ದಾವಣಗೆರೆ: ಬೆಸ್ಕಾಂ ಸಹಾಯಕ ಇಂಜಿನಿಯರಿಂಗ್ ಲೋಕಾಯುಕ್ತ ಬಲೆಗೆ
ದಾವಣಗೆರೆ, ಮಾರ್ಚ್, 06: ಸಾಮಾನ್ಯವಾಗಿ ಮಾಹಿತಿಯ ಮೇರೆಗೆ ಭ್ರಷ್ಟರನ್ನು ಬಲೆಗೆ ಬೀಳಿಸುವ ಕೆಲಸವನ್ನು ಲೋಕಾಯುಕ್ತ ಮಾಡುತ್ತಲೇ ಇರುತ್ತದೆ ಹಾಗೆಯೇ ಇದೀಗ ರೈತರ ಜಮೀನಿನೊಂದರಲ್ಲಿ ವಿದ್ಯುತ್ ಪರಿವರ್ತಕ ಅಳವಡಿಕೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರಿಂಗ್ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆ ಜಿಲ್ಲೆಯ ಸಂತೆಬೆನ್ನೂರಿನಲ್ಲಿ ನಡೆದಿದೆ.
ಜಮೀನಿನೊಂದರಲ್ಲಿ ವಿದ್ಯುತ್ ಪರಿವರ್ತಕ ಅಳವಡಿಕೆ ಮಾಡಲು ರೈತರ ಬಳಿ 10,000 ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ಇಲ್ಲಿನ ಬೆಸ್ಕಾಂ ಕಚೇರಿಯ ಸಹಾಯಕ ಎಂಜಿನಿಯರಿಂಗ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಸಹಾಯಕ ಇಂಜಿನಿಯರ್ ಅರುಣ್ ಕುಮಾರ್ ವರ್ಷದ ಹಿಂದೆ ಕೆಟ್ಟುಹೋಗಿದ್ದ ವಿದ್ಯುತ್ ಪರಿವರ್ತಕ ಬದಲಾಯಿಸಲು ಮಲ್ಲಾಪುರ ರೈತ ಬಿ.ಎಂ.ಮಂಜುನಾಥ ಅವರ ಬಳಿ ಲಂಚ ಕೊಡುವಂತೆ ಬೇಡಿಕೆ ಇಟ್ಟಿದ್ದರು. ಈ ಕುರಿತು ಮಂಜುನಾಥ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ದೂರಿನ ಮೇರೆಗೆ ಲೋಕಾಯುಕ್ತ ಅಧಿಕಾರಿಗಳು ಇಂದು (ಮಾರ್ಚ್ 29) ಬೆಸ್ಕಾಂ ಕಚೇರಿಗೆ ಭೇಟಿ ನೀಡಿ ಲಂಚ ಪಡೆಯುತ್ತಿದ್ದ ಸಹಾಯಕ ಇಂಜಿನಿಯರಿಂಗ್ ಅನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ಲೋಕಾಯುಕ್ತ ಪೊಲೀಸ್ ನಿರೀಕ್ಷಕರಾದ ಎಚ್.ಗುರಯಬಸವಸ್ವಾಮಿ, ಪಿ.ಸರಳಾ ಹಾಗೂ ಸಿಬ್ಬಂದಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಇತ್ತೀಚೆಗಷ್ಟೇ ದಾವಣಗೆರೆ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ ನಡೆದಿತ್ತು. ಜಿಲ್ಲಾ ಆಹಾರ ಸುರಕ್ಷತಾ ಹಾಗೂ ಗುಣಮಟ್ಟ ಘಟಕದ ಜಿಲ್ಲಾ ಸಾಂಖಿಕ ಅಧಿಕಾರಿ ಡಾ.ಜಿ.ಎಸ್.ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ಲೋಕಾಯುಕ್ತ ಪೊಲೀಸರು ಮಾರ್ಚ್ 06ರಂದು ದಾಳಿ ನಡೆಸಿದ್ದರು.
ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ನಾಗರಾಜು ಅವರ ಮನೆ, ತಂದೆ ಷಣ್ಮುಖಪ್ಪ ಅವರ ನಿವಾಸ, ಫಾರಂಹೌಸ್, ಕಚೇರಿ ಹಾಗೂ ಕುಟುಂಬದ ಕಿಡಿತದಲ್ಲಿರುವ ಸಹಕಾರ ಸಂಘದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಚಿನ್ನಾಭರಣ, ಹಣ ಸೇರಿದಂತೆ ಅಪಾರ ಸಂಪತ್ತು ಪತ್ತೆಯಾಗಿತ್ತು ಎಂದು ತಿಳಿದುಬಂದಿತ್ತು.
ಆದಾಯಕ್ಕಿಂತ ಹೆಚ್ಚು ಸಂಪತ್ತು ಹೊಂದಿದ ಆರೋಪದ ಮೇಲೆ ನಾಗರಾಜು ಅವರಿಗೆ ಸೇರಿದ 5 ಸ್ಥಳಗಳ ಮೇಲೆ ದಾಳಿ ನಡೆದಿದೆ. ಡಿವೈಎಸ್‌ಪಿ, ಎನ್ಸ್‌ಪೆಕ್ಟರ್ ಸೇರಿ ಹಲವು ಸಿಬ್ಬಂದಿ ದಾಳಿ ನಡೆಸಿದ್ದಾರೆ. ಇದೀಗ ದಾಳಿ ಸ್ಥಳಗಳಲ್ಲಿ ಪರಿಶೀಲನೆ ಕಾರ್ಯ ನಡೆಯುತ್ತಿದೆ ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್.ಕೌಲಾಪುರ ಮಾಹಿತಿ ನೀಡಿದ್ದರು.
ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಬೆಂಗಳೂರು, ಕೋಲಾರ, ತುಮಕೂರು, ಕಲಬುರಗಿ, ವಿಜಯಪುರ, ದಾವಣಗೆರೆ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆಸಿತ್ತು. ಬೆಂಗಳೂರಿನ ಡಿಪಿಎಆರ್ ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್ ಇಂಜಿನಿಯರ್ ಹೆಚ್.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿತ್ತು.
* ತುಮಕೂರಿನ ತಾವರಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಪ ಮುಖ್ಯ ವೈದ್ಯಾಧಿಕಾರಿ ಡಾ. ಪಿ. ಜಗದೀಶ್; ಬಾಗಲಕೋಟೆಯ ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗದ ಪ್ರಥಮ ದರ್ಜೆ ಸಹಾಯಕ (ಎಫ್‌ಡಿಎ) ಮಾಳಪ್ಪ ಸಾಬಣ್ಣ ದುರ್ಗದ; ಮತ್ತು ವಿಜಯಪುರದ ವಸತಿ ಮಂಡಳಿಯ ಎಫ್‌ಡಿಎ ಶಿವಾನಂದ ಶಿವ ಶಂಕರ್ ಕೆಂಭಾವಿ ಅವರ ಮೇಲೆ ದಾಳಿ ಸಹ ದಾಳಿ ನಡೆಸಲಾಗಿತ್ತು.











Click it and Unblock the Notifications