ದಾವಣಗೆರೆ; ಜೂ.28ರಿಂದ ಲಾಕ್‌ಡೌನ್‌ನಲ್ಲಿ ಹಲವು ವಿನಾಯಿತಿ
ದಾವಣಗೆರೆ, ಜೂನ್ 27; ದಾವಣಗೆರೆ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ಪ್ರಮಾಣ ಶೇ 5ರೊಳಗೆ ಬಂದಿರುವುದರಿಂದ ರಾಜ್ಯ ಸರ್ಕಾರ ಜಿಲ್ಲೆಯನ್ನು 'ಎ' ವರ್ಗಕ್ಕೆ ಸೇರಿಸಿದೆ. ಈ ಹಿನ್ನೆಲೆಯಲ್ಲಿ ಲಾಕ್‌ಡೌನ್ ನಿಯಮಗಳಲ್ಲಿ ಹಲವು ವಿನಾಯಿತಿ ನೀಡಲಾಗಿದೆ.
ದಾವಣಗೆರೆ ಜಿಲ್ಲಾಡಳಿತ ಈ ಕುರಿತು ಮಾಹಿತಿ ನೀಡಿದೆ. ಅದರಂತೆ ಎಲ್ಲ ಅಂಗಡಿಗಳು ಹಾಗೂ ಹೋಟೆಲ್ ಜುಲೈ 5ರ ತನಕ ಬೆಳಗ್ಗೆ 6 ರಿಂದ ಸಂಜೆ 5 ಗಂಟೆಯವರೆಗೆ ವಹಿವಾಟು ನಡೆಸಬಹುದು. ಹವಾನಿಯಂತ್ರಿತ ಶಾಪಿಂಗ್ ಕಾಂಪ್ಲೆಕ್ಸ್, ಮಾಲ್‌ಗಳಿಗೆ ಅನುಮತಿ ಇಲ್ಲ.
ಬಸ್‌ಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಗರಿಷ್ಠ ಶೇ50ರ ಸಾಮರ್ಥ್ಯದೊಂದಿಗೆ ಬಸ್ ಸಂಚಾರ ನಡೆಸಬಹುದು. ಪ್ರಯಾಣಿಕರು ಬಸ್‌ಗಳಲ್ಲಿ ನಿಂತು ಪ್ರಯಾಣಿಸಲು ಅವಕಾಶವಿರುವುದಿಲ್ಲ.

ಸರಕು ಸಾಗಾಣಿಕೆ ವಾಹನಗಳ ಸಂಚಾರಕ್ಕೆ ಅವಕಾಶವಿದೆ. ವಾಹನಗಳು ಸರಕುಗಳನ್ನು ರಶೀದಿಯಲ್ಲಿ ನಮೂದಿತ ವಿಳಾಸದ ಅಂಗಡಿ ಮತ್ತು ಗೋದಾಮುಗಳಲ್ಲಿ ಇಳಿಸಲು ಮತ್ತು ತೆಗೆದುಕೊಂಡು ಹೋಗಲು ಮಾತ್ರ ದಿನಪೂರ್ತಿ ಅವಕಾಶ ನೀಡಲಾಗಿದೆ.
ಉತ್ಪಾದಿತ ಘಟಕಗಳು ,ಸಂಸ್ಥೆಗಳು, ಕೈಗಾರಿಕೆಗಳು, ಕೋವಿಡ್ ನಿಯಮಾವಳಿಯ ಮೇಲೆ ಶೇ 50ರಷ್ಟು ಸಿಬ್ಬಂದಿಯೊಂದಿಗೆ ಕಾರ್ಯನಿರ್ವಹಿಸಬಹುದು. ಗಾರ್ಮೆಂಟ್ಸ್‌ಗಳಲ್ಲಿ ಶೇ.30ರ ಸಿಬ್ಬಂದಿಯೊಂದಿಗೆ ಕಾರ್ಯ ನಿರ್ವಹಣೆ ಮಾಡಬೇಕು.
ಹೋಟೆಲ್, ರೆಸ್ಟೋರೆಂಟ್, ಬಾರ್ ಹಾಗೂ ಕ್ಲಬ್‌ಗಳು ಬೆಳಗ್ಗೆ 6 ರಿಂದ ಸಂಜೆ 5 ರವರೆಗೆ ಶೇ 50ರ ಸಾಮರ್ಥ್ಯದಲ್ಲಿ ಗ್ರಾಹಕರಿಗೆ ಸ್ಥಳದಲ್ಲೇ ಸೇವೆ ಸಲ್ಲಿಸಲು ಅನುಮತಿ ನೀಡಲಾಗಿದೆ. ಆದರೆ, ಊಟದ ಜೊತೆಗೆ ಮದ್ಯವನ್ನು ಪೂರೈಸುವಂತಿಲ್ಲ. ಹವಾನಿಯಂತ್ರಿತ ಹೋಟೆಲ್ ಇತ್ಯಾದಿಗಳು ಕಾರ್ಯನಿರ್ವಹಿಸುವಂತಿಲ್ಲ.
ಗರಿಷ್ಠ ಇಬ್ಬರು ಪ್ರಯಾಣಿಕರ ಸಾಮರ್ಥ್ಯದೊಂದಿಗೆ ಆಟೋ ಮತ್ತು ಟ್ಯಾಕ್ಸಿಗಳು ಸಂಚರಿಸಲು ಅನುಮತಿ ಇದೆ. ವಾಕಿಂಗ್ ಮತ್ತು ಜಾಗಿಂಗ್ ಉದ್ದೇಶಕ್ಕಾಗಿ ಮಾತ್ರ ಉದ್ಯಾನವನಗಳನ್ನು ಬೆಳಗ್ಗೆ 5 ರಿಂದ ಸಂಜೆ 6 ರವರೆಗೆ ಮಾತ್ರ ತೆರೆಯಲು ಅನುಮತಿ ಇದೆ. ಆದರೆ, ಗುಂಪು ಚಟುವಟಿಕೆಗಳಿಗೆ ಅವಕಾಶವಿಲ್ಲ.
ಎಲ್ಲ ಸರ್ಕಾರಿ ಮತ್ತು ಖಾಸಗಿ ಕಚೇರಿಗಳಇಗೆ ಸಿಬ್ಬಂದಿಯ ಶೇ50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಘನ ತ್ಯಾಜ್ಯ ವಿಲೇವಾರಿ ಸೇರಿದಂತೆ ಆರೋಗ್ಯ ವಲಯಕ್ಕೆ ಸಂಬಂಧಿಸಿದ ಕೌಶಲ್ಯ ತರಬೇತಿಗಳಿಗೆ ಅನುಮತಿಸಿದೆ. ಕೋವಿಡ್ ಮಾರ್ಗಸೂಚಿಯನ್ವಯ ಹೊರಾಂಗಣ ಚಿತ್ರಿಕರಣಕ್ಕೆ ಹಾಗೂ ಸೀರಿಯಲ್‌ಗಳಿಗೆ ಅವಕಾಶ ಕಲ್ಪಿಸಲಾಗಿದೆ.
ತುರ್ತು ಹಾಗೂ ಅಗತ್ಯ ಸೇವೆಗಳಿಗೆ ಹಿಂದಿನಂತೆಯೇ ಅನುಮತಿ ಇದೆ. ಬಸ್, ರೈಲು ಹಾಗೂ ವಿಮಾನಯಾನಗಳಿಗೆ ಅನುಮತಿ ಇದೆ. ನಿಗದಿಯಾದ ಮದುವೆಗಳು ಹಾಗೂ ಅಂತ್ಯಕ್ರಿಯೆಗಳಿಗೆ ನಿರ್ಬಂಧಿತ ಅನುಮತಿ ಇದೆ.












Click it and Unblock the Notifications