M.P.Renukacharya: ಇಂದು ಮಧ್ಯಾಹ್ನದಿಂದಲೇ ಎಂ.ಪಿ.ರೇಣುಕಾಚಾರ್ಯರ ಮೊಬೈಲ್ ಸ್ವಿಚ್ ಆಫ್-ಕಾರಣ ಏನು?
ದಾವಣಗೆರೆ, ಫೆಬ್ರವರಿ, 19: ಸದಾ ಬ್ಯುಸಿಯಾಗಿರುತ್ತಿದ್ದ ಹೊನ್ನಾಳಿ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಇಂದು (ಫೆಬ್ರವರಿ 19) ಮಧ್ಯಾಹ್ನದಿಂದ ಮೊಬೈಲ್ ಸ್ವಿಚ್ ಆಫ್ ಮಾಡುವುದಾಗಿ ಮಾಹಿತಿ ನೀಡಿದ್ದಾರೆ. ಹಾಗಾದರೆ ಇದಕ್ಕೆ ಕಾರಣ ಏನು ನೀಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಈಗಾಗಲೇ ರಾಜ್ಯದೆಲ್ಲೆಡೆ ಲೋಕಾಸಭೆ ಚುನವಾಣೆಗೆ ಸಿದ್ಧತೆಗಳು ಭರ್ಜರಿಯಾಗಿ ನಡೆಯುತ್ತಿದ್ದು, ಈ ವೇಳೆಯೇ ಕೆಲವು ಇರಿಸುಮುರಿಸು, ಮುನಿಸಿನಿಂದ ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಹೋಗುವವರ ಸಂಖ್ಯೆ ಹೆಚ್ಚಿರುತ್ತದೆ. ಆದ್ದರಿಂದ ತಮ್ಮ ಪಕ್ಷದವರನ್ನು ಉಳಿಸಿಕೊಳ್ಳಲು ನಾಯಕರು ಇನ್ನಿಲ್ಲದ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಇನ್ನೂ ಇದೇ ವೇಳೆ ಮಾಜಿ ಶಾಸಕ ಎಂಪಿ ರೇಣುಕಾಚಾರ್ಯ ಅವರ ಇಂದು ಮಧ್ಯಾಹ್ನದಿಂದ ಮೊಬೈಲ್ ಸ್ವಿಚ್ ಆಫ್ ಮಾಡಿರುವುದು ಕೂಡ ಕುತೂಹಲಕ್ಕೆ ಕಾರಣವಾಗಿತ್ತು.

ಪೋಸ್ಟ್ ನಲ್ಲಿ ಏನಿದೆ?: ಇನ್ನು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಎಂ.ಪಿ.ರೇಣುಕಾಚಾರ್ಯರು, ಸಹಕರಿಸುವಂತೆ ಮನವಿ ಮಾಡಿದ್ದಾರೆ. ಹೊನ್ನಾಳಿ -ನ್ಯಾಮತಿ ಅವಳಿ ತಾಲ್ಲೂಕಿನ ಬಂಧುಗಳು, ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಅಭಿಮಾನಿಗಳಲ್ಲಿ ವಿನಂತಿಸಿಕೊಳ್ಳುವುದೇನೆಂದರೆ ಕಳೆದ ಮೂರು ದಿನಗಳಿಂದ ನನ್ನ ಆರೋಗ್ಯದಲ್ಲಿ ವ್ಯತ್ಯಾಸವಾಗಿದೆ. ಆದರೂ ಸಹ ಕ್ಷೇತ್ರದ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಇಂದು ಅನಿವಾರ್ಯ ಪರಿಸ್ಥಿತಿಯ ಕಾರಣ ಚಿಕಿತ್ಸೆಗೆ ಆಸ್ಪತ್ರೆಗೆ ತೆರಳುತ್ತಿದ್ದೇನೆ.
ಈ ದಿನದ ನಿಗದಿತ ಕಾರ್ಯಕ್ರಮಗಳಲ್ಲಿ ನಾನು ಭಾಗವಹಿಸಲು ಸಾಧ್ಯವಾಗುತ್ತಿಲ್ಲ, ನನ್ನ ಪರವಾಗಿ ನನ್ನ ಸಹೋದರ ಎಂ.ಪಿ.ಬಸವರಾಜು ಭಾಗಿಯಾಗುತ್ತಿದ್ದು, ವೈದ್ಯರ ಸಲಹೆ ಮೇರೆಗೆ ಇಂದು ಮಧ್ಯಾಹ್ನದ ನಂತರ ನನ್ನ ದೂರವಾಣಿಯನ್ನು ಸ್ವಿಚ್ ಆಫ್ ಮಾಡಿ ವಿಶ್ರಾಂತಿ ಪಡೆಯಲಿದ್ದೇನೆ ಎಂದು ತಿಳಿಸಿದ್ದಾರೆ.
ಯಾರೂ ಕೂಡ ಅನ್ಯತಾ ಭಾವಿಸಬೇಡಿ, ಮುಂದಿನ ದಿನಗಳಲ್ಲಿ ನಾನು ಕೆಲವು ಗ್ರಾಮದ ಮನೆಗಳಿಗೆ ಭೇಟಿ ನೀಡುತ್ತೇನೆ. ನಿಮ್ಮ ಆಶೀರ್ವಾದ ಹಾರೈಕೆ ಸದಾ ಹೀಗೆ ಇರಲೆಂದು ತಮ್ಮಲ್ಲಿ ಕೇಳಿಕೊಳ್ಳುತ್ತೇನೆ. ಇಂತಿ ನಿಮ್ಮ ಮನೆಯ ಮಗ, ನಿಮ್ಮ ಸೇವಕ ಎಂ.ಪಿ.ರೇಣುಕಾಚಾರ್ಯ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ವಿರುದ್ಧ ಈಶ್ವರಪ್ಪ ಕಿಡಿ: ದೇಶವನ್ನು ವಿಭಜಿಸುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸುತ್ತಿದೆ ಎಂದು ಬಿಜೆಪಿಯ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ಚಿತ್ರದುರ್ಗ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಹುಲ್ ಗಾಂಧಿ ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಆಹ್ವಾನವಿರಲಿಲ್ಲ ಎಂದು ನೀಡಿರುವ ಹೇಳಿಕೆ ತುಂಬಾ ಬೇಸರವಾಗಿದ್ದು, ದೇಶದ ಜನತೆ ಕ್ಷಮೆ ಕೇಳಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದರು.
ರಾಮ ಮಂದಿರದ ಕಾರ್ಯಕ್ರಮ ಇಡೀದೇಶವನ್ನು ಒಂದು ಗೂಡಿಸುವ ಕಾರ್ಯಕ್ರಮವಾಗಿದೆ. ಎಲ್ಲಾ ಸಮಾಜದ ಹಿಂದೂ ಶ್ರೀಗಳು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಇಂತಹ ಸುಳ್ಳು ಹೇಳಿಕೆ ನೀಡಿರುವ ರಾಹುಲ್ ಗಾಂಧಿ ದೇಶದ ಜನತೆಯ ಕ್ಷಮೆ ಕೇಳಬೇಕೆಂದು ಒತ್ತಾಯಿಸಿದರು. ಇನ್ನು ನಮ್ಮ ಸರ್ಕಾರದಲ್ಲಿ ಭ್ರಷ್ಠಾಚಾರ ಇಲ್ಲ ಎಂದು ನಾನು ಹೇಳಲ್ಲ, ಇದೆ ಎಂದು ಸಿಎಂ ಹೇಳಿದ್ದಾರೆ. ಆದ್ದರಿಂದ ಹಿಂದಯೇ ವರ್ಗಾವಣೆಯಲ್ಲಿ ಆಗಿದ್ದ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಸಮಿತಿ ರಚಿಸುವಂತೆ ಒತ್ತಾಯಿಸಿದ್ದೆ ಆದರೆ ಸಿಎಂ ರಚಿಸಲಿಲ್ಲ ಎಂದರು.
ಇನ್ನು ರಾಮಂಮದಿರದ ಬಗ್ಗೆ ಮಾತಾಡುವ ಯೋಗ್ಯತೆಯೇ ಸಂತೋಷ್ ಲಾಡ್ ಗಿಲ್ಲ. ವಸತಿ ಶಾಲೆಗಳಲ್ಲಿ ಕೈಗಿ ಮುಗಿದು ಬಾ ಜ್ಞಾನ ದೇಗುಲಕೆ ಎಂಬ ಬರಹ ಬದಲಾಯಿಸಿದ್ದು, ಸರ್ಕಾರದ ಭ್ರಷ್ಟಾಚಾರ ಪ್ರಶ್ನಿಸಬೇಕೆ ಎಂದರು. ಸರ್ಕಾರದಲ್ಲಿ ಸಿಎಂ ಡಿಸಿಎಂ ಹಾಗೂ ಸಚಿವರುಗಳಿಗೆ ಏನು ಆದೇಶ ಮಾಡುತ್ತೇವೆ ಎಂಬುದರ ಬಗ್ಗೆಯೇ ಗೊತ್ತಿಲ್ಲ. ಇಲ್ಲಿ ಒಬ್ಬರಿಗೊಬ್ಬರಿಗೆ ತಾಳ ತಂತಿಯೇ ಇಲ್ಲ. ಸುಳ್ಳು ಹೇಳುವುದರಲ್ಲಿ ರಾಹುಲ್ ಗಾಂಧಿ ಹಾಗು ಸಿದ್ದರಾಮಯ್ಯ ಅವರಿಗೆ ನೊಬೆಲ್ ಪ್ರಶಸ್ತಿ ಕೊಡಬೇಕು ಎಂದು ವ್ಯಂಗ್ಯವಾಡಿದರು.
ಮಾದಾರ ಚನ್ನಯ್ಯ ಸ್ವಾಮೀಜಿಲೋಕಸಭಾ ಚುನಾವಣೆಯ ಚಿತ್ರದುರ್ಗದ ಅಭ್ಯರ್ಥಿಯಾಗುವ ಬಗ್ಗೆ ನನಗೆ ಗೊತ್ತಿಲ್ಲ. ಅವರು ಬಿಜೆಪಿ ಅಭ್ಯರ್ಥಿಯಾದರೆ ನಾನು ಸಂತೋಷ ಪಡುತ್ತೇನೆ. ರಾಜ್ಯದಲ್ಲಿ ಚರ್ಚೆ ಆಗಿಲ್ಲ. ಇನ್ನು ರಾಜಕೀಯ ಪಕ್ಷವೆಂದ ಮೇಲೆ ಸಮಸ್ಯೆಗಳಿರುತ್ತೇವೆ. ನಾನು ನಮ್ಮ ಪಕ್ಷದಲ್ಲಿಯೂ ಇಲ್ಲ ಎಂದು ಹೇಳಲ್ಲ. ಆದರೆ ಅವುಗಳನ್ನು ಸರಿಪಡಿಸಿಕೊಂಡು ಹೆಚ್ಚಿನ ಸ್ಥಾನ ಗೆಲ್ಲುವ ಕಡೆ ಗಮನ ಹರಿಸುತ್ತೇವೆ ಎಂದರು.
ಡಿ.ಕೆ.ಸುರೇಶ್ ಅವರ ಹೇಳಿಕೆಯನ್ನು ನಾನು ಒಪ್ಪಲ್ಲ ಎಂದು ಖರ್ಗೆ, ಸಿದ್ದರಾಮಯ್ಯ ಹೇಳುತ್ತಾರೆ. ಆದರೆ ಡಿಕೆಶಿ ಅವರು ತಮ್ಮನನ್ನು ಬಿಟ್ಟು ಕೊಡಲ್ಲ, ಇದು ಅವರ ಶಿಸ್ತು ಎಂದು ಕಿಡಿಕಾರಿದರು. ಈ ಲೋಕಸಭಾ ಚುನಾವಣೆಯಲ್ಲಿ ಮೋದಿ ಆಡಳಿತ ಹಾಗೂ ರಾಮಮಂದಿರ ಎರಡೂ ಬಿಜೆಪಿಗೆ ಲಾಭವಾಗಲಿವೆ ಎಂದರು.
ನನಗೆ ಆರ್‌ಎಸ್‌ಎಸ್ ತರಬೇತಿ ಆಗಿದೆ. ಸಿದ್ದರಾಮಯ್ಯ ಅವರಿಗೆ ತರಬೇತಿ ಆಗಬೇಕಿದೆ. ದೇಶವನ್ನು ತುಂಡ ಮಾಡಿದ್ದು ಕಾಂಗ್ರೆಸ್, ಜಿನ್ನಾ ಸಂಸ್ಕೃತಿಯನ್ನು ಕಾಂಗ್ರೆಸ್ ಮುಂದುವರೆಸುತ್ತಿದ್ದಾರೆ. ದೇಶ ವಿಭಜನೆ ಮಾಡುವಂತಹ ವ್ಯಕ್ತಿಗಳನ್ನು ಗುಂಡಿಟ್ಟು ಕೊಲ್ಲುವಂತಹ ಕಾನೂನನ್ನು ತನ್ನಿ ಎಂದು ಹೇಳಿದ್ದೆ. ನಾನು ಯಾರನ್ನು ಕಡಿಯಿರಿ ಬಡಿಯಿರಿ ಎಂದು ಹೇಳೇ ಇಲ್ಲ. ಭ್ರಷ್ಟಾಚಾರದಿಂದ ಜೈಲಿಗೊದವರು ಡಿ.ಕೆ. ಶಿವಕುಮಾರ್, ಇನ್ನು ನ್ಯಾಯಾಲಯದಲ್ಲಿ 10 ಸಾವಿರ ದಂಡ ಕಟ್ಟಿದವರು ಸಿದ್ದರಾಮಯ್ಯನವರು. ಕೋರ್ಟ್‌ನಿಂದ ಆದೇಶ ಮಾಡಿಕೊಂಡು ದಂಡ ಕಟ್ಟಿದ್ದ ಸಿಎಂಗಳನ್ಯಾರನ್ನು ನಾವು ನೋಡಿಲ್ಲ ಎಂದು ವ್ಯಂಗ್ಯವಾಡಿದರು.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications