ದಾವಣಗೆರೆ: ಪ್ರಿಯಕರನ ಎದುರೇ ಅಪ್ರಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ
ದಾವಣಗೆರೆ, ಜೂನ್ 6: ಪ್ರಿಯಕರನ ಎದುರಲ್ಲೇ ಅಪ್ರಾಪ್ತ ಯುವತಿ ಮೇಲೆ ಸಾಮಾಹಿಕ ಅತ್ಯಾಚಾರ ನಡೆಸಿರುವ ಪ್ರಕರಣ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ನಡೆದಿದೆ.
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ದುಷ್ಕರ್ಮಿಗಳು ಸೇರಿ ಅಪ್ರಾಪ್ತೆಯ ಪ್ರಿಯಕರನನ್ನೂ ಬಂಧಿಸಿದ್ದಾರೆ. ಚನ್ನಗಿರಿ ತಾಲೂಕಿನ ರಂಗಾಪುರ ಗ್ರಾಮದ ನಿವಾಸಿಗಳಾಗಿರುವ ರಮೇಶ್, ಅರುಣ್ ಮತ್ತು ವಿಜಯ್ ಬಂಧಿತರಾಗಿದ್ದಾರೆ.

ಪ್ರಿಯಕರನ ಜತೆ ಯುವತಿ ಇದ್ದಾಗ ಬಂದ ದುಷ್ಕರ್ಮಿಗಳಿಬ್ಬರು ನೀವು ಜತೆಗಿದ್ದುದನ್ನು ವಿಡಿಯೋ ಚಿತ್ರೀಕರಣ ಮಾಡಿದ್ದೇವೆ ಎಂದು ಹೇಳಿ ಬೆದರಿಕೆ ಹಾಕಿದ್ದಾರೆ. ನಂತರ ಜೋಳದಾಳು ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿರುವುದಾಗಿ ತಿಳಿದು ಬಂದಿದೆ. ಅತ್ಯಾಚಾರ ಪ್ರಕರಣದಲ್ಲಿ ಪ್ರಿಯಕರ ಎನ್ನಲಾದ ರಮೇಶ್ ಕೈವಾಡವೂ ಇದೆ ಎಂದು ಪೊಲೀಸರು ಅನುಮಾನಿಸಿದ್ದು ಆತನನ್ನೂ ಬಂಧಿಸಿದ್ದಾರೆ.
ಚನ್ನಗಿರಿ ಠಾಣೆಯಲ್ಲಿ ಮೂವರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಶಂಕರ್ ಗುಳೇದ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.












Click it and Unblock the Notifications