ಸ್ವಾಮೀಜಿಗೆ ಏಕವಚನ ಬಳಕೆ; ಮಾಧುಸ್ವಾಮಿ ರಾಜೀನಾಮೆಗೆ ಆಗ್ರಹ
ದಾವಣಗೆರೆ, ನವೆಂಬರ್ 19: ಕನಕ ಶಾಖಾ ಮಠದ ಈಶ್ವರಾನಂದ ಸ್ವಾಮೀಜಿ ಅವರನ್ನು ಏಕವಚನದಲ್ಲಿ ಸಂಬೋಧಿಸಿದ ಕಾನೂನು ಮತ್ತು ಸಂಸದೀಯ ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಜಿಲ್ಲಾ ಕುರುಬ ಸಂಘದ ಪದಾಧಿಕಾರಿಗಳು ಆಗ್ರಹಿಸಿದ್ದಾರೆ.
ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಜಿಲ್ಲಾ ಕುರುಬರ ಸಂಘದ ಸಂಘಟನಾ ಕಾರ್ಯದರ್ಶಿ ರಾಜಕುಮಾರ್ ಒತ್ತಾಯಿಸಿದ್ದಾರೆ. ಹುಳಿಯಾರ್ ನ ಕನಕ ವೃತ್ತದ ನಾಮಫಲಕ ತೆರವುಗೊಳಿಸಿದ ಹಿನ್ನೆಲೆ ಹಾಲಮತ ಸಮಾಜದ ಈಶ್ವರಾನಂದ ಸ್ವಾಮೀಜಿ ನೇತೃತ್ವದಲ್ಲಿ ಶಾಂತಿ ಸಭೆ ಆಯೋಜಿಸಲಾಗಿತ್ತು. ಸಚಿವರು ಈ ಸಭೆಯಲ್ಲಿ ಶ್ರೀಗಳನ್ನು ಏಕವಚನದಲ್ಲಿ ಸಂಬೋಧಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಕೂಡಲೇ ಮಾಧುಸ್ವಾಮಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಬೇಕು. ಸಿಎಂ ಬಿ.ಎಸ್. ಯಡಿಯೂರಪ್ಪ ಮಾಧುಸ್ವಾಮಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು. ತಪ್ಪಿದಲ್ಲಿ ಅವರು ಭಾಗವಹಿಸುವ ಎಲ್ಲ ಸಭೆಗೂ ಕಪ್ಪು ಬಾವುಟ ಪ್ರದರ್ಶಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.












Click it and Unblock the Notifications