MP Renukacharya: ಹೊನ್ನಾಳಿ:ಸಹೋದರನ ಪುತ್ರ ನಾಪತ್ತೆ, ಕಣ್ಣೀರಿಟ್ಟ ಎಂ.ಪಿ.ರೇಣುಕಾಚಾರ್ಯ
ದಾವಣಗೆರೆ, ನವೆಂಬರ್, 02: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯರ ಅವರ ಸಹೋದರನ ಪುತ್ರ ಕಾಣೆಯಾಗಿದ್ದು, ಇದೀಗ ಚಂದ್ರಶೇಖರ್ ಪತ್ತೆಗೆ ಶೋಧ ತೀವ್ರಗೊಂಡಿದೆ. ಮನೆಗೆ ಮರಳುವಂತೆ ಕಣ್ಣೀರಿಟ್ಟು ರೇಣುಕಾಚಾರ್ಯ ಕೋರಿದ್ದಾರೆ

ಹೊನ್ನಾಳಿ ಶಾಸಕ ಎಂ.ಪಿ. ರೇಣುಕಾಚಾರ್ಯರ ಸಹೋದರ ಎಂ. ಪಿ. ರಮೇಶ್ ಅವರ ಪುತ್ರ ಚಂದ್ರಶೇಖರ್ ನಾಪತ್ತೆಯಾಗಿದ್ದಾನೆ. ಭಾನುವಾರದಿಂದ ನಾಪತ್ತೆ ಆಗಿದ್ದು, ಇದುವರೆಗೆ ಮನೆಗೆ ಹಿಂದಿರುಗಿ ಬಂದಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಚಂದ್ರಶೇಖರ್ ಕಳೆದ ಭಾನುವಾರ ಶಿವಮೊಗ್ಗಕ್ಕೆ ವಿನಯ್ ಗುರೂಜಿ ಭೇಟಿಯಾಗಲು ತೆರಳಿದ್ದ. ವಿನಯ್ ಗುರೂಜಿ ಭೇಟಿಯಾದ ನಂತರ ಶಿವಮೊಗ್ಗದಿಂದ ಹೊನ್ನಾಳಿಗೆ ಚಂದ್ರಶೇಖರ್ ಬಂದಿದ್ದ. ಆದರೂ ಕೂಡ ಮನೆಗೆ ಹೋಗಿರಲಿಲ್ಲ. ಸ್ನೇಹಿತರ ಜೊತೆ ಇರಬಹುದು ಎಂದುಕೊಂಡಿದ್ದ ಮನೆಯವರು, ಸ್ವಲ್ಪ ಸಮಯದ ನಂತರ ಫೋಸ್ ಮಾಡಿದ್ದಾರೆ. ಆಗ ಆತನ ಫೋನ್ ಸ್ವಿಚ್ ಆಫ್ ಆಗಿರುವುದು ತಿಳಿದುಬಂದಿದೆ. ಹೊನ್ನಾಳಿಯಲ್ಲಿನ ಸ್ನೇಹಿತರು, ಆಪ್ತರು, ಸಂಬಂಧಿಕರನ್ನು ವಿಚಾರಿಸಿದರೂ ಕೂಡ ಇನ್ನು ಚಂದ್ರಶೇಖರ್ ಪತ್ತೆಯಾಗಿಲ್ಲ.

ರೇಣುಕಾಚಾರ್ಯ ಸಹೋದರನ ಪುತ್ರ ನಾಪತ್ತೆ
ಹೊನ್ನಾಳಿಯಲ್ಲಿ ಚಂದ್ರಶೇಖರ್ ಅವರ ಫೋನ್ ಸ್ವಿಚ್ ಆಫ್ ಆಗಿದೆ. ಫೋನ್ ಸ್ವಿಚ್ ಆಫ್ ಆಗಿರುವ ಬಗ್ಗೆಯೂ ಮಾಹಿತಿ ಇಲ್ಲದಂತಾಗಿದೆ. ಚಂದ್ರಶೇಖರ್ ಶಿವಮೊಗ್ಗದಿಂದ ಹೊನ್ನಾಳಿಗೆ ಬಂದರೂ ಮನೆಗೆ ಯಾಕೆ ಬರಲಿಲ್ಲ? ಫೋನ್ ಯಾಕೆ ಸ್ವಿಚ್ ಆಫ್ ಆಗಿದೆ? ಆತ ಎಲ್ಲಿದ್ದಾನೆ? ಏನಾಗಿರಬಹುದು ಎಂಬ ಪ್ರಶ್ನೆಗಳ ಮೇಲೆ ಪ್ರಶ್ನೆ ಎದ್ದಿವೆ. ಹೊನ್ನಾಳಿ ಪಟ್ಟಣದಲ್ಲಿ 67ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಶಾಸಕ ಎಂ.ಪಿ. ರೇಣುಕಾಚಾರ್ಯ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರು ಕಾರ್ಯಕ್ರಮವನ್ನು ಅರ್ಧಕ್ಕೆ ಮೊಟಕುಗೊಳಿಸಿ ವಾಪಸ್ ತೆರಳಿದ್ದಾರೆ. ಇದೀಗ ಶಾಸಕರ ತಮ್ಮನ ಮಗನ ಪತ್ತೆಗೆ ಪೊಲೀಸರು ಶೋಧಕಾರ್ಯವನ್ನು ತೀವ್ರಗೊಳಿಸಿದ್ದಾರೆ.
3
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications