ಕರ್ನಾಟಕ ಚುನಾವಣೆ; ದಾವಣಗೆರೆ ಜಿಲ್ಲೆಯ ಅಭ್ಯರ್ಥಿಗಳು
ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಎದುರಾದಾಗ ಜನರ ಗಮನ ಸೆಳೆಯುವ ಜಿಲ್ಲೆಗಳಲ್ಲಿ ದಾವಣಗೆರೆಯೂ ಒಂದು. ಮಧ್ಯ ಕರ್ನಾಟಕದ ಈ ಜಿಲ್ಲೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸದಾ ನೇರ ಪೈಪೋಟಿ. ಇಲ್ಲಿ ಜೆಡಿಎಸ್‌ಗೆ ಪ್ರಭಾವವೇ ಇಲ್ಲ. ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ರಾಜ್ಯ ರಾಜಕೀಯದ ಅಜಾತ ಶತ್ರು ಎಂದು ಖ್ಯಾತಿ ಪಡೆದಿರುವ ಡಾ. ಶಾಮನೂರು ಶಿವಶಂಕರಪ್ಪ ತವರು ಜಿಲ್ಲೆ ದಾವಣಗೆರೆ. 91 ವರ್ಷದ ಅವರು ಈ ಬಾರಿಯ ಚುನಾವಣೆಯಲ್ಲಿಯೂ ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ.
ದಾವಣಗೆರೆ ಜಿಲ್ಲೆಯಲ್ಲಿ ದಾವಣಗೆರೆ ದಕ್ಷಿಣ, ದಾವಣಗೆರೆ ಉತ್ತರ, ಮಾಯಕೊಂಡ (ಎಸ್‌ಸಿ ಮೀಸಲು), ಚನ್ನಗಿರಿ, ಜಗಳೂರು, ಹರಿಹರ, ಹೊನ್ನಾಳಿ ವಿಧಾನಸಭಾ ಕ್ಷೇತ್ರಗಳಿವೆ. ದಾವಣಗೆರೆ ದಕ್ಷಿಣ ಮತ್ತು ದಾವಣಗೆರೆ ಉತ್ತರದಲ್ಲಿ ಶಾಮನೂರು ಶಿವಶಂಕರಪ್ಪ ಕುಟುಂಬದ ಪ್ರಭಾವ ಕೆಲಸ ಮಾಡುತ್ತದೆ. ಈ ಬಾರಿಯ ಚುನಾವಣೆಗೆ ಶಾಮನೂರು ಶಿವಶಂಕರಪ್ಪ ದಾವಣಗೆರೆ ದಕ್ಷಿಣ, ಅವರ ಪುತ್ರ ಎಸ್. ಎಸ್. ಮಲ್ಲಿಕಾರ್ಜುನ ದಾವಣಗೆರೆ ಉತ್ತರ ಕಾಂಗ್ರೆಸ್ ಅಭ್ಯರ್ಥಿಗಳು.

ಹೊನ್ನಾಳಿ ಕ್ಷೇತ್ರದಲ್ಲಿ ಬಿಜೆಪಿಯ ಎಂ. ಪಿ. ರೇಣುಕಾಚಾರ್ಯ ತಮ್ಮದೇ ಆದ ವೈಯಕ್ತಿಕ ಪ್ರಭಾವ ಹೊಂದಿದ್ದಾರೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳೂ ಆಗಿರುವ ಅವರು ಈ ಬಾರಿಯೂ ಬಿಜೆಪಿಯ ಅಭ್ಯರ್ಥಿ. 2018ರ ಚುನಾವಣೆಯಲ್ಲಿ ಜಗಳೂರು ಕ್ಷೇತ್ರದಲ್ಲಿ ಬಿಜೆಪಿಯ ಎಸ್. ವಿ. ರಾಮಚಂದ್ರ ಜಯಗಳಿಸಿದ್ದರು. ಈ ಬಾರಿಯ ಚುನಾವಣೆಯಲ್ಲಿಯೂ ಬಿಜೆಪಿ ಹಾಲಿ ಶಾಸಕರಿಗೆ ಟಿಕೆಟ್ ನೀಡಿದೆ. ಕಾಂಗ್ರೆಸ್ 3ನೇ ಪಟ್ಟಿಯಲ್ಲಿ ವರ್ಷದ ಹಿಂದೆ ಜೆಡಿಎಸ್ ಬಿಟ್ಟು ಪಕ್ಷ ಸೇರಿದ್ದ ಚಿಕ್ಕಮ್ಮನಹಟ್ಟಿ ಬಿ. ದೇವೇಂದ್ರಪ್ಪ ಅಭ್ಯರ್ಥಿ ಎಂದು ಘೋಷಿಸಿದೆ.
ಚನ್ನಗಿರಿ ಈ ಬಾರಿ ದೇಶಾದ್ಯಂತ ಸುದ್ದಿ ಮಾಡಿದ ಕ್ಷೇತ್ರ. ಕ್ಷೇತ್ರದ ಹಾಲಿ ಶಾಸಕ ಬಿಜೆಪಿಯ ಮಾಡಾಳು ವಿರೂಪಾಕ್ಷಪ್ಪ. ಆದರೆ ಬಿಜೆಪಿ ಟಿಕೆಟ್ ಹಾಲಿ ಶಾಸಕರ ಕೈ ತಪ್ಪಿದೆ. ಲೋಕಾಯುಕ್ತ ದಾಳಿ, ಲಂಚ ಪ್ರಕರಣ, ಬಂಧನ ಇದರಿಂದಾಗಿ ಮಾಡಾಳು ವಿರೂಪಾಕ್ಷಪ್ಪ ಬದಲು ಬಿಜೆಪಿ ಅಭ್ಯರ್ಥಿಯಾಗಿ ಎಚ್. ಎಸ್. ಶಿವಕುಮಾರ್ ಆಯ್ಕೆ ಮಾಡಲಾಗಿದೆ. ತಮಗೆ ಅಲ್ಲದಿದ್ದರೂ ಪುತ್ರ ಮಾಡಾಳ್ ಮಲ್ಲಿಕಾರ್ಜುನ್‌ಗೆ ಟಿಕೆಟ್ ಸಿಗುವ ಭರವಸೆಯಲ್ಲಿದ್ದ ಶಾಸಕರಿಗೆ ನಿರಾಸೆಯಾಗಿದೆ. ಏಪ್ರಿಲ್ 15ರ ಶನಿವಾರ ಅವರು ಜೈಲಿನಿಂದ ಬಿಡುಗಡೆಯಾಗಿದ್ದು, ಮುಂದಿನ ರಾಜಕೀಯ ನಡೆ ಕುತೂಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಸಹ ಕ್ಷೇತ್ರದಲ್ಲಿ ಮಾಜಿ ಶಾಸಕ ವಡ್ನಾಳ್ ರಾಜಣ್ಣ ಬದಲು ಕಿಸಾನ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಬಸವರಾಜ್ ಶಿವಗಂಗಾರನ್ನು ಅಭ್ಯರ್ಥಿಯಾಗಿಸಿದೆ.
ಹರಿಹರ ಕ್ಷೇತ್ರದ ಹಾಲಿ ಶಾಸಕರು ಎಸ್. ರಾಮಪ್ಪ. ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತರು. ಆದರೆ ಕಾಂಗ್ರೆಸ್ 3 ಪಟ್ಟಿಗಳು ಬಿಡುಗಡೆಯಾದರೂ ಹರಿಹರದ ಕಾಂಗ್ರೆಸ್ ಟಿಕೆಟ್ ಅಂತಿಮವಾಗಿಲ್ಲ. ಈ ಬಾರಿಯ ಚುನಾವಣೆಯಲ್ಲಿ ಎಸ್. ರಾಮಪ್ಪ ಸೇರಿ 9 ಅರ್ಜಿಗಳು ಕೆಪಿಸಿಸಿಗೆ ಟಿಕೆಟ್‌ಗಾಗಿ ಸಲ್ಲಿಕೆಯಾಗಿದ್ದವು. ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಏಪ್ರಿಲ್ 20 ನಾಮಪತ್ರ ಸಲ್ಲಿಕೆಗೆ ಕೊನೆ ದಿನ. ಬಿಜೆಪಿ ಬಿ. ಪಿ. ಹರೀಶ್ ಅಭ್ಯರ್ಥಿ ಎಂದು ಘೋಷಿಸಿದೆ.
ದಾವಣಗೆರೆ ಜಿಲ್ಲೆಯ ಪ್ರಭಾವಿ ನಾಯಕರುಗಳಲ್ಲಿ ಶಾಮನೂರು ಶಿವಶಂಕರಪ್ಪ, ಎಸ್. ಎಸ್. ಮಲ್ಲಿಕಾರ್ಜುನ್, ಎಂ. ಪಿ. ರೇಣುಕಾಚಾರ್ಯ ಹೆಸರು ಕೇಳಿ ಬರುತ್ತದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನೇರ ಎದುರಾಳಿಗಳು. ಎಎಪಿ, ಜೆಡಿಎಸ್, ಪಕ್ಷೇತರ ಅಭ್ಯರ್ಥಿಗಳು ಚುನಾವಣೆಯಲ್ಲಿ ಯಾವುದೇ ಪ್ರಭಾವ ಬೀರುವುದಿಲ್ಲ.
ದಾವಣಗೆರೆ ಜಿಲ್ಲೆಯ ಅಭ್ಯರ್ಥಿಗಳು
| ಕ್ಷೇತ್ರ | ಬಿಜೆಪಿ ಅಭ್ಯರ್ಥಿ | ಕಾಂಗ್ರೆಸ್ ಅಭ್ಯರ್ಥಿ | ಜೆಡಿಎಸ್ ಅಭ್ಯರ್ಥಿ | ಎಎಪಿ |
| ದಾವಣಗೆರೆ ದಕ್ಷಿಣ | ಅಜಯ್ ಕುಮಾರ್ | ಶಾಮನೂರು ಶಿವಶಂಕರಪ್ಪ | ಅಮಾನುಲ್ಲಾ | |
| ದಾವಣಗೆರೆ ಉತ್ತರ | ಲೋಕಿಕೆರೆ ನಾಗರಾಜ್ | ಎಸ್. ಎಸ್. ಮಲ್ಲಿಕಾರ್ಜುನ್ | ಶ್ರೀಧರ್ ಪಾಟೀಲ | |
| ಜಗಳೂರು (ಎಸ್. ಟಿ) | ಎಸ್. ವಿ. ರಾಮಚಂದ್ರ | ಬಿ. ದೇವೇಂದ್ರಪ್ಪ | ಗೋವಿಂದ ರಾಜು | |
| ಹೊನ್ನಾಳಿ | ಎಂ. ಪಿ. ರೇಣುಕಾಚಾರ್ಯ | |||
| ಹರಿಹರ | ಬಿ. ಪಿ. ಹರೀಶ್ | ಹೆಚ್. ಎಸ್. ಶಿವಶಂಕರ | ಗಣೇಶಪ್ಪ ದುರ್ಗದ | |
| ಚನ್ನಗಿರಿ | ಎಚ್. ಎಸ್. ಶಿವಕುಮಾರ್ | ಬಸವರಾಜು ವಿ. ಶಿವಗಂಗಾ | ಯೋಗೀಶ್ | |
| ಮಾಯಕೊಂಡ | ಬಸವರಾಜು ನಾಯಕ್ | ಕೆ. ಎಸ್. ಬಸವರಾಜು | ಆನಂದಪ್ಪ |
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications