Yuvanidhi Scheme: ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಗುಡ್‌ ನ್ಯೂಸ್‌

Yuvanidhi Scheme: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಇವುಗಳಲ್ಲಿ ಯುವನಿಧಿ ಕೂಡ ಒಂದಾಗಿದ್ದು, ಈ ಯೋಜನೆಯ ಫಲಾನುಭವಿಗಳಿಗೆ ಇದೀಗ ಗುಡ್‌ ನ್ಯೂಸ್‌ವೊಂದನ್ನು ನೀಡಲಾಗಿದೆ. ಹಾಗಾದ್ರೆ, ಅದೇನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕರ್ನಾಟಕದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು, ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಯುವನಿಧಿ ಎಂಬ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈ ಪೈಕಿ ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ಇದೀಗ ಗುಡ್‌ ನ್ಯೂಸ್‌ವೊಂದನ್ನು ನೀಡಲಾಗಿದೆ. ಹಾಗಾದ್ರೆ, ಅದೇನು ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Karnataka Yuvanidhi Scheme Free Skill Training and Job Opportunities for Beneficiaries

ದಾವಣಗೆರೆ ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಆಯೋಜನೆಯ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ನೀಡಿ ಉದ್ಯೋಗಾವಕಾಶ ನೀಡಲಾಗುತ್ತಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಇಲಾಖೆಯ ಅಡಿಯಲ್ಲು ಬರುವ ಸರ್ಕಾರಿ ತರಬೇತಿ ಸಂಸ್ಥೆಗಳಾದ ಐಟಿಐ ಜಿ.ಟಿ.ಟಿ.ಸಿ, ಕೆ.ಜಿ.ಟಿ.ಟಿ.ಐ ಹಾಗೂ ಸಿಡಾಕ್ ಸಂಸ್ಥೆಗಳ ಮೂಲಕ ಉಚಿತ ಕೌಶಲ್ಯ ತರಬೇತಿ ನೀಡಲಾಗುತ್ತಿದೆ. ಯುವನಿಧಿ ಯೋಜನೆಯ ಫಲಾನುಭವಿಗಳು ತರಬೇತಿಗಾಗಿ kaushalkar portalನಲ್ಲಿ ನೋಂದಣಿ ಮಾಡಿಕೊಳ್ಳಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ದಿ ಅಧಿಕಾರಿ ಡಾ.ಸಿದ್ದೇಶ್.ಎಸ್ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ. ಇನ್ನು ಇದರಿಂದ ಉದ್ಯೋಗ ನಿರೀಕ್ಷೆಯಲ್ಲಿರುವವರಿಗೆ ತುಂಬಾ ಅನುಕೂಲ ಆದಂತಾಗಲಿದೆ.

ಯುವನಿಧಿ ಯೋಜನೆಯಡಿಯಲ್ಲಿ 2022-23ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಹಾಗೂ ಡಿಪ್ಲೊಮಾ ಪೂರೈಸಿದ ನಿರುದ್ಯೋಗಿ ಕನ್ನಡಿಗರಿಗೆ 2 ವರ್ಷಗಳವರೆಗೆ ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುತ್ತದೆ. ಪದವೀಧರರಿಗೆ ತಿಂಗಳಿಗೆ 3000 ರೂಪಾಯಿ ಮತ್ತು ಡಿಪ್ಲೊಮಾ ಪಾಸಾದವರಿಗೆ ತಿಂಗಳಿಗೆ 1,500 ರೂಪಾಯಿ ಸಿಗಲಿದೆ. ಇನ್ನು ಈ ಯೋಜನೆಯಡಿಯಲ್ಲಿ ಉದ್ಯೋಗ ದೊರೆದರೆ/ ಸ್ವಂತ ಉದ್ಯಮವನ್ನು ಆರಂಭಿಸಿದರೆ ಭತ್ಯೆ ಸ್ಥಗಿತ ಆಗಲಿದೆ.

ಗ್ಯಾರಂಟಿ ಯೋಜನೆಗಳ ವಿವರ: ಹೀಗೆ ಶಕ್ತಿ ಯೋಜನೆಯಡಿಯಲ್ಲಿ ರಾಜ್ಯದ ಸಾರಿಗೆ ಬಸ್‌ಗಳಲ್ಲಿ ಎಲ್ಲಾ ಮಹಿಳೆಯರಿಗೆ ಉಚಿತವಾಗಿ ಪ್ರಯಾಣ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಯೊಜನೆಯನ್ನು ಬಳಸಿಕೊಂಡು ರಾಜ್ಯದ ಸಾಕಷ್ಟು ಸಂಖ್ಯೆಯಲ್ಲಿ ಮಹಿಳೆಯರು ಪ್ರಸಿದ್ಧ ಪ್ರವಾಸಿ ತಾಣಗಳು, ದೇವಾಲಯಗಳಿಗೆ ಈಗಲೂ ಭೇಟಿ ನೀಡುತ್ತಲಿದ್ದಾರೆ. ಅಲ್ಲದೆ, ಅಗತ್ಯವಿದ್ದರೆ ಒಂದು ಊರಿನಿಂದ ಮತ್ತೊಂದು ಊರಿಗೆ ಹೆಚ್ಚೆಚ್ಚು ಸಂಖ್ಯೆಯಲ್ಲಿ ಪ್ರಯಾಣ ಮಾಡುತ್ತಿದ್ದಾರೆ. ಇನ್ನೂ ಕಾಲೇಜು ವಿದ್ಯಾರ್ಥಿಗಳು ಸಹ ಪ್ರತಿದಿನ ಈ ಯೋಜನೆಯ ಅದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆಯಡಿಯಲ್ಲಿ ಪ್ರತಿ ತಿಂಗಳು ಪ್ರತಿ ಮನೆ ಯಜಮಾನಿಯರ ಖಾತೆಗೆ 2,000 ರೂಪಾಯಿ ನೀಡಲಾಗುತ್ತಿದೆ. ಗೃಹಜ್ಯೋತಿ ಯೋಜನೆಯಡಿಯಲ್ಲಿ200 ಯೂನಿಟ್‌ವರೆಗೆ ಉಚಿಯ ವಿದ್ಯುತ್ ನೀಡಲಾಗುತ್ತಿದೆ. ಇನ್ನು ಅನ್ನಭಾಗ್ಯ ಯೋಜನೆಯಡಿಯಲ್ಲಿ ಉಚಿತ ಪಡಿತರವನ್ನು ನೀಡಲಾಗುತ್ತಿದೆ. ಇದರಡಿಯಲ್ಲಿ ಒಬ್ಬ ಸದಸ್ಯರಿಗೆ 10 ಕೆ.ಜಿ ಅಕ್ಕಿಯನ್ನು ನೀಡಲಾಗುತ್ತದೆ. ಹೀಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಈ ಪೈಕಿ ಗೃಹಲಕ್ಷ್ಮಿ, ಅನ್ನಭಾಗ್ಯ ಯೋಜನೆ ಜನರಿಗೆ ತುಂಬಾ ಅನುಕೂಲ ಆಗುತ್ತಿದೆ. ಆದರೆ ಶಕ್ತಿ ಯೋಜನೆಯಡಿಯಲ್ಲಿ ಎಲ್ಲಾ ಮಹಿಳಯರಿಗೂ ಉಚಿತ ಪ್ರಯಾಣದ ಬದಲಾಗಿ ವಿದ್ಯಾರ್ಥಿಗಳಿಗಷ್ಟೇ ಈ ಸೌಲಭ್ಯ ನೀಡಿದರೆ ಚೆನ್ನಾಗಿರುತ್ತಿತ್ತು ಎಂದು ಹಲವರು ಹೇಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+