ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಾಥಾಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆ: ದಾವಣಗೆರೆಯಲ್ಲಿ ಬಿಗಿ ಕ್ರಮ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಮೇ.13: ದಾವಣಗೆರೆ ಜಿಲ್ಲೆಯಲ್ಲಿ ಮೇ.21 ಮತ್ತು 22ರಂದು ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲಿ ಯಾವುದೇ ಅಕ್ರಮಗಳು ನಡೆಯದಂತೆ ಮುಂಜಾಗ್ರತೆ ವಹಿಸಿ ಪರೀಕ್ಷೆ ಯಶಸ್ವಿಗೊಳಿಸಲು ಜಿಲ್ಲಾಡಳಿತ ಸಜ್ಜಾಗಿದೆ. ರಾಜ್ಯದಲ್ಲಿ ಪಿಎಸ್ಐ ನೇಮಕಾತಿ ಹಾಗೂ ವಿವಿಧ ಇಲಾಖೆಗಗಳ ನೇಮಕಾತಿ ಪರೀಕ್ಷೆಯಲ್ಲಿ ಹಗರಣ ನಡೆದಿದೆ ಎಂಬ ಸುದ್ದಿ ಜೋರಾಗಿರುವ ಹಿನ್ನೆಲೆ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯಲ್ಲೂ ನಕಲು ಆಗದಂತೆ ತಡೆಯಲು ದಾವಣಗೆರೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಳ್ಳಲಾಗಿದೆ.

ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿ..!

ದಾವಣೆಗೆರೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪರೀಕ್ಷೆಯ ಕುರಿತು ಪೂರ್ವಭಾವಿ ಸಭೆಯಲ್ಲಿ ಪರೀಕ್ಷೆ ವೇಳೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಕಟ್ಟುನಿಟ್ಟಿನ ಸೂಚನೆ ಕೊಟ್ಟಿದ್ದಾರೆ. ಜಿಲ್ಲೆಯಲ್ಲಿ ಮೂರು ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 600 ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಪರೀಕ್ಷಾ ಕೇಂದ್ರದ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳಿಗೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಿದ್ದು, ಕೋವಿಡ್ ನಿಯಾಮನುಸಾರ ಪರೀಕ್ಷಾ ಅಭ್ಯರ್ಥಿಗಳಿಗೆ ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮಾಡಿ ಉಚಿತ ಮಾಸ್ಕ್ ನೀಡಿ ಪರೀಕ್ಷೆ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಆರ್.ಬೀಳಗಿ ಖಡಕ್ ಸೂಚನೆ ನೀಡಿದ್ದಾರೆ.

ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಕೆ..!

ಪರೀಕ್ಷಾ ಕೇಂದ್ರಗಳಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುವುದು. ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿ ಮೇಲ್ವಿಚಾರಕರು ಹಾಗೂ ಅಭ್ಯರ್ಥಿಗಳು ಮೊಬೈಲ್, ಶೂ, ಎಲೆಕ್ಟ್ರಾನಿಕ್ ವಾಚ್ ಸೇರಿದಂತೆ ಯಾವುದೇ ರೀತಿಯ ಎಲೆಕ್ಟ್ರಾನಿಕ್ ಉಪಕರಣ ತೆಗೆದುಕೊಂಡು ಹೋಗಲು ಅವಕಾಶ ಇರುವುದಿಲ್ಲ. ಪ್ರತಿ ಕೊಠಡಿಯಲ್ಲೂ ಸಮಯ ಪಾಲನೆಗಾಗಿ ಗೋಡೆ ಗಡಿಯಾರಗಳನ್ನು ಅಳವಡಿಸುವುದು. ಜಾಮಿಟ್ರಿ ಬಾಕ್ಸ್ ಇದ್ದಲ್ಲಿ ಕಡ್ಡಾಯವಾಗಿ ತಪಾಸಣೆಗೊಳಪಡಿಸಿ ರೇಖಾ ಗಣಿತ ಪರಿಕರಗಳನ್ನು ಮಾತ್ರ ತೆಗೆದುಕೊಂಡು ಹೋಗಲು ಅ‌ನುಮತಿ ನೀಡಲಾಗಿದೆ.

 Karnataka Teachers Recruitment Exam: Davanagere DC holds Preparation Meeting

ನಕಲು ಮಾಡುವ ಅನುಮಾಸ್ಪದ ವಸ್ತಗಳು ಕಂಡಲ್ಲಿ ಪರೀಕ್ಷೆಯಿಮದ ಅಮಾನತು..!

ಒಂದು ವೇಳೆ ನಕಲು ಮಾಡಬಹುದಾದ ಅನುಮಾಸ್ಪದ ವಸ್ತಗಳನ್ನ ತಂದಿರುವುದು ಕಂಡುಬಂದಲ್ಲಿ ತಕ್ಷಣವೇ ಅವರನ್ನು ಪರೀಕ್ಷೆಯಿಂದ ಅಮಾನತು ಮಾಡಲಾಗುವುದು. ಜಿಲ್ಲೆಯಲ್ಲಿ ಈವರೆಗೆ ಎಲ್ಲಾ ಪರೀಕ್ಷೆಗಳು ಸುಗಮವಾಗಿ ನಡೆದಿವೆ, ಸರ್ಕಾರಕ್ಕೆ ಒಳ್ಳೆಯ ಹೆಸರು ತರಬೇಕು ಯಾವುದೇ ರೀತಿಯ ಲೋಪ ಬರದಂತೆ ಕಾರ್ಯನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಆರ್.ಬೀಳಗಿ ಖಡಕ್ ಸೂಚನೆ ನೀಡಿದ್ದಾರೆ.

ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಇ.ಎನ್.ಟಿ ಸ್ಪೆಷಲಿಸ್ಟ್ ಗಳನ್ನು ನೇಮಿಸಿ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದಂತೆ ನೋಡಿಕೊಳ್ಳಬೇಕು. ಪರೀಕ್ಷಾ ಆವರಣ ಮತ್ತು ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಸಿದ್ದು ಪರೀಕ್ಷಾರ್ಥಿಗಳ ಸಂಬಂಧಿಗಳು ಸಂಬಂಧಿತ ಕಾರ್ಯಗಳಲ್ಲಿ ಭಾಗವಹಿಸುವಂತಿಲ್ಲ ಎಂದರು.

 Karnataka Teachers Recruitment Exam: Davanagere DC holds Preparation Meeting

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಮಾತನಾಡಿ, ಇತ್ತೀಚಿಗೆ ಪಿ.ಎಸ್.ಐ ನೇಮಕದಲ್ಲಿ ಸಾಕಷ್ಟು ಅಕ್ರಮಗಳು ಕಂಡುಬಂದಿರುವುದರಿಂದ ಜಿಲ್ಲೆಯಲ್ಲಿ ನಡೆಯಲಿರುವ ಶಿಕ್ಷಕರ ನೇಮಕಾತಿ ಪರೀಕ್ಷೆಗೆ ಅತ್ಯಂತ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಒಬ್ಬ ಅಭ್ಯರ್ಥಿ ಅಕ್ರಮ ನಡೆಯುವಂತ ಒಂದು ಸಣ್ಣ ಸಂದೇಹ ಕಂಡುಬಂದರೂ ಸಹ ಅವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುದಾಗಿ ಸೂಚನೆ ನೀಡಿದ್ದಾರೆ.

 Karnataka Teachers Recruitment Exam: Davanagere DC holds Preparation Meeting

ಇನ್ನೂ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಬಹುದಾದ ಪರೀಕ್ಷಾ ಪ್ರಕ್ರಿಯೆಗಳ ಬಗ್ಗೆ ಕಾಲಕಾಲಕ್ಕೆ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾಡಳಿತದ ಕಂಟ್ರೋಲ್ ರೂಮ್ ಸಂಖ್ಯೆ: 08192-257778 ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.

Recommended Video

Rajat Patidar ಅವರ ಆಟ ಹೇಗಿತ್ತು | Oneindia Kannada

English summary
Karnataka Teachers Recruitment Exam: Davanagere DC holds Preparation Meeting, Tightening of recruitment test of graduate primary school teachers, Teachers Recruitment Examination to be held on May 21 and 22,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X