ದಾವಣಗೆರೆಯಲ್ಲಿ ರೈತರಿಗೆ ಆಧುನಿಕ ಹೈನುಗಾರಿಕೆ ಕುರಿತು ಉಚಿತ ತರಬೇತಿ ಕಾರ್ಯಕ್ರಮ: ಮಾಹಿತಿ ಇಲ್ಲಿದೆ
ದಾವಣಗೆರೆ, ಮಾರ್ಚ್, 09: ದಾವಣಗೆರೆಯಲ್ಲಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಹಾಗಾದ್ರೆ ಆಸಕ್ತರು ಯಾವೆಲ್ಲಾ ದಾಖಲೆಗಳನ್ನು ತರಬೇಕಾಗುತ್ತದೆ ಹಾಗೂ ಯಾವ ದಿನ ತರಬೇತಿ ಕಾರ್ಯಕ್ರಮ ಇರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರೈತರಿಗೆ ಆಧುನಿಕ ಹೈನುಗಾರಿಕೆ ತರಬೇತಿಯನ್ನು ಮಾರ್ಚ್ 10 ಮತ್ತು 11ರಂದು ಆಯೋಜನೆ ಮಾಡಲಾಗಿದೆ. ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಫೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕಬೇಕಿದೆ.

ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಬೇಕಾದ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂರವಾಣಿ ಸಂಖ್ಯೆ 08192-233787ಕ್ಕೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಮುಖ್ಯಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಆರಂಭ ಯಾವಾಗ?: ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಕೆ ಆರಂಭ ಯಾವಾಗ ಹಾಗೂ ಅಭ್ಯರ್ಥಿಗಳು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನಯವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 1,500 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 1000 ಸಹಾಯಕಿ ಯರು ಸೇರಿದಂತೆ ಒಟ್ಟು 2,500 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಉತ್ತೀರ್ಣರಾದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಆಯ್ಕೆಯಾದವರಿಗೆ ಮಾಸಿಕ ವೇತನ 10,000-15,000 ರೂಪಾಯಿವರೆಗೂ ಇರಲಿದೆ. ಶೀಘ್ರದಲ್ಲೇ ಜಿಲ್ಲಾವಾರು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.
ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು 12ನೇ ತರಗತಿ/ಡಿಪ್ಲೊಮ ಇಸಿಸಿಇ/ತತ್ಸಮಾನ ಶಿಕ್ಷಣ ಪಾಸಾಗಿರಬೇಕು. ಇನ್ನು ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 19-35 ವರ್ಷ ವಯಸ್ಸಿಯ ಒಳಗಿನವರು ಅರ್ಜಿ ಸಲ್ಲಿಸಬಹದು. ಇತರೆ ಹಿಂದುಳಿದ ವರ್ಗದವರಿಗೆ 38 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಮೀರಿರಬಾರದು.
ಅರ್ಜಿ ಸಲ್ಲಿಸುವ ವಿಧಾನ
* ಅರ್ಜಿ ಹಾಕುವ ವೆಬ್ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ
* ತೆರೆದ ವೆಬ್‌ಪೇಜ್‌ನಲ್ಲಿ ಹುದ್ದೆ ಬಯಸುವ ಜಿಲ್ಲೆ, ತಾಲ್ಲೂಕು, ಹುದ್ದೆಗೂ ಮೊದಲು ಆಯ್ಕೆ ಮಾಡಿ
* ಶಿಶು ಅಭಿವೃದ್ಧಿ ಯೋಜನೆ ಅಧಿಸೂಚನೆ ಸಂಖ್ಯೆಯನ್ನು ಆಯ್ಕೆ ಮಾಡಿ
* ಯಾವ ಜಾತಿ ಎಂದು ಆಯ್ಕೆ ಮಾಡಿ
* ಆರ್‌ಡಿ ಸಂಖ್ಯೆ ನೀಡಿ ಅರ್ಜಿ ಮುಂದುವರೆಸಿ
* ಅರ್ಜಿ ಸಲ್ಲಿಸುವವರು ಅಂಗನವಾಡಿ ಕೇಂದ್ರವನ್ನು ಆಯ್ಕೆ ಮಾಡಬೇಕು
* ಬಳಿಕ ಆನ್‌ಲೈನ್ ಅರ್ಜಿ ನಮೂನೆ ತೆರೆಯುತ್ತದೆ
* ಕೇಳಲಾದ ಸಂಪೂರ್ಣ ವಿವರಗಳನ್ನು ಭರ್ತಿ ಮಾಡಿ ಅರ್ಜಿ ಸಲ್ಲಿಸಿ
* ಅಗತ್ಯ ದಾಖಲೆಗಳನ್ನು ಆಯಾ ಹೆಸರಿನ ಮುಂದೆ ಇರುವ ಆಯ್ಕೆ ಬಟನ್ ಕ್ಲಿಕ್ ಮಾಡಿ ಅಪ್ಲೋಡ್ ಮಾಡಿ.












Click it and Unblock the Notifications