ರೇಣುಕಾಚಾರ್ಯ ಪರವಾಗಿ ಯೋಗಿ ಆದಿತ್ಯನಾಥ್ ಪ್ರಚಾರ

ದಾವಣಗೆರೆ, ಮೇ 02 : ಚುನಾವಣೆಗೆ ಕೆಲವು ದಿನಗಳು ಮಾತ್ರ ಬಾಕಿ ಉಳಿದಿವೆ. ಚುನಾವಣಾ ಪ್ರಚಾರ ಬಿರುಸು ಪಡೆದುಕೊಳ್ಳುತ್ತಿದೆ. ದಾವಣಗೆರೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರೇಣುಕಾಚಾರ್ಯ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಮೇ 3ರಂದು ಯೋಗಿ ಆದಿತ್ಯನಾಥ್ ಹೊನ್ನಾಳಿಗೆ ಆಗಮಿಸಲಿದ್ದಾರೆ. ಸಂಜೆ 6 ಗಂಟೆಗೆ ಆಗಮಿಸುವ ಅವರು ಬಿಜೆಪಿ ಅಭ್ಯರ್ಥಿ ಎಂ.ಪಿ.ರೇಣುಕಾರ್ಯ ಅವರ ಪರವಾಗಿ ಪ್ರಚಾರ ನಡೆಸಲಿದ್ದಾರೆ. ರಾತ್ರಿ ಹೊನ್ನಾಳಿಯಲ್ಲಿ ವಾಸ್ತವ್ಯ ಹೂಡಲಿದ್ದು, ಮೇ 4ರಂದು ಬೆಳಗ್ಗೆ ಉತ್ತರ ಪ್ರದೇಶಕ್ಕೆ ಮರಳಲಿದ್ದಾರೆ.

ಯೋಗಿ ಆದಿತ್ಯನಾಥ್ ಈಗಾಗಲೇ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯದಲ್ಲಿ ಪ್ರಚಾರ ನಡೆಸಿದ್ದಾರೆ. ಬೆಂಗಳೂರು, ಹುಬ್ಬಳ್ಳಿ, ಮಂಗಳೂರಿನಲ್ಲಿ ಅವರು ಸಮಾವೇಶಗಳನ್ನು ಉದ್ದೇಶಿಸಿ ಮಾತನಾಡಿದ್ದಾರೆ. ಈಗ ದಾವಣಗೆರೆಗೆ ಆಗಮಿಸುತ್ತಿದ್ದಾರೆ.

ನಿತೀಶ್ ಕುಮಾರ್ ಪ್ರಚಾರ : ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸಹ ದಾವಣಗೆರೆಯಲ್ಲಿ ಜೆಡಿಯು ಪರವಾಗಿ ಪ್ರಚಾರ ನಡೆಸಲಿದ್ದಾರೆ. ಮೇ 6ರಂದು ಅವರು ಚನ್ನಗಿರಿಯಲ್ಲಿ ಪಕ್ಷದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಲಿದ್ದಾರೆ.

Karnataka elections : Yogi Adityanath, Nitish Kumar to campaign in Davanagere

ಜೆಡಿಯು ಕರ್ನಾಟಕ ಘಟಕದ ಅಧ್ಯಕ್ಷ ಮಹಿಮಾ ಪಟೇಲ್ ಅವರು ಚನ್ನಗಿರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಅವರ ಪರವಾರಿ ನಿತೀಶ್ ಕುಮಾರ್ ಅವರು ಪ್ರಚಾರ ನಡೆಸಲಿದ್ದು, ಮತ ಯಾಚನೆ ಮಾಡಲಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+