ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತ್ತೆ ಮತ್ತೆ ಅಸ್ತಿತ್ವದ ಪ್ರಶ್ನೆ ಎತ್ತಿ ಸಿದ್ದರಾಮಯ್ಯ ವಿರುದ್ಧ ವ್ಯಂಗ್ಯ ಮಾಡಿದ ಈಶ್ವರಪ್ಪ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

Recommended Video

ಸ್ಕೋಪ್ ಸಿದ್ದರಾಮಯ್ಯ ಎಂದ ಕೆ.ಎಸ್. ಈಶ್ವರಪ್ಪ | KS Eshwarappa | Oneindia Kannada

ದಾವಣಗೆರೆ, ಸೆಪ್ಟೆಂಬರ್ 19: "ರಾಜ್ಯದಲ್ಲಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದವರು ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕಾಗಿ ಜನಾಂದೋಲನ ನಡೆಸುತ್ತಿದ್ದಾರೆ ವಿನಃ ಬೇರೆ ಉದ್ದೇಶಕ್ಕಲ್ಲ" ಎಂದು ದಾವಣಗೆರೆಯಲ್ಲಿ ಕಾಂಗ್ರೆಸ್ ಜನಾಂದೋಲನದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.

"ಸಿದ್ದರಾಮಯ್ಯ ವಡ್ಡ ದಡ್ಡ" ಎಂದು, ತಕ್ಷಣ ವರಸೆ ಬದಲಿಸಿದ ಈಶ್ವರಪ್ಪ

ನಗರದ ಶಿರಮಗೊಂಡನಹಳ್ಳಿಯ ಶಾಸಕ ರವೀಂದ್ರನಾಥ್ ಅವರ ಮನೆಗೆ ಭೇಟಿ ನೀಡಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಜನಾಂದೋಲನ ನಡೆಸುತ್ತಿದೆ. ಸಿದ್ದರಾಮಯ್ಯ ಆಡಳಿತ ನಡೆಸುವಾಗ ನಾನೇ ದೇವರಾಜ್ ಅರಸ್ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದರು. ಅದೆಲ್ಲ ಈಗ ಸುಳ್ಳಾಗಿದೆ" ಎಂದು ವ್ಯಂಗ್ಯವಾಡಿದರು.

KS Eshwarappa Spoke Against Siddaramaiah For Janandolana

"ಈಗಾಗಲೇ ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದೆ. ಕೇಂದ್ರದ ತಂಡಗಳು ಸರ್ವೇ ಮುಗಿಸಿದ್ದು, ಕೇಂದ್ರದಿಂದ ಶೀಘ್ರ ಪರಿಹಾರ ಘೋಷಣೆಯಾಗಲಿದೆ. ಅಲ್ಲದೆ ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲೂ ಜಲಪ್ರವಾಹ ಹಾನಿ ಸೃಷ್ಟಿಸಿದೆ. ಎಲ್ಲಾ ರಾಜ್ಯಗಳಿಗೆ ಪರಿಹಾರ ಘೋಷಣೆ ಸಂದರ್ಭದಲ್ಲಿ ರಾಜ್ಯಕ್ಕೂ ಘೋಷಣೆಯಾಗುತ್ತದೆ. ಇನ್ನು ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಬೆಳಗಾವಿಯಲ್ಲಿ ಆಡಳಿತಾತ್ಮಕ ಕೇಂದ್ರ ತೆರೆಯಲು ತೀರ್ಮಾನಿಸಿದ್ದೇವೆ" ಎಂದರು.

English summary
"Siddaramaiah and the Congress party in the state are carrying out a campaign to make their presence felt. There is no other motive," KS Eshwarappa said in davangere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X