ಸೆಪ್ಟೆಂಬರ್ 20ರಂದು ದಾವಣಗೆರೆಯಲ್ಲಿ ಮದ್ಯ ಮಾರಟ ನಿಷೇಧ: ಕಾರಣ ತಿಳಿಯಿರಿ
ದಾವಣಗೆರೆ, ಸೆಪ್ಟೆಂಬರ್ 19: ವಿಶೇಷ ಕಾರ್ಯಕ್ರಮಗಳು, ಕೆಲ ಹಬ್ಬಗಳ ದಿನದಂದು ಮುಂಜಾಗ್ರತಾ ಕ್ರಮವಾಗಿ ಬಾರ್‌ಗಳನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗುತ್ತದೆ. ಹಾಗೆಯೇ ಇದೀಗ ದಾವಣಗೆರೆ ಜಿಲ್ಲೆಯಲ್ಲಿ ಸೆಪ್ಟೆಂಬರ್ 20ರ ಶನಿವಾರದಂದು ಮದ್ಯ ಮಾರಾಟವನ್ನು ನಿಷೇಧಿಸಲಾಗಿದೆ. ಹಾಗಾದ್ರೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಗಣೇಶ ಹಬ್ಬವನ್ನು ದೇಶಾದ್ಯಂತ ಆಚರಣೆ ಮಾಡುತ್ತಿದ್ದಾರೆ. ಆದರೆ, ಮೆರವಣಿಗೆ ದಿನಾಂಕಗಳು ಒಂದೇ ದಿನ ಇರುವುದಿಲ್ಲ. ಈಗಾಗಲೇ ಹಲವೆಡೆ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆಗಳು ಮುಗಿದಿದ್ದು, ಕೆಲವೆಡೆ ಯಾವುದೇ ಅಹಿತಕರ ನಡೆಯದಂತೆ ಶಾಂತಿಯಿಂದ ಮೆರವಣಿಗೆಗಳು ನಡೆದಿವೆ. ಇನ್ನೂ ಕೆಲವು ಕಡೆಗಳಲ್ಲಿ ಗಲಾಟೆಗಳು ನಡೆದಿವೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ಇದೀಗ ಮುಂದಿನ ದಿನಗಳಲ್ಲಿ ಇರುವ ಗಣೇಶ ವಿಸರ್ಜನೆ ಮೆರವಣಿಗೆಗಳಿಗೆ ಸೂಕ್ತ ಭದ್ರತೆಯನ್ನು ಪೊಲೀಸ್ ಇಲಾಖೆಯಿಂದ ಕೈಗೊಳ್ಳಲಾಗುತ್ತಿದೆ.

ಯಾವುದೇ ಅನಾಹುತಗಳು ಸಂಭವಿಸಬಾರದು ಎನ್ನುವ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತಿದೆ. ಹಾಗೆಯೇ ಇದೀಗ ದಾವಣಗೆರೆ ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರತಿಷ್ಠಾಪನೆ ಮಾಡಿರುವ ಹಿಂದೂ ಮಹಾಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆಯು ಸೆಪ್ಟೆಂಬರ್ 20ರಂದು ನಡೆಯಲಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ಹಾಗೂ ಕಾನೂನು ಸುವ್ಯವಸ್ಥೆ ಕಾಯ್ದುಕೊಳ್ಳುವ ಉದ್ದೇಶದಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೆಳಗ್ಗೆ 6ರಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶ ಹೊರಡಿಸಿದ್ದಾರೆ. ಯಾಕಂದ್ರೆ, ಕೆಲವರು ಮದ್ಯ ಸೇವನೆ ಮಾಡಿ ಗಲಾಟೆ ಮಾಡಬಹುದು ಎನ್ನುವ ಕಾರಣದಿಂದ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎನ್ನಲಾಗುತ್ತಿದೆ.
ಬಹುತೇಕ ಕಡೆಗಳಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆಗಳು ಮುಗಿದಿದ್ದು, ಕೆಲವೆಡೆ ಇನ್ನೂ ಬಾಕಿ ಇವೆ. ಹಾಗೆಯೇ ಶನಿವಾರ ದಾವಣಗೆರೆಯಲ್ಲಿ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಇದ್ದು, ಈ ಹಿನ್ನೆಲೆ ನಗರದಲ್ಲಿ ಪೊಲೀಸರು ಭಾರೀ ಬಿಗಿ ಭದ್ರತೆಯನ್ನು ಕೈಗೊಂಡಿದ್ದಾರೆ. ಅಹಿತಕರ ಘಟನೆಗಳು ನಡೆಯಬಾರದು ಎನ್ನುವ ದೃಷ್ಟಿಯಿಂದ ಈ ದಿನ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ಬಂದ್ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಈಗಾಗಲೇ ಪಕ್ಕದ ಜಿಲ್ಲೆ ಚಿತ್ರದುರ್ಗದಲ್ಲೂ ಹಿಂದೂ ಮಹಾಗಣಪತಿ ವಿಸರ್ಜನೆ ಮೆರವಣಿಗೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ. ಬರೀ ಚಿತ್ರದುರ್ಗ ಅಷ್ಟೇ ಅಲ್ಲದೆ, ಅಕ್ಕಪಕ್ಕದ ಜಿಲ್ಲೆಗಳಿಂದಲೂ ಸಹ ಅಪಾರ ಸಂಖ್ಯೆಯಲ್ಲಿ ಜನರು ಬಂದು ಇಲ್ಲಿನ ಡಿಜೆಗೆ ಹೆಜ್ಜೆ ಹಾಕಿದರು. ಜೊತೆಗೆ ಯುವಕ, ಯುವತಿಯರು ಸಹ ಡಿಜೆ ಸೌಂಡ್‌ಗೆ ಹೆಜ್ಜೆ ಹಾಕಿ ಗಮನ ಸೆಳೆದರು.












Click it and Unblock the Notifications