ದಾವಣಗೆರೆಯಲ್ಲಿ ಮೊಬೈಲ್ ಟವರ್‌ಗೆ ಬೆಂಕಿ: ತಪ್ಪಿದ ಭಾರೀ ಅನಾಹುತ
ದಾವಣಗೆರೆ, ಸೆಪ್ಟೆಂಬರ್ 25: ದಾವಣಗೆರೆ ನಗರದ ಹಳೆ ಪ್ರವಾಸಿ ಮಂದಿರ ರಸ್ತೆಯ ಮಲ್ಲಿಕಾರ್ಜುನ ಲಾಡ್ಜ್ ಹಾಗೂ ಸಾರಸ್ವತ ಬ್ಯಾಂಕ್ ಹಿಂಭಾಗದಲ್ಲಿರುವ ಮೊಬೈಲ್ ಟವರ್‌ನಲ್ಲಿ ಶನಿವಾರ ಬೆಳಿಗ್ಗೆ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದೆ.
ಇನ್ನು ಟವರ್ ನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಅಗ್ನಿಶಾಮಕದಳಕ್ಕೆ ಮಾಹಿತಿ ನೀಡಲಾಯಿತು. ಸುದ್ದಿ ತಿಳಿಯುತ್ತಿದ್ದಂತೆಯೇ ಸಕಾಲಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದ್ದು, ಇದರಿಂದಾಗಿ ಭಾರೀ ಅನಾಹುತ ತಪ್ಪಿಸಿದ್ದಾರೆ.
ಕೆಲವು ನಿಮಿಷಗಳ ಕಾಲ ಬೆಂಕಿ ಹೊತ್ತಿ ಉರಿದಿದ್ದು, ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಅಕ್ಕಪಕ್ಕದ ಕಟ್ಟಡಗಳಿಗೆ ಬೆಂಕಿಯ ಜ್ವಾಲೆ ಹರಡುವುದನ್ನು ತಪ್ಪಿದಂತಾಗಿದೆ.

ಮೊಬೈಲ್ ಟವರ್‌ನ ಜನರೇಟರ್‌ಗಳು, ಕೇಬಲ್‌ಗಳು ಬೆಂಕಿಗೆ ಸಂಪೂರ್ಣ ಆಹುತಿಯಾಗಿದೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಬಸವಪ್ರಭು ತಿಳಿಸಿದ್ದಾರೆ.
Recommended Video
ಚೆನ್ನೈ ವಿರುದ್ಧ ಸೋಲಿಗೆ ವಿರಾಟ್ ನೇರವಾಗಿ ದೂರಿದ್ದು ಯಾರನ್ನು ಗೊತ್ತಾ? | Oneindia Kannada












Click it and Unblock the Notifications