ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೆಹಲಿಗೆ ಸಿಎಂ ಹೋಗಿದ್ದೇಕೆ? ಸಚಿವ ಭೈರತಿ ಬಸವರಾಜ್ ಪ್ರತಿಕ್ರಿಯೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜುಲೈ 18: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲವೇ ಇಲ್ಲ ಎಂದು ಪುನರುಚ್ಚರಿಸಿರುವ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರು ಸಿಎಂ ಆಗಿ ಯಡಿಯೂರಪ್ಪ ಮುಂದಯವರಿಯಲಿದ್ದಾರೆ. ದೆಹಲಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಕಿಲ್ಲ ಎಂದು ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ''ಪಕ್ಷದ ಹೈಕಮಾಂಡ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ರಾಜ್ಯದ ಅಭಿವೃದ್ಧಿ ಹಾಗೂ ಸ್ಥಿತಿಗತಿಗಳ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ. ಹಾಗೆಂದ ಮಾತ್ರಕ್ಕೆ ಬದಲಾವಣೆ ಮಾಡಲಾಗುತ್ತದೆ,'' ಎಂಬುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

''ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾಧ್ಯಮಗಳಲ್ಲಿ ಚರ್ಚೆಯಾದ ಮಾತ್ರಕ್ಕೆ ನಿಖರ ಅಲ್ಲ. ಸಿಎಂ ಯಡಿಯೂರಪ್ಪ ಅವರು ಖಚಿತವಾಗಿ ವಿಸ್ತರಣೆಯಾಗಲೀ, ಪುನಾರಚನೆ ಬಗ್ಗೆ ಆಗಲಿ ಎಲ್ಲಿಯೂ ಹೇಳಿಲ್ಲ. ಮಾಧ್ಯಮದಲ್ಲಿ ಚರ್ಚೆ ಆದಾಕ್ಷಣ ಆಗಿಬಿಡುತ್ತಾ‌. ಸಿಎಂ ಹೇಳಿದ್ರೆ ಮಾತ್ರ ಅದಕ್ಕೆ ಪುಷ್ಟಿ ಬರುತ್ತೆ,'' ಎಂದು ಭೈರತಿ ಬಸವರಾಜ್ ಹೇಳಿದ್ದಾರೆ.

Minister Byrathi Basavaraj speaks about Delhi visit

Recommended Video

ಕರ್ನಾಟಕದಲ್ಲಿ ಮುಂದುವರಿದ ವರುಣನ ಆರ್ಭಟ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ | Oneindia Kannada

''ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರಲ್ಲದೇ, ದೆಹಲಿಗೆ ಯಾರು ಹೋಗಿ ಬರುತ್ತಿದ್ದಾರೆ. ನನ್ನ ಇಲಾಖೆಗೆ ಸಂಬಂಧಿಸಿದಂತೆ ಕೆಲಸ ಇದ್ದರೆ ದೆಹಲಿಗೆ ಹೋಗಿ ಕೇಂದ್ರ ನಗರಾಭಿವೃದ್ಧಿ ಸಚಿವರನ್ನು ಭೇಟಿ ಮಾಡುತ್ತೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತೇನೆ. ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಡಿ. ನಾನು ಮನೆ ಬಿಟ್ಟು ನಾಲ್ಕೈದು ದಿನ ಆಯ್ತು. ಜಿಲ್ಲಾ ಪ್ರವಾಸದಲ್ಲಿದ್ದೇನೆ. ಇಲಾಖೆಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸುತ್ತಿದ್ದೇವೆ. ಅಭಿವೃದ್ಧಿಗೆ ವೇಗ ನೀಡುವ ಕೆಲಸ ಮಾಡುತ್ತಿದ್ದೇವೆ,'' ಎಂದು ಬಸವರಾಜ್ ತಿಳಿಸಿದರು.

English summary
Urban developemnt Minister Byrathi Basavaraj speaks about his Delhi visit and says no special
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X