KSRTC Bus Accident: ದಾವಣಗೆರೆ ಬಳಿ ಸಾರಿಗೆ ಬಸ್ ಪಲ್ಟಿ; 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
KSRTC Bus Accident: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ (KSRTC) ಬಸ್ ಪಲ್ಟಿಯಾಗಿ 25ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗೊಂಡ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದೆ.
ದಾವಣಗೆರೆ ತಾಲ್ಲೂಕಿನ ಹುಲಿಕಟ್ಟಿ ಗ್ರಾಮದ ಬಳಿ ಸಾರಿಗೆ (KSRTC) ಬಸ್ ಪಲ್ಟಿಯಾದ ಇಂದು (ಮೇ 24) ಮಧ್ಯಾಹ್ನ ನಡೆದಿದೆ. ಘಟನೆಯಲ್ಲಿ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ದಾವಣಗೆರೆಯಿಂದ ಹಾಲೇಕಲ್ ಗ್ರಾಮಕ್ಕೆ ಬಸ್ ಸಂಚರಿಸುವ ವೇಳೆ ಈ ಘಟನೆ ನಡೆದಿದೆ. ಬಸ್‌ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರು ಸಂಚರಿಸುತ್ತಿದ್ದರು. ಬಸ್‌ಗೆ ಕುರಿಗಳು ಅಡ್ಡಬಂದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿ ಪಲ್ಟಿಯಾಗಿದೆ. ಗಾಯಾಳುಗಳನ್ನು ಅಣಜಿ ಆಸ್ಪತ್ರೆ, ಜಿಲ್ಲಾ ಚಿಗಟೇರಿ ಆಸ್ಪತ್ರೆ ಹಾಗೂ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಈ ಘಟನೆ ದಾವಣಗೆರೆ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.
ಎರಡು ಕಾರುಗಳ ನಡುವೆ ಅಪಘಾತ: ಇತ್ತೀಚೆಗಷ್ಟೇ ಎರಡು ಕಾರುಗಳು ಅಪಘಾತಕ್ಕಿಡಾಗಿ ಇಬ್ಬರು ಗಾಯಗೊಂಡ ಘಟನೆ ಚನ್ನಪಟ್ಟಣ ತಾಲೂಕಿನ ಬಳಿಯ ಇದೇ ಹೆದ್ದಾರಿಯಲ್ಲಿ ನಡೆದಿದೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಅಪಘಾತ ಸಂಭವಿಸಿ ಇಬ್ಬರು ಗಾಯಗೊಂಡಿರುವ ಘಟನೆ ಚನ್ನಪಟ್ಟಣ ತಾಲೂಕಿನ ಕಣ್ವ ರಸ್ತೆ ಬಳಿ ನಡೆದಿತ್ತು. ಎಕ್ಸ್‌ಪ್ರೆಸ್‌ವೇನಲ್ಲಿ ಬ್ಯಾರಿಕೇಡ್ ಹಾಕಿ ರಸ್ತೆ ಸ್ವಚ್ಛಗೊಳಿಸುವ ವೇಳೆ ಈ ಅಪಘಾತ ಸಂಭವಿಸಿತ್ತು.
ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಬ್ಯಾರಿಕೇಡ್ ಇದೆ ಎಂದು ದಿಢೀರ್ ಬ್ರೇಕ್ ಹಾಕಿ ನಿಂತಿದೆ. ಈ ವೇಳೆ ಹಿಂಬದಿಯಿಂದ ಬಂದ ಮತ್ತೊಂದು ಕಾರು ಮುಂದೆ ನಿಂತಿದ್ದ ಕಾರಿಗೆ ರಭಸದಿಂದ ಡಿಕ್ಕಿ ಹೊಡೆದಿದೆ. ಇನ್ನು ಡಿಕ್ಕಿಯಾದ ರಭಸಕ್ಕೆ ಮುಂಬದಿ ಕಾರಿನ ಕೆಳಗೆ ನುಗ್ಗಿ ಸಂಪೂರ್ಣ ಜಖಂಗೊಂಡಿತ್ತು.
ಈ ವೇಳೆ ಅದೃಷ್ಟವಾಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿರಲಿಲ್ಲ. ಕಾರಿನಲ್ಲಿದ್ದ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಸ್ಥಳಿಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಚನ್ನಪಟ್ಟಣ ಸಂಚಾರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು. ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಸ್ಪೀಡ್ ಲಿಮಿಟ್ ಇಲ್ಲದ ಕಾರಣ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಲೇ ಇದ್ದವು.
ಆದರೆ, ಇದೀಗ ಹೆದ್ದಾರಿಯಲ್ಲಿ ಅಪಘಾತಗಳನ್ನು ನಿಯಂತ್ರಿಸಲು ಕ್ಯಾಮೆರಾಗಳನ್ನು ಅಳವಡಿಕೆ ಮಾಡಲಾಗಿದೆ. ಇವುಗಳಿಂದ ವಾಹನಗಳ ವೇಗದ ಮಿತಿ ಮತ್ತು ಸಮಯ ರೆಕಾರ್ಡ್ ಆಗಲಿದ್ದು, ಆಗ ದಂಡ ವಿದಿಸಲಾಗುತ್ಅತದೆ. ಅತಿ ವೇಗದ ಚಾಲನೆಯನ್ನು ನಿಭಾಯಿಸಲು ಪೊಲೀಸ್ ಇಲಾಖೆಯು ಹೆದ್ದಾರಿಯಲ್ಲಿ ಕೃತಕ ಬುದ್ಧಿಮತ್ತೆ (AI) ಆಧಾರಿತ ಕ್ಯಾಮೆರಾಗಳನ್ನು ಅಳವಡಿಕೆ ಮಾಡಿದೆ. ಇದರಿಂದ ಈ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಕೂಡ ಇದೀಗ ಕಡಿಮೆ ಆದಂತಾಗಿದೆ.












Click it and Unblock the Notifications