ಬಿಎಸ್ ವೈ ಪುತ್ರ ರಾಘವೇಂದ್ರರ ಕಾರು ಡಿಕ್ಕಿ, ದ್ವಿಚಕ್ರ ವಾಹನ ಸವಾರ ಸಾವು

Posted By:
Subscribe to Oneindia Kannada

ಹೊನ್ನಾಳಿ (ದಾವಣಗೆರೆ), ಆಗಸ್ಟ್ 31: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಮಗ, ಶಾಸಕ ಬಿ.ವೈ.ರಾಘವೇಂದ್ರ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾರ ರಾತ್ರಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಮಾದಾಪುರ ಕ್ರಾಸ್ ಬಳಿ ಸಂಭವಿಸಿದೆ.

ತಂದೆ ಸಾವಿನ ಅನುಕಂಪದಿಂದ ಶಾಸಕನಾದ ಮಧು ಬಂಗಾರಪ್ಪ: ಬಿವೈ ರಾಘವೇಂದ್ರ

ದ್ವಿಚಕ್ರ ವಾಹನ ಸವಾರ, ಇಪ್ಪತ್ನಾಲ್ಕು ವರ್ಷದ ಸುರೇಶ್ ಮೃತಪಟ್ಟವರು. ಹೊನ್ನಾಳಿಯಿಂದ ಶಿಕಾರಿಪುರಕ್ಕೆ ರಾಘವೇಂದ್ರ ಅವರು ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಎದುರಿನಿಂದ ಬಂದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

BY Raghavendra

ಈ ಸಂದರ್ಭದಲ್ಲಿ ಚಾಲಕ ಕಾರು ಚಲಾಯಿಸುತ್ತಿದ್ದ ಎಂದು ತಿಳಿದುಬಂದಿದೆ. ಈ ಘಟನೆ ಸಂಬಂಧವಾಗಿ ನ್ಯಾಮತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿ.ವೈ.ರಾಘವೇಂದ್ರ ಅವರು ಯಡಿಯೂರಪ್ಪ ಪುತ್ರರಾಗಿದ್ದು, ಶಿಕಾರಿಪುರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP state president BS Yeddyurappa son, MLA B.Y.Raghavendra car hits bike in Madapura cross, Honnali, Davanagere district on Thursday. Two wheeler rider dies on the spot.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ