ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆಯಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಕಟ್ಟಡಕ್ಕೆ ಆರೋಗ್ಯ ಸಚಿವರಿಂದ ಶಂಕುಸ್ಥಾಪನೆ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜುಲೈ 4: ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ಕಡಿಮೆ ಮಾಡುವ ಉದ್ದೇಶದಿಂದ ಇಂದು ದಾವಣಗೆರೆಯ ಚಿಗಟೇರಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಸುಮಾರು ರೂ. 21 ಕೋಟಿ ವೆಚ್ಚದಲ್ಲಿ 100 ಹಾಸಿಗೆಗಳ ಸಾಮರ್ಥ್ಯದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಜೊತೆಗೆ ವೈದ್ಯರು/ಶುಶ್ರೂಷಕರ ವಸತಿಗೃಹ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ, ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಂಜಿನಿಯರಿಂಗ್ ಘಟಕ ದಾವಣಗೆರೆ ವತಿಯಿಂದ ಇಂದು ಚಿಗಟೇರಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 100 ಹಾಸಿಗೆಗಳ ತಾಯಿ ಮಕ್ಕಳ ಆಸ್ಪತ್ರೆ ಕಟ್ಟಡದ ಶಂಕುಸ್ಥಾಪನಾ ಸಮಾರಂಭದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ರೋಗಿಗೆ ಚಿಕಿತ್ಸೆ ನಿರಾಕರಿಸಿದ 18 ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್ರೋಗಿಗೆ ಚಿಕಿತ್ಸೆ ನಿರಾಕರಿಸಿದ 18 ಆಸ್ಪತ್ರೆಗಳಿಗೆ ಶೋಕಾಸ್ ನೋಟಿಸ್

ತಾಯಿ ಮತ್ತು ಮಕ್ಕಳ ಮರಣ ಪ್ರಮಾಣವನ್ನು ತಗ್ಗಿಸಲು ರಾಜ್ಯದಲ್ಲಿ ಪ್ರಸ್ತುತ 17 ಆಸ್ಪತ್ರೆಗಳು ಕಾರ್ಯ ನಿರ್ವಹಿಸುತ್ತಿವೆ. ದಾವಣಗೆರೆ ಸುತ್ತಮುತ್ತಲಿನ ಜನತೆಗೆ ಅನುಕೂಲವಾಗುವ ಉದ್ದೇಶದಿಂದ ಸಂಸದರಾದ ಜಿ.ಎಂ.ಸಿದ್ದೇಶ್ವರ್ ಇವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ದಾವಣಗೆರೆ ಜಿಲ್ಲೆಗೆ ಒಂದು ತಾಯಿ ಮತ್ತು ಮಕ್ಕಳ ಆಸ್ಪತ್ರೆ ಬೇಕೆಂದು ಮಂಜೂರು ಮಾಡಿಸಿದ್ದಾರೆ. ಈ ಆಸ್ಪತ್ರೆಯ ಕಾಮಗಾರಿಯನ್ನು ನಿಗದಿತ ಅವಧಿ, ಅಂದರೆ 15 ತಿಂಗಳ ಒಳಗೆ ಮುಗಿಸಿ ನಂತರ ಸಂಸದರು, ಉಸ್ತುವಾರಿ ಸಚಿವರು, ಶಾಸಕರೆಲ್ಲ ಸೇರಿ ಉದ್ಘಾಟನೆ ಮಾಡುವೆವು ಎಂದರು.

Mother And Children Hospital Building Construction Started At Davanagere

ರಾಜದಲ್ಲಿ ಕೊರೊನಾ ವೈರಸ್ ಪ್ರಕರಣಗಳು ಕುರಿತು ಮಾತನಾಡಿದ ಅವರು, ಕೋವಿಡ್ ಸೋಂಕನ್ನು ಸಮರೋಪಾದಿಯಲ್ಲಿ ನಿರ್ವಹಿಸಲಾಗುತ್ತಿದೆ. ಕೋವಿಡ್ ನಿಯಂತ್ರಣದಲ್ಲಿ ನಯಾ ಪೈಸೆ ಅವ್ಯವಹಾರ ಆಗಿಲ್ಲ. ಪ್ರಶಂಸನೀಯವಾಗಿ ಕೆಲಸ ಮಾಡಲಾಗುತ್ತಿದೆ. ವಿರೋಧ ಪಕ್ಷದವರ ಆರೋಪದಲ್ಲಿ ಹುರುಳಿಲ್ಲ. ಯಾವುದೇ ರೀತಿಯ ತನಿಖೆಗೆ ನಾವು ಸಿದ್ಧ. ಮುಖಮಂತ್ರಿಗಳ ನೇತೃತ್ವದಲ್ಲಿ ನಾವೆಲ್ಲ ಒಗ್ಗೂಡಿ ಸಮನ್ವಯದಿಂದ ಕೆಲಸ ಮಾಡುತ್ತಿದ್ದೇವೆ. ಸಂಘ ಸಂಸ್ಥೆಗಳೂ ನಮ್ಮೊಂದಿಗೆ ದುಡಿಯುತ್ತಿದ್ದಾರೆ. ಆರೋಪ ಮಾಡುವುದಕ್ಕಿಂತ ನಮ್ಮೊಂದಿಗೆ ಕೈಜೋಡಿಸಿ ಕೆಲಸ ಮಾಡುವುದು ಒಳಿತು ಎಂದರು.

English summary
Mother and children hospital is constructing in chigateri at davanagere to decrease the mortality rate said Health minister sriramulu in davangere today,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X