Legislative council election 2024: ದಾವಣಗೆರೆ ವಿಧಾನ ಪರಿಷತ್ ಕ್ಷೇತ್ರಗಳ ಪರಿಚಯ
ದಾವಣಗೆರೆ, ಮೇ. 03 : ಭಾರತೀಯ ಚುನಾವಣಾ ಆಯೋಗವು ವಿಧಾನ ಪರಿಷತ್ತಿನ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಿದೆ. ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3 ರಂದು ಚುನಾವಣೆ ನಡೆಯಲಿದೆ. ದಾವಣಗೆರೆ ಜಿಲ್ಲೆಯಲ್ಲಿ ಎರಡು ಶಿಕ್ಷಕರ ಕ್ಷೇತ್ರ, ಒಂದು ಪದವೀಧರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದೆ.
ಚುನಾವಣೆ ಘೊಷನೆಯಾಗುತ್ತಿದ್ದಂತೆ, ದಾವಣಗೆರೆ ಜಿಲ್ಲೆ ಎರಡು ಶಿಕ್ಷಕರ ಕ್ಷೇತ್ರ ಹಾಗೂ ಒಂದು ಪದವೀಧರರ ಕ್ಷೇತ್ರದ ವ್ಯಾಪ್ತಿಯನ್ನು ಹೊಂದಿದ್ದು ಜೂನ್ 3 ರಂದು ಮತದಾನ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಸಹಾಯಕ ಚುನಾವಣಾಧಿಕಾರಿ ಡಾ. ವೆಂಕಟೇಶ್ ಎಂ.ವಿ ಮಾಹಿತಿ ನೀಡಿದ್ದಾರೆ.

ಜೂನ್ 21 ಕ್ಕೆ ವಿಧಾನ ಪರಿಷತ್ತಿನ 3 ಪದವೀಧರರ ಹಾಗೂ 3 ಶಿಕ್ಷಕರ ಕ್ಷೇತ್ರದ ಸ್ಥಾನಗಳ ಅವಧಿ ಮುಕ್ತಾಯವಾಗುವುದರಿಂದ ದ್ವೈವಾರ್ಷಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಮೇ 9 ರಂದು ಅಧಿಸೂಚನೆ ಪ್ರಕಟವಾಗಲಿದ್ದು, ಮೇ 16 ರ ವರೆಗೆ ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನವಾಗಿರುತ್ತದೆ.
ಮೇ 17 ರಂದು ನಾಮಪತ್ರಗಳ ಪರಿಶೀಲನೆ, ಮೇ 20 ರಂದು ನಾಮಪತ್ರಗಳ ವಾಪಸ್ ಪಡೆಯಲು ಕೊನೆಯ ದಿನವಾಗಿರುತ್ತದೆ. ಜೂನ್ 3 ರಂದು ಬೆಳಗ್ಗೆ 8 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತ ಎಣಿಕೆಯು ಜೂನ್ 6 ರಂದು ನಡೆಯಲಿದ್ದು. ಜೂನ್ 12 ರವರೆಗೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ.
ವಿಧಾನ ಪರಿಷತ್ ಚುನಾವಣಾ ವೇಳಾಪಟ್ಟಿ ಪ್ರಕಟವಾಗಿರುವುದರಿಂದ ನೀತಿಸಂಹಿತೆ ಜಾರಿಯಲ್ಲಿರುತ್ತದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು 3 ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಕರ್ನಾಟಕ ನೈಋತ್ಯ ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಸೇರಲಿವೆ.
ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಚಿತ್ರದುರ್ಗ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕುಗಳು ಸೇರಲಿವೆ.
ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರದ ವ್ಯಾಪ್ತಿಯಲ್ಲಿ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳು ಹಾಗೂ ದಾವಣಗೆರೆ ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ನ್ಯಾಮತಿ ತಾಲ್ಲೂಕುಗಳು ಬರಲಿವೆ.
ರಾಜ್ಯ ವಿಧಾನ ಪರಿಷತ್‌ನ ಮೂರು ಪದವೀಧರ ಕ್ಷೇತ್ರಗಳು ಮತ್ತು ಮೂರು ಶಿಕ್ಷಕರ ಕ್ಷೇತ್ರಗಳ ಸದಸ್ಯರ ಅಧಿಕಾರಾವಧಿ ಜೂನ್ 21 ರಂದು ಮುಗಿಯಲಿದ್ದು, ಅವರು ನಿವೃತ್ತರಾಗುತ್ತಿದ್ದಾರೆ. ಕರ್ನಾಟಕ ಈಶಾನ್ಯ ಪದವೀಧರ ಕ್ಷೇತ್ರದ ಡಾ.ಚಂದ್ರಶೇಖರ ಬಿ ಪಾಟೀಲ್, ಕರ್ನಾಟಕ ನೈಋತ್ಯ ಪದವೀಧರ ಕ್ಷೇತ್ರದ ಆಯನೂರು ಮಂಜುನಾಥ್, ಬೆಂಗಳೂರು ಪದವೀಧರ ಕ್ಷೇತ್ರದ ಎ ದೇವೇಗೌಡ, ಕರ್ನಾಟಕ ಆಗ್ನೇಯ ಶಿಕ್ಷಕರ ಕ್ಷೇತ್ರದ ಡಾ.ವೈ.ಎ.ನಾರಾಯಣಸ್ವಾಮಿ, ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರು ನಿವೃತ್ತರಾಗುತ್ತಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications