ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

5ನೇ ದಿನವೂ ಮುಂದುವರೆದ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜುಲೈ 3: ಶಿಷ್ಯ ವೇತನಕ್ಕಾಗಿ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ನಡೆಸುತ್ತಿರುವ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ ಐದನೇ ದಿನವೂ ಕೂಡ ಮುಂದುವರೆದಿದೆ.

Recommended Video

Goa opens the gates for tourists,ಗೋವಾ ಪ್ರವಾಸಿಗರಿಗೆ ಸಿಹಿಸುದ್ದಿ ನೀಡಿದ ಸರ್ಕಾರ! | Goa | Oneindia Kannada

ಇಂದು ಬೆಳಿಗ್ಗೆ ಧರಣಿ ಸ್ಥಳಕ್ಕೆ ಐಎಂಎ ಅಧ್ಯಕ್ಷರಾದ ಡಾ.ರುದ್ರಮುನಿ ಎ.ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದರು. ಸರ್ಕಾರದ ಮಟ್ಟದಲ್ಲಿ ವಿದ್ಯಾರ್ಥಿಗಳ ಸಮಸ್ಯೆ ನಿವಾರಿಸಲು ಐಎಂಎ ನಿಂದಲೂ ಮನವಿ ಮಾಡಿದ್ದೇವೆ. ಕೆಲ ತಾಂತ್ರಿಕ ಕಾರಣಗಳಿಂದ ವಿದ್ಯಾರ್ಥಿಗಳ ಶಿಷ್ಯವೇತನ ಸ್ಥಗಿತಗೊಂಡಿದೆ ಎಂದರು.

ದಾವಣಗೆರೆ: ಶಿಷ್ಯ ವೇತನಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆದಾವಣಗೆರೆ: ಶಿಷ್ಯ ವೇತನಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ

ಮುಖ್ಯಮಂತ್ರಿಗಳು, ವೈದ್ಯಕೀಯ ಶಿಕ್ಷಣ ಸಚಿವರಿಗೂ ಸಹ ವಿದ್ಯಾರ್ಥಿಗಳ ಕಷ್ಟದ ಬಗ್ಗೆ ಮನವರಿಕೆ ಮಾಡಿದ್ದೇವೆ. ಕೋವಿಡ್ ಆಸ್ಪತ್ರೆಯ ರೋಗಿಗಳಿಗೆ ಯಾವುದೇ ತೊಂದರೆಯಾಗದಂತೆ ವಿದ್ಯಾರ್ಥಿಗಳು ತಮ್ಮ ಕರ್ತವ್ಯ ನಿರ್ವಹಿಸಿ ಹೋರಾಟ ಮಾಡುತ್ತಿದ್ದಾರೆ. ಅವರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ತಿಳಿಸಿದರು.

Davanagere: Protest Of Medical Students Who Continued Even On The 5th Day

ಇಂದು ಪ್ರತಿಭಟನಾ ಸ್ಥಳದ ಸುತ್ತಮುತ್ತ ವಿದ್ಯಾರ್ಥಿಗಳು ಸ್ವಚ್ಚತಾ ಅಭಿಯಾನ ನಡೆಸಿ ಗಮನ ಸೆಳೆದರು. ಕಳೆದ 16 ತಿಂಗಳಿನಿಂದ ಶಿಷ್ಯ ವೇತನಕ್ಕಾಗಿ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಸರ್ಕಾರ ಈ ಕೂಡಲೇ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ಬಿಡುಗಡೆ ಮಾಡಬೇಕೆಂದು ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಸರ್ಕಾರಕ್ಕೆ ಮನವಿ ಮಾಡಿದರು.

English summary
The protest of medical students at Jayadeva circle in Davanagere city for student pay continues for the fifth day.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X