• search
  • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆಯಲ್ಲಿ ಮಿಲಿಟರಿ ನಿಯೋಜನೆ ಎಂದ ಸಚಿವ ಈಶ್ವರಪ್ಪ

By ದಾವಣಗೆರೆ ಪ್ರತಿನಿಧಿ
|

ದಾವಣಗೆರೆ, ಮಾರ್ಚ್ 30: ಇಡೀ ದೇಶವೇ ಲಾಕ್ ಡೌನ್ ಆಗಿದೆ, ಆದರೆ ದಾವಣಗೆರೆ ನಗರದಲ್ಲಿ ಜನರ ಓಡಾಟ ನಿಂತಿಲ್ಲ. ಹೀಗಾಗಿ ನಗರದಲ್ಲಿ ಮಿಲಿಟರಿ ನಿಯೋಜನೆ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.

ಕೊರೊನಾ ವೈರಸ್ ನಿಯಂತ್ರಣ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧಿಕಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ನಂತರ ಮಾತನಾಡಿದ ಅವರು, ಸಾರ್ವಜನಿಕರು ಅನವಶ್ಯಕವಾಗಿ ಓಡಾಟ ಮಾಡುತ್ತಿದ್ದಾರೆ. ಇದರಿಂದ ಕೊರೊನಾ ಇನ್ನಷ್ಟು ಹರಡುವ ಸಾಧ್ಯತೆ ಇದೆ. ಹೀಗಾಗಿ ಸಾರ್ವಜನಿಕರ ಓಡಾಟ ನಿಯಂತ್ರಣಕ್ಕೆ ತರಲು ಮಿಲಿಟರಿ ನಿಯೋಜನೆ ಮಾಡಲು ಚಿಂತನೆ ನಡೆದಿದೆ ಎಂದರು.

ಸಾರ್ವಜನಿಕರು ಮನೆಯಿಂದ ಹೊರ ಬಂದರೆ ಕಠಿಣ ಶಿಕ್ಷೆಗೆ ಗುರಿಪಡಿಸಲಾಗುವುದು. ಶೇ.90 ರಷ್ಟು ಜನ ಮನೆಯಲ್ಲಿದ್ದರೇ ಶೇ.10 ಜನ ಮನೆ ಬಿಟ್ಟು ಓಡಾಡುತ್ತಿದ್ದಾರೆ. ಇವರಿಂದಾಗಿ ದಾವಣಗೆರೆ ಜನರಲ್ಲಿ ಆತಂಕ ಮನೆ ಮಾಡಿದೆ ಎಂದರು.

ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಇದ್ದು, ಕಿಟ್ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ನಗರದ ಎಸ್.ಎಸ್ ಆಸ್ಪತ್ರೆ, ಜೆ.ಜೆ.ಎಂ ಆಸ್ಪತ್ರೆ, ಚಿಗಟೇರಿ ಆಸ್ಪತ್ರೆಯನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ ಅಲೆಮಾರಿಗಳ ಸಂಘದ ಸಭೆ ಕರೆದಿದ್ದು, ಅವರಿಗೆಲ್ಲಾ ಆಹಾರ ಕೊಡಿಸುವ ವ್ಯವಸ್ಥೆ ಮಾಡಲಾಗಿದೆ. ಗ್ರಾಮ ಪಂಚಾಯಿತಿಯಲ್ಲಿ ಕೊರೊನಾ ಸೊಂಕು ತಡೆಗಟ್ಟಲು ಗ್ರಾಮ ಪಂಚಾಯಿತಿ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಪೊರ್ಸ್ ರಚಿಸಲಾಗಿದೆ. ಅವರು ನೀಡುವ ವರದಿ ಮೇಲೆ ಅವರಿಗೆ ಹಣ ನೀಡಲು ಜಿಲ್ಲಾ ಪಂಚಾಯತಿ ಸಿಇಓಗೆ ಸೂಚನೆ ನೀಡಲಾಗಿದೆ ಎಂದರು.

English summary
Davanagere District Incharge Minister KS Eshwarappa said, The military will be deployed in Davanagere City.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X