ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕಪ್ಪುಪಟ್ಟಿ ಧರಿಸಿ ಕರ್ತವ್ಯಕ್ಕೆ ಹಾಜರಾದ ವೈದ್ಯಕೀಯ ವಿದ್ಯಾರ್ಥಿಗಳು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ. ಮೇ 6: ಶಿಷ್ಯವೇತನ ನೀಡುವಂತೆ ಒತ್ತಾಯಿಸಿ ದಾವಣಗೆರೆಯಲ್ಲಿ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಕಪ್ಪು ಪಟ್ಟಿ ಧರಿಸಿ ಕೋವಿಡ್ ವಾರ್ಡ್ ಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಕಳೆದೆರಡು ದಿನದ ಹಿಂದಷ್ಟೇ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಕ್ಯಾಂಡಲ್ ಲೈಟ್ ಹಿಡಿದು ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳು, ಇಂದು ಕಪ್ಪು ಪಟ್ಟಿ ಧರಿಸಿ ಸರ್ಕಾರದ ಗಮನ ಸೆಳೆಯಲು ಮುಂದಾಗಿದ್ದಾರೆ. ಕಳೆದ 2019 ರ ಫೆಬ್ರವರಿ ತಿಂಗಳಿನಿಂದ ಮೆರಿಟ್ ಸೀಟ್ ಪಡೆದ ವಿದ್ಯಾರ್ಥಿಗಳ ಶಿಷ್ಯವೇತನ ಪಾವತಿಯಾಗಿಲ್ಲ ಇದರಿಂದಾಗಿ ವಿದ್ಯಾರ್ಥಿಗಳು ಆರ್ಥಿಕ ಸಂಕಷ್ಟದಲ್ಲಿದ್ದಾರೆ.

ಕಾಲೇಜು ಶುಲ್ಕ, ಹಾಸ್ಟೆಲ್ ಶುಲ್ಕ ಪಾವತಿಸಲು ಪರದಾಡುವ ಸ್ಥಿತಿಯಲ್ಲಿದ್ದಾರೆ. ಸರ್ಕಾರ ಈ ಕೂಡಲೇ ಶಿಷ್ಯ ವೇತನ ನೀಡಿದರೆ ನಮ್ಮ ಕಷ್ಟ ನಿವಾರಣೆಯಾಗಲಿದೆ ಎಂದು ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ತಮ್ಮ ಅಳಲು ತೋಡಿಕೊಂಡಿದ್ದಾರೆ.

Medical Students Attending Duty Wearing A Blackbelt In Davanagere

ದಾವಣಗೆರೆ ಜಿಲ್ಲಾ ಆಸ್ಪತ್ರೆಯಲ್ಲಿ 100 ಕ್ಕೂ ಹೆಚ್ಚು ವೈದ್ಯಕೀಯ ವಿದ್ಯಾರ್ಥಿಗಳಿದ್ದಾರೆ. ನಮ್ಮ ಹೋರಾಟ ನಮ್ಮ ಹಕ್ಕಿಗಾಗಿ, ರೋಗಿಗಳ ವಿರುದ್ಧವಲ್ಲ ಎಂಬ ಘೋಷಣೆಯೊಂದಿಗೆ ಕಪ್ಪು ಪಟ್ಟಿ ಧರಿಸಿ ಸೇವೆಗೆ ಹಾಜರಾಗಿದ್ದಾರೆ.

Medical Students Attending Duty Wearing A Blackbelt In Davanagere

ದಾವಣಗೆರೆಯ ಜೆಜೆಎಂ ಮೆಡಿಕಲ್ ಕಾಲೇಜಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಗಳಾಗಿದ್ದೇವೆ. ನಾವು ಮೆರಿಟ್ ನಲ್ಲಿ ಸೀಟ್ ಪಡೆದು ವ್ಯಾಸಂಗ ಮಾಡುತ್ತಿದ್ದೇವೆ. ನಮ್ಮ ಮೆರಿಟ್ ಆಧರಿಸಿ ನಮಗೆ ಶಿಷ್ಯವೇತನ ನೀಡಲಾಗುತ್ತದೆ. ಆದರೆ ಕಳೆದ ಫೆಬ್ರವರಿ ತಿಂಗಳಿನಿಂದ ಶಿಷ್ಯವೇತನವಿಲ್ಲದೇ ನಮ್ಮ ಖರ್ಚು ಭರಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಸರ್ಕಾರ ನಮ್ಮ ಮನವಿಗೆ ಸ್ಪಂದಿಸಬೇಕೆಂದು ಒತ್ತಾಯಿಸಿದ್ದಾರೆ.

English summary
Medical students are wearing black belts and serving in Covid wards, demanding a Scholarship in Davanagere.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X