• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ ಮಹಾನಗರ ಪಾಲಿಕೆ‌ ಮೇಯರ್ ಗೆ ಕೊರೊನಾ ಪಾಸಿಟಿವ್

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಜುಲೈ 25: ದಾವಣಗೆರೆ ಮಹಾನಗರ ಪಾಲಿಕೆ ಮೇಯರ್ ಬಿ.ಜೆ ಅಜಯ್ ಕುಮಾರ್ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಅವರೊಂದಿಗೆ ಪತ್ನಿ, ಪುತ್ರನಿಗೂ ಸೋಂಕು ಕಂಡುಬಂದಿದೆ.

   ಭಾರತದಲ್ಲಿ ಚೀನಾ ವ್ಯವಹಾರ ಇನ್ನು ಮುಂದೆ ಸುಲಭವಲ್ಲ | Oneindia Kannada

   ಜಾಗತಿಕ ವ್ಯಾಕ್ಸಿನ್ ವಾರ್: ಭಾರತವೇ ಯುದ್ಧ ಕೇಂದ್ರ..!

   ಮೊದಲು ಕೆಮ್ಮು ಹಾಗೂ ಸುಸ್ತು ಕಾಣಿಸಿಕೊಂಡಿದ್ದರಿಂದ ಮೇಯರ್ ಅಜಯ್ ಕುಮಾರ್ ಸೆಲ್ಫ್‌ ಕ್ವಾರಂಟೈನ್ ನಲ್ಲಿ ಇದ್ದರು. ನಂತರ ಪರೀಕ್ಷೆಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಮೇಯರ್ ಪ್ರಾಥಮಿಕ ಸಂಪರ್ಕದಲ್ಲಿದ್ದ 50ಕ್ಕೂ ಹೆಚ್ಚು ಜನರಿಗೆ ಆರೋಗ್ಯ ಇಲಾಖೆ ಸಿಬ್ಬಂದಿ ತಪಾಸಣೆ ನಡೆಸಿದ್ದಾರೆ.

   ಕಂಟೈನ್ಮೆಂಟ್ ಝೋನ್ ಮಾಡಿಲ್ಲ ಎಂದು ದಾವಣಗೆರೆಯಲ್ಲಿ ಪಾಲಿಕೆ ಸದಸ್ಯನ ಮೇಲೆ ಹಲ್ಲೆ

   ಈ ಬಗ್ಗೆ ಮಾತನಾಡಿರುವ ಮೇಯರ್ ಬಿ.ಜೆ ಅಜಯ್ ಕುಮಾರ್, "ಕೊರೊನಾ ಸೋಂಕು ಎಲ್ಲೆಲ್ಲೂ ವ್ಯಾಪಿಸುತ್ತಿದೆ. ಆದ್ದರಿಂದ ಜನರು ಎಚ್ಚರಿಕೆಯಿಂದ ಇರಬೇಕು. ಸರ್ಕಾರದ ಮಾರ್ಗದರ್ಶನವನ್ನು ಕಟ್ಟುನಿಟ್ಟಾಗಿ ಪಾಲಿಸಿ. ಅನಗತ್ಯವಾಗಿ ಓಡಾಡಬೇಡಿ. ನನ್ನೊಂದಿಗೆ ಸಂಪರ್ಕದಲ್ಲಿದ್ದ 50 ಮಂದಿಗೆ ತಪಾಸಣೆ ಸಾಗಿದೆ. ಕಳೆದ ಕೆಲ ದಿನಗಳಲ್ಲಿ ನನ್ನ ಜೊತೆ ಸಂಪರ್ಕದಲ್ಲಿದ್ದವರು ಈ ಕೂಡಲೇ ತಪಾಸಣೆ ಮಾಡಿಸಿಕೊಳ್ಳಿ" ಎಂದು ಹೇಳಿದ್ದಾರೆ.

   English summary
   Davangere mayor BJ Ajay Kumar, his wife and son has confirmed coronavirus positive today,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X