Shamanur Shivashankarappa: ಶಾಮನೂರು ಶಿವಶಂಕರಪ್ಪಗೆ ಬಿಜೆಪಿಯಿಂದ ದುಡ್ಡು ಬಂದಿದ್ದು ನಿಜನಾ?, ಸ್ಪಷ್ಟನೆ ಏನು?
ದಾವಣಗೆರೆ, ಮಾರ್ಚ್, 11: ಇದೀಗ ರಾಜ್ಯದೆಲ್ಲೆಡೆ ಲೋಕಸಭೆ ಸಮರಕ್ಕೆ ಎಲ್ಲಾ ಪಕ್ಷಗಳಿಂದಲೂ ಭರ್ಜರಿ ತಯಾರಿ ನಡೆಯುತ್ತಿದೆ. ಹಾಗೆಯೇ ರಾಜ್ಯ ಸರ್ಕಾರ ಪತನಗೊಳಿಸಲು ಕಾಂಗ್ರೆಸ್ ಶಾಸಕರಿಗೆ ಬಿಜೆಪಿ -ಜೆಡಿಎಸ್ ನಾಯಕರು 55 ಕೋಟಿ ರೂಪಾಯಿ ಆಮಿಷವೊಡ್ಡಿದ್ದರು. ಮಾಜಿ ಸಿಎಂಗಳಾದ ಬಿ.ಎಸ್.ಯಡಿಯೂರಪ್ಪ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಪರ್ಕಸಿದ್ದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಳ್ಳಿ ಹಾಕಿದ್ದಾರೆ. ಆಪರೇಷನ್ ಕಮಲ ಸುಳ್ಳು, ನನ್ನನ್ನು ಯಾರೂ ಭೇಟಿ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮದವರ ಜೊತೆ ಮಾತನಾಡಿದ ಅವರು, ನನ್ನ ಹತ್ತಿರ ಯಾರೂ ಬಂದಿಲ್ಲ. ಡಿ.ಕೆ.ಶಿವಕುಮಾರ್ ಆರೋಪ ಮಾಡಿದ್ದರೆ ಅವರನ್ನೇ ಕೇಳಿ. ಸರ್ಕಾರ ಬೀಳಿಸಲು ನನ್ನ ಸಹಾಯವನ್ನು ಯಾರೂ ಕೇಳಿಲ್ಲ. ಶಿವಕುಮಾರ್ ಹೇಳಿರುವುದು ಸುಳ್ಳು. ಅವರನ್ನೇ ಕೇಳಿ. ದುಡ್ಡಂತೂ ಬಂದಿಲ್ಲ ಎಂದು ಹೇಳಿದರು.

ನನಗೆ ದುಡ್ಡು ಕೊಟ್ಟಿದ್ದರೆ ಎಣಿಸಿಕೊಂಡು ಇಟ್ಟುಕೊಳ್ಳುತ್ತಿದ್ದೆ. ಬಿಜೆಪಿಯವರು, ಜೆಡಿಎಸ್‌ನವರು ಹಾಗೂ ಕಾಂಗ್ರೆಸ್‌ನವರು ಸೇರಿದಂತೆ ಯಾರೂ ಬಂದಿಲ್ಲ. ಹಣದ ಆಮೀಷ ಯಾರೂ ಒಡ್ಡಿಲ್ಲ. ಸರ್ಕಾರ ಪತನಗೊಳಿಸಲು ನನ್ನನ್ನು ಸಂಪರ್ಕಿಸಿದ್ದರು ಎಂಬ ಮಾತು ಹೇಳಿರುವ ಡಿ.ಕೆ.ಶಿವಕುಮಾರ್ ಅವರನ್ನೇ ಕೇಳಿ. ನನ್ನನ್ನು ಏನು ಕೇಳುತ್ತೀರಾ ಎಂದು ಪ್ರಶ್ನಿಸಿದರು.
ರಾಜ್ಯಸಭೆ ಚುನಾವಣೆ ವೇಳೆ ಸಹಾಯ ಮಾಡುವಂತೆ ಕೇಳಿದರು. ದುಡ್ಡು ಕೊಡುತ್ತೇವೆ ಎಂದು ಯಾರೂ ಹೇಳಿಲ್ಲ. ನಾವು ಮತ ಕೇಳಬೇಡಿ, ದುಡ್ಡು ಬೇಕಾದರೆ ನಾವೇ ಸಹಾಯ ಮಾಡುತ್ತೇವೆ ಎಂದು ಹೇಳಿದ್ದೆ. ಆದರೆ ನಮ್ಮ ಮತಗಳನ್ನು ಕೇಳಬೇಡಿ ಎಂದು ಹೇಳಿದ್ದು ನಿಜ. ಆದ್ರೆ, ಹಣದ ಆಮಿಷ ಯಾರೂ ಒಡ್ಡಿಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications