ಲಾಕ್ ಡೌನ್ ಹಿನ್ನೆಲೆ: ಬೆಂಗಳೂರಿನಿಂದ ದಾವಣಗೆರೆಗೆ ಬಂದಿರುವ ಜನರೆಷ್ಟು?
ದಾವಣಗೆರೆ, ಜುಲೈ 15: ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ರಾಜ್ಯ ಸರ್ಕಾರ ಬೆಂಗಳೂರಿನಲ್ಲಿ ಎರಡನೇ ಅವಧಿಗೆ ಲಾಕ್‌ಡೌನ್ ಜಾರಿಗೊಳಿಸುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿಯಿಂದ ಎರಡು ದಿನಗಳ ಅವಧಿಯಲ್ಲಿ ಸುಮಾರು ಒಂದೂವರೆ ಸಾವಿರ ಜನ ದಾವಣಗೆರೆ ಜಿಲ್ಲೆಗೆ ಬಂದಿದ್ದಾರೆ.
Recommended Video
ಮಂಗಳವಾರ ರಾತ್ರಿಯಿಂದ ಬೆಂಗಳೂರು ನಗರ ಲಾಕ್‌ಡೌನ್ ಆಗುತ್ತಿರುವ ಸುದ್ದಿ ತಿಳಿಯುತ್ತಿದ್ದಂತೆ ನೂರಾರು ಕೂಲಿ ಕಾರ್ಮಿಕರು, ಜನಸಾಮಾನ್ಯರು ಮೂರು ದಿನಗಳಿಂದ ತಮ್ಮ ಊರಿನತ್ತ ಮುಖ ಮಾಡಿದ್ದಾರೆ. ರಾಜಧಾನಿಯಲ್ಲಿ ಕೋವಿಡ್ ನ ತೀವ್ರತೆಯಿಂದ ಆತಂಕಕ್ಕೊಳಗಾಗಿ ಹಲವರು ಕುಟುಂಬ ಸಮೇತ ಬಸ್ ಹಾಗೂ ಖಾಸಗಿ ವಾಹನಗಳಲ್ಲೂ ಜಿಲ್ಲೆಗೆ ಮರಳುತ್ತಿದ್ದಾರೆ.
'ಲಾಕ್‌ಡೌನ್ ಹಿನ್ನೆಲೆಯಲ್ಲಿ ಜನ ಊರಿಗೆ ಬರುತ್ತಿದ್ದಾರೆ. ಹೀಗಾಗಿ 50 ಬಸ್‌ಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು. ಸೋಮವಾರ ಬೆಂಗಳೂರಿನಿಂದ 34 ಬಸ್‌ಗಳಲ್ಲಿ ಸುಮಾರು ಒಂದು ಸಾವಿರ ಜನ ದಾವಣಗೆರೆಗೆ ಬಂದಿದ್ದರು.'

'ಮಂಗಳವಾರ ಬೆಳಿಗ್ಗೆಯೂ 20 ಬಸ್‌ಗಳನ್ನು ಬೆಂಗಳೂರಿಗೆ ಕಳುಹಿಸಿಕೊಡಲಾಗಿದೆ. ಸಂಜೆ 4 ಗಂಟೆ ಹೊತ್ತಿಗೆ 10 ಬಸ್‌ಗಳಲ್ಲಿ ಸುಮಾರು 300 ಜನ ಜಿಲ್ಲೆಗೆ ಬಂದಿದ್ದಾರೆ. ಈಗಾಗಲೇ ಇನ್ನೂ 10 ಬಸ್‌ಗಳಲ್ಲಿ ಜನ ಬೆಂಗಳೂರಿನಿಂದ ಹೊರಟಿದ್ದಾರೆ' ಎಂದು ಕೆ.ಎಸ್.ಆರ್.ಟಿ.ಸಿ. ದಾವಣಗೆರೆ ವಿಭಾಗೀಯ ನಿಯಂತ್ರಣಾಧಿಕಾರಿ ಸಿದ್ದೇಶ್ವರ ಹೆಬ್ಬಾಳ್ ಮಾಹಿತಿ ನೀಡಿದರು.
'ಲಾಕ್‌ಡೌನ್ ಜಾರಿಗೊಳ್ಳುತ್ತಿರುವುದರಿಂದ ನಮ್ಮ ವಿಭಾಗದ ಎಲ್ಲಾ ಬಸ್‌ಗಳನ್ನೂ ರಾತ್ರಿ 8 ಗಂಟೆಯೊಳಗೆ ಬೆಂಗಳೂರಿನಿಂದ ಜಿಲ್ಲೆಯತ್ತ ಹೊರಡಿಸುವಂತೆ ಈಗಾಗಲೇ ಸೂಚಿಸಿದ್ದೇವೆ. ಸೋಮವಾರಕ್ಕೆ ಹೋಲಿಸಿದರೆ ಮಂಗಳವಾರ ಸ್ವಲ್ಪ ಕಡಿಮೆ ಜನರಿದ್ದರು. ರಾತ್ರಿ ಹೊತ್ತು ಜಿಲ್ಲೆಗೆ ಬರಲು ಜನರಿಲ್ಲದಿದ್ದರೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ಟ್ರಿಪ್ ಹೊಡೆಯುವಂತೆಯೂ ಸೂಚಿಸಿದ್ದೇವೆ' ಎಂದು ಸಿದ್ದೇಶ್ವರ ಹೆಬ್ಬಾಳ್ ಹೇಳಿದರು.
'ದಾವಣಗೆರೆ ಜಿಲ್ಲೆಯಲ್ಲೂ ಲಾಕ್‌ಡೌನ್ ಜಾರಿಗೊಳ್ಳುವ ಸಾಧ್ಯತೆ ಇದೆ ಎಂಬ ಆತಂಕದಿಂದ ಎರಡು ದಿನಗಳಿಂದ ಜನ ನಗರಕ್ಕೆ ಬಂದು ಅಗತ್ಯ ವಸ್ತುಗಳನ್ನು ಖರೀದಿಸಿ ಊರಿಗೆ ವಾಪಸ್ಸಾಗುತ್ತಿದ್ದಾರೆ. ಕೊರೊನಾ ವೈರಸ್ ಹಿನ್ನೆಲೆಯಲ್ಲಿ 360 ಬಸ್‌ಗಳ ಪೈಕಿ 120 ಬಸ್‌ಗಳು ಮಾತ್ರ ಓಡಿಸುತ್ತಿದ್ದೆವು. ಜನ ಸಂಚಾರ ಹೆಚ್ಚಿದ್ದರಿಂದ ಸೋಮವಾರ ಹಾಗೂ ಮಂಗಳವಾರ 250 ಬಸ್‌ಗಳನ್ನು ಓಡಿಸಿದ್ದೇವೆ' ಎಂದು ಮಾಹಿತಿ ನೀಡಿದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications