ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದ ಮಾಡಾಳ್ ಮಲ್ಲಿಕಾರ್ಜುನ್: ಸಿದ್ದೇಶ್ವರ ಬಣಕ್ಕೆ ತೀವ್ರ ಮುಖಭಂಗ
ದಾವಣಗೆರೆ, ಫೆಬ್ರವರಿ 07: ಚನ್ನಗಿರಿ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಅವರು ಇಂದು ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ಅಧಿಕೃತವಾಗಿ ಪಕ್ಷಕ್ಕೆ ಮರಳಿ ಸೇರ್ಪಡೆಯಾದರು.
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿಯುವ ಮೂಲಕ ಬಿಜೆಪಿಗೆ ಸೇರ್ಪಡೆಯಾದರು. ಇವರ ಜೊತೆ ಮಾಜಿ ಶಾಸಕ ಗುರುಸಿದ್ದನಗೌಡ, ಆರೈಕೆ ಆಸ್ಪತ್ರೆ ಮುಖ್ಯಸ್ಥ ಡಾ. ರವಿಕುಮಾರ್ ಅವರು ಕಮಲ ಪಡೆ ಸೇರಿದ್ದು, ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರ ಬಣಕ್ಕೆ ತೀವ್ರ ಮುಖಭಂಗವಾಗಿದೆ.

ಬಿಜೆಪಿ ರಾಜ್ಯ ಕಛೇರಿ ಜಗನ್ನಾಥ ಭವನದಲ್ಲಿ ಬಿಜೆಪಿ ಪಕ್ಷಕ್ಕೆ ಮಾಡಾಳ್ ಮಲ್ಲಿಕಾರ್ಜುನ್ ಸೇರ್ಪಡೆಯಾದರಲ್ಲದೇ, ವಿಜಯೇಂದ್ರ ಅವರ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಸಹ ಹಾಜರಿದ್ದರು.
ರಾಜ್ಯಾಧ್ಯಕ್ಷ ಬಿ. ವೈ ವಿಜಯಜೇಂದ್ರ, ಯುವ ಮೋರ್ಚಾ ರಾಜ್ಯಾಧ್ಯಕ್ಷ ಧೀರಜ್ ಮುನಿರಾಜ್ ನೇತೃತ್ವದಲ್ಲಿ ಸೇರ್ಪಡೆಗೊಂಡ ಸಂದರ್ಭದಲ್ಲಿ ಕಾರ್ಯಕರ್ತರು, ಮುಖಂಡರುಗಳೊಂದಿಗೆ ಸಂಭ್ರಮಿಸಲಾಯಿತು. ಈ ಸಂದರ್ಭದಲ್ಲಿ ನೀವು ತೋರಿದ ಈ ಪ್ರೀತಿ ವಿಶ್ವಾಸಕ್ಕೆ ನಾನೆಂದು ಸದಾ ಚಿರಋಣಿ ಎಂದು ವಿಜಯೇಂದ್ರ ಹಾಗೂ ಮಾಡಾಳ್ ವಿರೂಪಾಕ್ಷಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ, ಹಿರಿಯರಾದ ಎಸ್. ಆರ್. ರವೀಂದ್ರನಾಥ್, ಚನ್ನಗಿರಿ ಮಾಜಿ ಶಾಸಕರಾದ ಮಾಡಾಳ್ ವಿರೂಪಾಕ್ಷಪ್ಪ, ಬಸವರಾಜ್ ನಾಯ್ಕ್, ಎಂ. ಪಿ. ರೇಣುಕಾಚಾರ್ಯ, ಗುರುಸಿದ್ದನಗೌಡರು, ಆರೈಕೆ ಆಸ್ಪತ್ರೆಯ ಮುಖ್ಯಸ್ಥ ಡಾ. ರವಿಕುಮಾರ್ ಸೇರಿದಂತೆ ಹಲವು ಮುಖಂಡರು ಹಾಜರಿದ್ದರು.
ಚನ್ನಗಿರಿ ಬಿಜೆಪಿಗೆ ಮತ್ತೆ ಬಲ
ಚನ್ನಗಿರಿ ಕ್ಷೇತ್ರದಲ್ಲಿ ಬಿಜೆಪಿ ಭದ್ರವಾಗಿ ಬಲವಾಗಿ ಬೇರೂರುವಂತೆ ಮಾಡಿದ್ದು ಮಾಡಾಳ್ ವಿರೂಪಾಕ್ಷಪ್ಪ. ಶಾಸಕರಾಗಿ ಕ್ಷೇತ್ರದಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳು ಶ್ರೀರಕ್ಷೆಯಾಗಿದ್ದವು. ಮಾಡಾಳ್ ವಿರೂಪಾಕ್ಷಪ್ಪ ಅಂದರೆ ಬಿಜೆಪಿಯ ಅಜಾತಶತ್ರು. ಪಕ್ಷದ ಮುಖಂಡರು, ಕಾರ್ಯಕರ್ತರನ್ನು ಒಟ್ಟುಗೂಡಿಸಿಕೊಂಡು ಹೋಗುತ್ತಿದ್ದ ಮಾಡಾಳ್ ವಿರೂಪಾಕ್ಷಪ್ಪರ ಕೆಲಸಗಳಿಗೆ ಅವರೇ ಸಾಟಿ. ಇವರ ಅವಧಿಯಲ್ಲಿ ಹೆಚ್ಚಾಗಿ ಚನ್ನಗಿರಿ ಅಭಿವೃದ್ಧಿ ಆಗಿದ್ದು ಎಂಬ ಮಾತೂ ಕೇಳಿ ಬರುತ್ತಿದ್ದವು. ಈಗ ಮಾಡಾಳ್ ಮಲ್ಲಿಕಾರ್ಜುನ್ ಬಿಜೆಪಿ ಸೇರ್ಪಡೆಯಾಗಿರುವುದು ಬಿಜೆಪಿಗೆ ಬಲ ಬಂದಿದೆ.

ದಾವಣಗೆರೆ ಜಿಲ್ಲೆ ಬಿಜೆಪಿ ಭದ್ರಕೋಟೆ ಎಂಬುದರಲ್ಲಿ ಎರಡು ಮಾತಿರಲಿಲ್ಲ. ಕಳೆದ ಚುನಾವಣೆಯಲ್ಲಿ ಏಳು ಕ್ಷೇತ್ರಗಳ ಪೈಕಿ ಐದರಲ್ಲಿ ಜಯಗಳಿಸಿದ್ದ ಕೇಸರಿ ಪಡೆ ಸಂಪೂರ್ಣವಾಗಿ ನೆಲಕಚ್ಚಲು ಕಾರಣ ಏನು ಎಂಬುದು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತಾಗಿತ್ತು. ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಜಿಲ್ಲೆಯ ಹೆಚ್ಚು ಕ್ಷೇತ್ರಗಳಲ್ಲಿ ಪ್ರಚಾರ ಮಾಡದಿರುವುದು ಬಿಜೆಪಿ ಭಾರೀ ಹಿನ್ನೆಡೆ ತಂದಿತ್ತು. ಚನ್ನಗಿರಿ ಕ್ಷೇತ್ರವೂ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಿತ್ತು. ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಪಡೆದ ಮತ ಹಾಗೂ ಮಾಡಾಳ್ ಮಲ್ಲಿಕಾರ್ಜುನ್ ಪಡೆದ ಮತಗಳು ಬಿಜೆಪಿ ಪಕ್ಷಕ್ಕೆ ಬಿದ್ದಿದ್ದರೆ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಕಷ್ಟವಾಗಿತ್ತು.
ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಮಾಡಾಳ್ ಮಲ್ಲಿಕಾರ್ಜುನ್ ಗೆಲ್ಲುವ ಕುದುರೆ ಎನಿಸಿಕೊಂಡಿದ್ದರು. ಆದ್ರೆ, ಫಲಿತಾಂಶ ಕಾಂಗ್ರೆಸ್ ಪರ ಬಂದಿತ್ತು. ಕಾಂಗ್ರೆಸ್ ಅಭ್ಯರ್ಥಿ ಶಿವಗಂಗಾ ಬಸವರಾಜ್ ಗೆದ್ದು ಬಂದರು. ಆದ್ರೆ, ಬಿಜೆಪಿ ಇಲ್ಲಿ ಮೂರನೇ ಸ್ಥಾನಕ್ಕೆ ತಳ್ಳಿದಾಗಲೇ ಮಾಡಾಳ್ ವಿರೂಪಾಕ್ಷಪ್ಪರ ಬಲ, ವರ್ಚಸ್ಸು ಗೊತ್ತಾಗಿದ್ದು. 2013ರಲ್ಲಿ ಕೆಜೆಪಿಯಿಂದ ಕಣಕ್ಕಿಳಿದಿದ್ದ ಮಾಡಾಳ್ ವಿರೂಪಾಕ್ಷಪ್ಪ ಅವರು ವಡ್ನಾಳ್ ರಾಜಣ್ಣರ ವಿರುದ್ಧ ಸೆಣಸಾಡಿದ್ದರು. ಆಗಲೂ ಇಲ್ಲಿ ಬಿಜೆಪಿ ಗೌಣ ಎಂಬಂತಾಗಿತ್ತು. ಈಗ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಮಾಡಾಳ್ ಮಲ್ಲಿಕಾರ್ಜುನ್ ಬಿಜೆಪಿ ಸೇರ್ಪಡೆಯಿಂದ ಚನ್ನಗಿರಿಯಲ್ಲಿ ಬಿಜೆಪಿ ಮತ್ತಷ್ಟು ಬಲಿಷ್ಠಗೊಳ್ಳಲಿದೆ.
ದಾವಣಗೆರೆಯಲ್ಲಿ ಲೋಕಸಭೆ ಕ್ಷೇತ್ರವನ್ನು ಬಿಜೆಪಿ ಯಾವತ್ತೂ ಕಳೆದುಕೊಂಡಿಲ್ಲ. ಅಂದರೆ ದಾವಣಗೆರೆ ಪ್ರತ್ಯೇಕ ಜಿಲ್ಲೆಯಾದ ಬಳಿಕ ಬಿಜೆಪಿ ಜಯಭೇರಿ ಬಾರಿಸಿದೆ. ಈ ಬಾರಿಯೂ ಗೆಲ್ಲಲೇಬೇಕೆಂಬ ಹಠ ತೊಟ್ಟಿರುವ ಯಡಿಯೂರಪ್ಪ, ವಿಜಯೇಂದ್ರ ಅವರು ಪಕ್ಷದಲ್ಲಿ ಮುನಿಸಿಕೊಂಡಿದ್ದವರನ್ನು ಮತ್ತೆ ಒಂದಾಗಿಸುವ ಕೆಲಸ ಮಾಡಿದ್ದಾರೆ. ಅದರಲ್ಲಿಯೂ ಚನ್ನಗಿರಿಯಲ್ಲಿ ಮಾಡಾಳ್ ಮಲ್ಲಿಕಾರ್ಜುನ್ ಸೇರ್ಪಡೆಯಾಗುತ್ತಿರುವುದು ಒಂದು ಕಾರಣ ಎಂದರೆ ಅತಿಶಯೋಕ್ತಿ ಅಲ್ಲ.
ವಿಜಯೇಂದ್ರ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿ ದಾವಣಗೆರೆಗೆ ಬಂದಾಗಲೂ ಮಾಡಾಳ್ ಮಲ್ಲಿಕಾರ್ಜುನ್ ಅವರು ವಿಜಯೇಂದ್ರ ಅವರ ಜೊತೆ ಕಾಣಿಸಿಕೊಂಡಿದ್ದರು. ಆದ್ರೆ, ಪಕ್ಷದ ಕಚೇರಿಯಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿರಲಿಲ್ಲ. ವಿಜಯೇಂದ್ರ ಅವರಿಗೆ ಅದ್ಧೂರಿ ಸ್ವಾಗತ ಕೋರಿದ್ದರು. ಮಾಜಿ ಸಚಿವ ಎಂ. ಪಿ. ರೇಣುಕಾಚಾರ್ಯರ ಜೊತೆ ಗುರುತಿಸಿಕೊಂಡಿದ್ದ ಮಾಡಾಳ್ ಮಲ್ಲಿಕಾರ್ಜುನ್ ಬಿಜೆಪಿ ಸೇರ್ಪಡೆಯಾಗುವುದು ಖಚಿತ ಎಂದೇ ಹೇಳಲಾಗುತಿತ್ತು. ಮಾಡಾಳ್ ವಿರೂಪಾಕ್ಷಪ್ಪ ಅವರು ಹೆಚ್ಚಾಗಿ ಕಾಣಿಸಿಕೊಳ್ಳದಿದ್ದರೂ ಅವರ ಪುತ್ರ ಮಾಡಾಳ್ ಮಲ್ಲಿಕಾರ್ಜುನ್ ಅವರು ಮುಂಚೂಣಿಯಲ್ಲಿದ್ದರು.
ಎಂ.ಪಿ. ರೇಣುಕಾಚಾರ್ಯ ಗುಂಪಿನಲ್ಲಿ ಸಕ್ರಿಯವಾಗಿದ್ದ ಮಾಡಾಳ್ ಮಲ್ಲಿಕಾರ್ಜುನ್
ಎಂ. ಪಿ. ರೇಣುಕಾಚಾರ್ಯರ ಗುಂಪಿನಲ್ಲಿ ಸಕ್ರಿಯವಾಗಿ ಕಾಣಿಸಿಕೊಂಡಿದ್ದ ಮಾಡಾಳ್ ಮಲ್ಲಿಕಾರ್ಜುನ್ ಹೆಚ್ಚಾಗಿ ಸಕ್ರಿಯರಾಗಿದ್ದರು. ಸಂಸದ ಡಾ. ಜಿ. ಎಂ. ಸಿದ್ದೇಶ್ವರ ಅವರಿಗೆ ಲೋಕಸಭೆ ಚುನಾವಣೆಯಲ್ಲಿ ಯಾವಾಗಲೂ ಚನ್ನಗಿರಿ ಕ್ಷೇತ್ರದ ಮತದಾರರು ಕೈ ಬಿಟ್ಟಿರಲಿಲ್ಲ. ಈ ಬಾರಿ ಮಾಡಾಳ್ ಮಲ್ಲಿಕಾರ್ಜುನ್ ಸಕ್ರಿಯರಾಗದಿದ್ದರೆ ಮತಗಳು ಕಾಂಗ್ರೆಸ್‌ಗೆ ಹೋಗಬಹುದೆನ್ನುವ ಭಯವೂ ಕಾಡುತಿತ್ತು. ಹಾಗಾಗಿ, ಈ ಬಾರಿ ಗೆಲ್ಲಲೇಬೇಕೆಂಬ ಹಠ ತೊಟ್ಟಿರುವ ಬಿಜೆಪಿ ಕಲಿಗಳು ಮಾಡಾಳ್ ಮಲ್ಲಿಕಾರ್ಜುನ್ ಅವರನ್ನು ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಇದು ಚನ್ನಗಿರಿಯ ಬಿಜೆಪಿ ಹಳೆಯ ಹಾಗೂ ಹೊಸಬರಲ್ಲಿ ನವಚೈತನ್ಯ ತಂದಿದೆ. ಮತ್ತೆ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಮಾಡಾಳ್ ಮಲ್ಲಿಕಾರ್ಜುನ್ ಅವರು ಬಂದರೆ ಬಿಜೆಪಿ ಮತ್ತಷ್ಟು ಬಲಿಷ್ಠವಾಗುವ ಜೊತೆಗೆ ಕಾಂಗ್ರೆಸ್ ಗೆ ಠಕ್ಕರ್ ಕೊಡುವ ಲೆಕ್ಕಾಚಾರವೂ ಇದರ ಹಿಂದೆ ಅಡಗಿದೆ.
ವಿಜಯೇಂದ್ರ ಅವರು ಯಡಿಯೂರಪ್ಪ ಅವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡವರನ್ನು ಒಬ್ಬೊಬ್ಬರನ್ನಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುತ್ತಿದ್ದಾರೆ. ಯಾವುದೋ ಕಾರಣಕ್ಕೆ ಪಕ್ಷ ಬಿಟ್ಟು ಹೋದವರನ್ನು ಮರಳಿ ಕರೆತರುವ ಪ್ರಯತ್ನಕ್ಕೆ ಕೈ ಹಾಕಿದ್ದು, ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಗೆದ್ದು ತನ್ನ ಶಕ್ತಿ ಪ್ರದರ್ಶಿಸಬೇಕು, ಯಡಿಯೂರಪ್ಪರ ವರ್ಚಸ್ಸು ಕರ್ನಾಟಕದಲ್ಲಿ ಇದೆ, ರಾಜ್ಯಾಧ್ಯಕ್ಷನ್ನಾಗಿ ಇಷ್ಟೊಂದು ಸೀಟ್ ಗೆಲ್ಲಿಸಿಕೊಂಡು ಬಂದೆ ಎಂದು ಹೈಕಮಾಂಡ್ ಮುಂದೆ ಹೇಳಬಹುದು. ಆಗ ಮತ್ತೆ ವಿಜಯೇಂದ್ರ ಅವರಿಗೆ ಮತ್ತಷ್ಟು ಆನೆ ಬಲ ಬರುವ ಜೊತೆಗೆ ಹೈಕಮಾಂಡ್ ವಿಜಯೇಂದ್ರ ಅವರಿಗೆ ಮತ್ತಷ್ಟು ಅಧಿಕಾರ ನೀಡುವ ಸಾಧ್ಯತೆ ಇದೆ. ಒಟ್ಟಿನಲ್ಲಿ ಚನ್ನಗಿರಿಯಲ್ಲಿ ಮಾಡಾಳ್ ಮಲ್ಲಿಕಾರ್ಜುನ್ ಬಿಜೆಪಿಗೆ ಬಂದಿದ್ದು ಕ್ಷೇತ್ರದ ಜನರಲ್ಲಿ ಸಂಭ್ರಮಕ್ಕೆ ಕಾರಣವಾಗಿದೆ. ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಮಾಡಾಳ್ ಮಲ್ಲಿಕಾರ್ಜುನ್ ಅಭಿಮಾನಿಗಳ ಹರ್ಷೋದ್ಘಾರ ಮುಗಿಲು ಮುಟ್ಟಿದೆ. ಸಂಭ್ರಮವೂ ಕಂಡು ಬರುತ್ತಿದೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications