ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಂಎಲ್ಸಿ ಚುನಾವಣೆ ಆಗ್ನೇಯ ಕ್ಷೇತ್ರ: ಡಾ. ಹಾಲನೂರ್ ಬಿಜೆಪಿ ಅಭ್ಯರ್ಥಿ

By Mahesh
|
Google Oneindia Kannada News

ದಾವಣಗೆರೆ, ಫೆಬ್ರವರಿ 22: ರಾಜ್ಯ ವಿಧಾನ ಪರಿಷತ್ ಗೆ ಬರುವ ಜೂನ್ ತಿಂಗಳಲ್ಲಿ ಚುನಾವಣೆ ನಡೆಯಲಿದ್ದು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪನವರ ಆದೇಶದಂತೆ ಹಾಗೂ ಪಕ್ಷದ ವರಿಷ್ಠರ ಸೂಚನೆಯಂತೆ ಡಾ. ಹಾಲನೂರ್ ಎಸ್.ಲೇಪಾಕ್ಷ್ ಅವರು ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

ಜಿಲ್ಲೆಯ ಮತದಾರರು ಅವರನ್ನು ಬೆಂಬಲಿಸಬೇಕೆಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಯಶವಂತರಾವ್ ಜಾಧವ್ ಅವರು ಪತ್ರಿಕಾಗೋಷ್ಠಿಯಲ್ಲಿ ಮನವಿ ಮಾಡಿದರು.

ಕಳೆದ 3 ತಿಂಗಳಿನಿಂದ ಕ್ಷೇತ್ರದಲ್ಲಿ ಪ್ರಚಾರ ಆರಂಭಿಸಿದ್ದು, ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಸೇರಿದ ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ ಜಿಲ್ಲೆಗಳಲ್ಲಿ ಪ್ರಚಾರ ನಡೆಸುತ್ತಿದ್ದು, ಈಗ ದಾವಣಗೆರೆ ಜಿಲ್ಲೆಯಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಜಿಲ್ಲೆಯ ಎಲ್ಲಾ ಶಿಕ್ಷಕ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಅವರು ಕೋರಿದರು.

South East Teachers Constituency BJP candidate

ಬಿಜೆಪಿ ಅಭ್ಯರ್ಥಿ ಡಾ. ಹಾಲನೂರ್ ಎಸ್. ಲೇಪಾಕ್ಷ್ ಅವರು ಮಾತನಾಡಿ, ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸಲು ತಾವು ಶಕ್ತಿಮೀರಿ ಶ್ರಮಿಸುವುದಾಗಿ ಹೇಳಿದರು. ಇದುವರೆಗೂ ಕ್ಷೇತ್ರದಲ್ಲಿ 20 ಸಾವಿರ ಶಿಕ್ಷಕರು ನೋಂದಾವಣೆಯಾಗಿದ್ದಾರೆ. ಇನ್ನೂ ನೋಂದಾವಣೆ ನಡೆಯುತ್ತಿದೆ ಎಂದು ತಿಳಿಸಿದ ಅವರು, ಬಿಜೆಪಿ ಅಧಿಕಾರದಲ್ಲಿದ್ದಾಗ ಶಿಕ್ಷಕರಿಗೆ ಅನೇಕ ಸೌಲಭ್ಯಗಳನ್ನು ಒದಗಿಸಲಾಯಿತು.

ರಾಜ್ಯ ಸರ್ಕಾರದ ನೀತಿಯಿಂದ ಅನುದಾನಕ್ಕೆ ಒಳಪಟ್ಟ ಶಿಕ್ಷಣ ಸಂಸ್ಥೆಗಳಲ್ಲಿ ಕೆಲಸ ಮಾಡುವ ಶಿಕ್ಷಕರಲ್ಲಿ 2500 ಕ್ಕಿಂತ ಹೆಚ್ಚು ಶಿಕ್ಷಕರು ನಿವೃತ್ತಿ ವೇತನ (ಕಾಲ್ಪನಿಕ ವೇತನ) ಪಡೆಯದೆ, ಅತಂತ್ರ ಸ್ಥಿತಿಯಲ್ಲಿದ್ದಾರೆ. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಒಂದು ತಿಂಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಕಾಂಗ್ರೆಸ್ ಸರ್ಕಾರದ ಆದೇಶದಿಂದ 6 ಒಂದು ತಿಂಗಳಲ್ಲಿ ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಎಂದರು.

ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಆಧಾರದಲ್ಲಿ ನೇಮಕಗೊಂಡ ಶಿಕ್ಷಕರು ಮತ್ತು ಉಪನ್ಯಾಸಕರಿಗೆ ಕಾಂಗ್ರೆಸ್ ಸರ್ಕಾರದ ಆದೇಶದಿಂದ 6 ರಿಂದ 7 ಕಾಲ್ಪನಿಕ ಬಡ್ತಿಯನ್ನು ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ. ಸರ್ಕಾರ ಈ ಆದೇಶವನ್ನು ತಡೆಹಿಡಿದಿದೆ. ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದರೆ ಈ ಆದೇಶವನ್ನೇ ವಜಾ ಮಾಡಿಸುತ್ತೇವೆ ಎಂದು ತಿಳಿಸಿದರು.

English summary
MLC Elections 2018 : South East Teachers Constituency BJP candidate is Dr. Halanur Lepaksh as sussgested by BJP President B.S Yeddyurappa.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X