟುವಟಿಕೆಗಳಿಗೆ ಕಡಿವಾಣ

ಇನ್ನು ವಿಧಾನಸಭಾ ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರುಗಳು, ಚುನಾವಣಾ ಅಕ್ರಮಗಳು ಕಂಡುಬದಲ್ಲಿ ಫೋಟೋ ತೆಗೆದು ಸಿ-ವಿಜಲ್ ದೂರ ಆ್ಯಪ್‌ನಲ್ಲಿ ಅಪ್‍ಲೋಡ್ ಮಾಡಬಹುದು. ಚುನಾವಣಾ ಆಯೋಗ ಈ ದೂರುಗಳ ಕುರಿತಂತೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ದಾವಣಗರೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಶಿವಾನಂದ ಕಾಪಶಿ ಅವರು ಇತ್ತೀಚೆಗಷ್ಟೇ ತಿಳಿಸಿದರು.

Karnataka elections 2023: Excise department seized illegal Alcohol worth ₹9,96,542 in Davangere

ದಾವಣಗೆರೆ ನಗರದ ಪ್ರೆಸ್ ಕ್ಲಬ್‍ನಲ್ಲಿ ನಡೆದ ಮಾಧ್ಯಮ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಚುನಾವಣಾ ಅಕ್ರಮಗಳ ಕುರಿತಂತೆ ದೂರು ದಾಖಲಿಸಿದವರ ಮಾಹಿತಿಯನ್ನು ಗೌಪ್ಯವಾಗಿರಿಸಲಾಗುವುದು. ಸಹಾಯವಾಣಿ 1950 ಸಂಖ್ಯೆಗೆ ಉಚಿತ ಕರೆ ಮಾಡಿ ಮಾಹಿತಿ ನೀಡಬಹುದು. ಹಾಗೂ ಮತದಾರರು ತಮ್ಮ ಹೆಸರು ಸೇರಿದಂತೆ ಚುನಾವಣಾ ಮಾಹಿತಿಗಾಗಿ ಮೊಬೈಲ್‍ನ ಪ್ಲೇಸ್ಟೋರ್‌ನಲ್ಲಿ ವೋಟರ್ ಹೆಲ್ಪ್‌ಲೈನ್ ಡೌನ್‍ಲೋಡ್ ಮಾಡಿಕೊಂಡು ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಮತದಾರರು ನ್ಯಾಯಸಮ್ಮತ, ಪಾರದರ್ಶಕ ಚುನಾವಣೆಗೆ ಸಹಕರಿಸುವಂತೆಯೂ ಮನವಿ ಮಾಡಿಕೊಂಡಿದ್ದರು.

ಅಪರಾಧಗಳ ಬಗ್ಗೆ ತೀವ್ರ ನಿಗಾವಹಿಸಲಾಗಿದೆ

ಇನ್ನು ಚುನಾವಣಾ ಅಪರಾಧಗಳ ಬಗ್ಗೆ ತೀವ್ರ ನಿಗಾವಹಿಸಲಾಗಿದೆ. ಈಗಾಗಲೇ ಜಿಲ್ಲಾದ್ಯಂತ ಆಯ್ದ ಸ್ಥಳಗಳಲ್ಲಿ ಚೆಕ್‍ಪೋಸ್ಟ್‌ಗಳನ್ನು ಸ್ಥಾಪಿಸಿ ವಾಹನಗಳ ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಹಾಗೆಯೇ ಪ್ರತಿ ಚಲನವಲಗಳ ಬಗ್ಗೆ ನಿಗಾವಹಿಸಲಾಗಿದೆ. ಫ್ಲೈಯಿಂಗ್ ಸ್ಕ್ವಾಡ್ ತಂಡ, ಸ್ಥಿರ ಕಣ್ಗಾವಲು ತಂಡ, ಸೆಕ್ಟರ್ ಅಧಿಕಾರಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ತಿಳಿಸಿದ್ದರು.

ಇದುವರೆಗೂ ಜಪ್ತಿ ಮಾಡಿಕೊಂಡ ವಸ್ತುಗಳ ವಿವರ

ವಿಧಾನಸಭಾ ಸಾರ್ವತ್ರಿಕ ಚುನಾಚವಣೆಯ ನೀತಿ ಸಂಹಿತೆ ಜಾರಿಯಿಂದ ಈವರೆಗೆ ಜಿಲ್ಲೆಯಲ್ಲಿ ಒಟ್ಟು 93,42,496 ರೂಪಾಯಿ ಮೊತ್ತದ ವಿವಿಧ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. 2,53,400 ರೂಪಾಯಿ ಮೊತ್ತದ 6,627 ಲೀಟರ್ ಮದ್ಯ, ಸೂಕ್ತ ದಾಖಲೆಗಳಿಲ್ಲದೇ ಸಾಗಿಸುತ್ತಿದ್ದ 42,6,208 ರೂಪಾಯಿ ನಗದು, 56,100 ರೂಪಾಯಿ ಮೌಲ್ಯದ 3.2 ಕೆ.ಜಿ ನಿಕೋಟಿನ್ಸ್ ಮತ್ತು ಅಕ್ರಮವಾಗಿ ಸಾಗಿಸುತ್ತಿದ್ದ 66.7 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದರು.

ಅಂಚೆ ಮತದಾನದ ವ್ಯವಸ್ಥೆ

ಚುನಾವಣಾ ಆಯೋಗ ಈ ಬಾರಿಯೂ ಮಾಧ್ಯಮ ಪ್ರತಿನಿಧಿಗಳು ಸೇರಿದಂತೆ ರೈಲ್ವೆ, ದೂರದರ್ಶನ, ಆರೋಗ್ಯ ಇಲಾಖೆ, ಅಗ್ನಿಶಾಮಕ ಠಾಣೆ, ಕರ್ನಾಟಕ ರಾಜ್ಯ ರಸ್ತೆ ನಿಗಮ, ವಾರ್ತಾ ಇಲಾಖೆ, ಸಂಚಾರಿ ಪೊಲೀಸ್, ತುರ್ತು ಆರೋಗ್ಯ ಸೇವೆ, ಬೆಂಗಳೂರು ವಿದ್ಯುತ್ ಸರಬರಾಜು ನಿಗಮ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ, ಭಾರತೀಯ ದೂರಸಂಪರ್ಕ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಅಗತ್ಯ ಸೇವಾನಿರತ 12 ಇಲಾಖೆಗಳಿಗೆ ಅಂಚೆ ಮತದಾನದ ವ್ಯವಸ್ಥೆ ಜಾರಿಗೆ ತಂದಿದೆ.

ಮತದಾನ ದಿನದಂದು ಚುನಾವಣಾ ಕರ್ತವ್ಯದಲ್ಲಿ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಅಂಚೆ ಮತದಾನದ ವ್ಯವಸ್ಥೆಯನ್ನು ಮಾಡಲಾಗಿದೆ ಎಂದರು. ಅಲ್ಲದೆ ವಿಶೇಷ ಚೇತನ ಮತದಾರರಿಗೆ ಹಾಗೂ 80 ವರ್ಷ ಮೇಲ್ಪಟ್ಟ ಹಿರಿಯ ಮತದಾರರಿಗೆ ಅವರು ಇಚ್ಚಿಸಲ್ಪಟ್ಟರೆ ಮನೆಯಲ್ಲೇ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಮತಗಟ್ಟೆಗಳಲ್ಲಿ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ, ವಾಹನ ವ್ಯವಸ್ಥೆ ಹಾಗೂ ಪ್ರತಿ ಮತಗಟ್ಟೆಯಲ್ಲೂ ಕುಡಿಯುವ ನೀರು, ಬೆಳಕು, ನೆರಳು, ಶೌಚಾಲಯ ವ್ಯವಸ್ಥೆಗಳಿರುವಂತೆ ನೋಡಿಕೊಳ್ಳಲಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+