ದಾವಣಗೆರೆ: ತಾಯಿ, ಮಗಳ ಸ್ಪರ್ಧೆ ಎಂದ ಬಿಜೆಪಿ ಹುರಿಯಾಳು ಗಾಯತ್ರಿ ಸಿದ್ದೇಶ್ವರ-ಕೈ ಅಭ್ಯರ್ಥಿ ಪ್ರಭಾ ಮಲ್ಲಿಕಾರ್ಜುನ್ ಏನಂದ್ರು?
ದಾವಣಗೆರೆ, ಮಾರ್ಚ್, 22: ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣುಕಾಚಾರ್ಯ ಅವರ ಜೊತೆ ಮಾತನಾಡಿದ್ದೇನೆ. ಅವರು ಟಿಕೆಟ್ ಕೇಳಿದ್ದರು, ಸಿಕ್ಕಿಲ್ಲ. ಸಹಜವಾಗಿಯೇ ಬೇಸರಗೊಂಡಿದ್ದಾರೆ ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿದರು.
ದಾವಣಗೆರೆ ನಗರ ದೇವತೆ ದುರ್ಗಾಂಬಿಕಾ ದೇವಿ ದರ್ಶನ ಪಡೆದ ಬಳಿಕ ಮಾತನಾಡಿದ ಅವರು, ಅವರೆಲ್ಲರನ್ನೂ ನಾನು ಅಣ್ಣ ಎಂದೇ ಮಾತಾಡಿಸುತ್ತಿದ್ದೆ, ಎಲ್ಲರನ್ನೂ ಭೇಟಿಯಾಗಿ ಮಾತಾಡಿದ್ದೇನೆ. ಎಲ್ಲರೂ ಖುಷಿಯಾಗಿಯೇ ಇದ್ದಾರೆ. ನನ್ನನ್ನು ಒಪ್ಪಿಕೊಳ್ಳುತ್ತಾರೆ ಎಂಬ ವಿಶ್ವಾಸ ಇದೆ, ಎಲ್ಲವೂ ಸರಿ ಆಗುತ್ತದೆ ಎಂದು ತಿಳಿಸಿದರು.

ಇದೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಮಹಿಳೆಯರಿಗೆ ಅವಕಾಶ ಸಿಕ್ಕಿದೆ. 33% ಮೀಸಲಾತಿ ಸಿಕ್ಕಿರೋದು ಖುಷಿ ತಂದಿದೆ. ಮೋದಿ ಜೀ ಅವರ ಆಶೀರ್ವಾದ ಸಿಕ್ಕಿದೆ, ಕೇಂದ್ರ, ರಾಜ್ಯದ ನಾಯಕರು ನನ್ನನ್ನು ಅಭ್ಯರ್ಥಿಯನ್ನಾಗಿ ಮಾಡಿದ್ದಾರೆ. ಈ ಅವಕಾಶ ಸದುಪಯೋಗ ಪಡಿಸಿಕೊಳ್ಳುತ್ತೇನೆ, ಎಲ್ಲರಿಗೂ ನ್ಯಾಯಯುತವಾಗಿ ಸೇವೆ ಸಲ್ಲಿಸುತ್ತೇನೆ. ಅದರಲ್ಲೂ ವಿಶೇಷವಾಗಿ ಹೆಣ್ಣುಮಕ್ಕಳಿಗೆ ಸ್ಪಂದಿಸುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಕಾರ್ಯಕರ್ತರು ಈ ಬಾರಿ ನನ್ನ ಕೈ ಹಿಡಿಯುತ್ತಾರೆ. ಕಮಲ ತೆಗೆದುಕೊಂಡು ಹೋಗಿ ಮೋದಿ ಜೀಗೆ ಅರ್ಪಿಸುತ್ತೇನೆ. ಕಾಂಗ್ರೆಸ್‌ನಿಂದ ಪ್ರಭಾ ಮಲ್ಲಿಕಾರ್ಜುನ್ ಸ್ಪರ್ಧೆ ಎಂಬ ಪತ್ರಕರ್ತರ ಪ್ರಶ್ನೆಗೆ ಗಾಯತ್ರಿ ಸಿದ್ದೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಹೌದು ಬೀಗರು ಆಗ್ತಿವಿ, ನಾನು ತಾಯಿ ಸ್ಥಾನದಲ್ಲಿದ್ದೇನೆ. ಅವರು ಮಗಳು ಎಂದು ಹೇಳಿದರು.
ಮೋದಿ ಜೀ ವಿಶ್ವನಾಯಕ, ಅವರನ್ನು ಮತ್ತೆ ಪ್ರಧಾನಿ ಮಾಡಬೇಕು ಅನ್ನೋದು ಕಾರ್ಯಕರ್ತರ, ಮತದಾರರ ಆಶಯ. ದಾವಣಗೆರೆಯಲ್ಲಿ ಸಿದ್ದೇಶ್ವರ್ ಅವರು 20 ವರ್ಷಗಳ ಕಾಲ ಮಾಡಿರುವ ಅಭಿವೃದ್ಧಿ ಕೆಲಸಗಳ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಿದ್ದೇವೆ. ನಮ್ಮ ಮಾವ ಮಲ್ಲಿಕಾರ್ಜುನಪ್ಪ ಅವರು ಒಬ್ಬ ಎಂಪಿ ಹೇಗೆ ಜನರ ಕೈಗೆ ಸಿಗುತ್ತಾರೆ ಅನ್ನೊದನ್ನು ತೋರಿಸಿಕೊಟ್ಟಿದ್ದರು. ನಾನೂ ಕಾರ್ಯಕರ್ತರಿಗೆ ಸ್ಪಂದಿಸಿದ್ದೇನೆ, ಹೋದ ಎಲ್ಲ ಕಡೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಸ್ಪಂದನೆಯೂ ಸಿಗುತ್ತಿದೆ. ಎಲ್ಲರೂ ಖುಷಿಯಿಂದ ಬೆಂಬಲ ನೀಡುತ್ತಿದ್ದಾರೆ ಎಂದು ಗಾಯತ್ರಿ ಸಿದ್ದೇಶ್ವರ ತಿಳಿಸಿದರು.

ಪ್ರಭಾ ಮಲ್ಲಿಕಾರ್ಜುನ್ ತಿರುಗೇಟು: ಲೋಕಸಭೆ ಚುನಾವಣೆಯಲ್ಲಿ ತಾಯಿ-ಮಗಳ ನಡುವೆ ಗೆಲುವಿಗೆ ಹೋರಾಟ ಎಂಬ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಹೇಳಿಕೆಗೆ ಟಾಂಗ್ ನೀಡಿರುವ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು, ಭಾರತೀಯ ಸಂಸ್ಕೃತಿಯಲ್ಲಿ ತಾಯಿ ಮಗಳ ಸಂಬಂಧಕ್ಕೆ ಬೆಲೆ ಇದೆ. ಸಂಬಂಧಕ್ಕೆ ಗೌರವ ಇದೆ. ಚುನಾವಣೆ ಎಂದ ಮೇಲೆ ಗೆಲುವಿಗೆ ಹೋರಾಟ ಮಾಡುವುದಷ್ಟೇ ಮುಖ್ಯ ಎಂದು ತಿರುಗೇಟು ನೀಡಿದ್ದಾರೆ.
ಎಂಸಿಸಿ ಬಿ ಬ್ಲಾಕ್‌ನಲ್ಲಿನ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರ ನಿವಾಸದ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು ಎಂಬುದು ಪ್ರಜ್ಞಾವಂತ ಮತದಾರರು ನಿರ್ಧರಿಸುತ್ತಾರೆ. ಚುನಾವಣೆಯಲ್ಲಿ ಸಂಬಂಧಕ್ಕಿಂತ ಜನರ ಸೇವೆ ಮುಖ್ಯ. ಕಷ್ಟ, ಸುಖದಲ್ಲಿ ಭಾಗಿಯಾಗುವುದು ತುಂಬಾನೇ ಪ್ರಮುಖವಾಗುತ್ತದೆ. ಪ್ರತಿಯೊಬ್ಬರನ್ನೂ ಭೇಟಿ ಮಾಡಲು ಆಗದು.
ಕೇವಲ 40 ದಿನಗಳು ಮಾತ್ರ ಇದ್ದು, ಎಲ್ಲಾ ಶಾಸಕರು, ಮುಖಂಡರು, ಕಾರ್ಯಕರ್ತರು ನನ್ನ ಗೆಲುವಿಗೆ ಶ್ರಮಿಸುವುದಾಗಿ ವಿಶ್ವಾಸ ಇದೆ ಎಂದರು.
ನಾನು ಎಂದಿಗೂ ಟಿಕೆಟ್ ನೀಡಿ ಎಂದು ಕೇಳಿರಲಿಲ್ಲ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಮತದಾರರು ಹಾಗೂ ಜನರ ಒತ್ತಾಯದಿಂದ ನನಗೆ ಟಿಕೆಟ್ ಕೊಟ್ಟಿದ್ದಾರೆ. ಸರ್ವೆಯಲ್ಲಿಯೂ ನನ್ನ ಹೆಸರು ಬಂದಿದೆ. ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ವರಿಷ್ಠರು ಟಿಕೆಟ್ ಘೋಷಿಸಿದ್ದು, ಗೆಲ್ಲುವ ವಿಶ್ವಾಸ ಇದೆ. ರಾಜ್ಯ ಸರ್ಕಾರದ ಗ್ಯಾರಂಟಿಗಳು, ಮಹಿಳೆಯರಿಗೆ ನೀಡಿರುವ ಸೌಲಭ್ಯಗಳನ್ನು ತಿಳಿಸಿಕೊಡುವ ಕೆಲಸ ಮಾಡುತ್ತೇವೆ. ಪ್ರಧಾನಿ ನರೇಂದ್ರ ಮೋದಿ ಅಲೆ ನೋಡಿಕೊಂಡು ಮತ ಹಾಕುವುದಕ್ಕಿಂತ ಜನರಿಗೆ ಸ್ಪಂದಿಸುವ, ಕೆಲಸ ಮಾಡುವವರಿಗೆ ಮತ ನೀಡಿ ಎಂದು ಮನವಿ ಮಾಡಿದರು.
ಯಾವ ವ್ಯಕ್ತಿಗೆ ಮತ ನೀಡಬೇಕು. ಜನರ ಸಮಸ್ಯೆಗೆ ಯಾರು ಸ್ಪಂದಿಸುತ್ತಾರೆ, ಪ್ರತಿನಿಧಿಸುತ್ತಾರೆಯೋ ಅಂಥವರನ್ನು ಆಯ್ಕೆ ಮಾಡಬೇಕು ಎಂಬುದು ಕ್ಷೇತ್ರದ ಜನರ ಅಭಿಮತವಾಗಿದೆ. ಒಳ್ಳೆಯ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮತದಾರರು ನಿರ್ಧರಿಸಿದ್ದು, ಪ್ರಜ್ಞಾವಂತ ಮತದಾರರು ಬೆಂಬಲಿಸಬೇಕು ಎಂದು ಹೇಳಿದರು.
ಯಾವಾಗಲೂ ನಾನು ಲೋಕಸಭಾ ಅಭ್ಯರ್ಥಿ ಎಂದು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಮಾಧ್ಯಮದವರು, ಮುಖಂಡರು, ಕಾರ್ಯಕರ್ತರು ಸಾಕಷ್ಟು ಬಾರಿ ಅಭ್ಯರ್ಥಿ ಆಗ್ತೀರೋ ಇಲ್ಲವೋ ಎಂಬುದನ್ನು ಕೇಳುತ್ತಿದ್ದರು. ಈ ಪ್ರಶ್ನೆಗೆ ಉತ್ತರ ನೀಡುವ ಸಮಯ ಈಗ ಬಂದಿದೆ. ಕ್ಷೇತ್ರದ ಶಾಸಕರು, ಮುಖಂಡರ ಅಭಿಪ್ರಾಯ ಪಡೆದು ಟಿಕೆಟ್ ಅಂತಿಮಗೊಳಿಸಲಾಗಿದೆ. ಬಿಜೆಪಿಯಲ್ಲಿ ಯಾರೇ ಅಭ್ಯರ್ಥಿಯಾದರೂ ಸ್ಪರ್ಧೆ ಇದ್ದೇ ಇರುತ್ತದೆ, ಹಾಗೆಂದ ಮೇಲೆ ಹೋರಾಟವೂ ಇರುತ್ತದೆ. ಮಾವ ಶಾಮನೂರು ಶಿವಶಂಕರಪ್ಪರು ಹಾಗೂ ಪತಿ ಮಲ್ಲಿಕಾರ್ಜುನ್ ಅವರು ಮಾಡಿರುವಂಥ ಅಭಿವೃದ್ಧಿ ಕೆಲಸದಿಂದ ಕಾರ್ಯಕರ್ತರ ಒತ್ತಾಸೆಯಂತೆ ಟಿಕೆಟ್ ಸಿಕ್ಕಿದೆ ಎಂದರು.
ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೆ ಟಿಕೆಟ್ ಸಿಕ್ಕಿದೆ. ಜನರು ಮೂವರಿಗೆ ಅಧಿಕಾರ ನೀಡುವುದಿಲ್ಲ ಎಂಬ ವ್ಯಂಗ್ಯದ ಮಾತಿಗೆ ಪ್ರತಿಕ್ರಿಯೆ ನೀಡಿದ ಪ್ರಭಾ ಮಲ್ಲಿಕಾರ್ಜುನ್ ಅವರು, ನಾನಾಗಿ ಯಾವತ್ತೂ ಟಿಕೆಟ್ ಕೇಳಿಲ್ಲ. ಯಾರು ನಿಂತರೆ ಸರಿಯಾಗಿ ಪ್ರತಿಸ್ಫರ್ಧೆ ಒಡ್ಡಬಹುದು ಎಂಬ ಲೆಕ್ಕಾಚಾರ ಹಾಕಿ ಟಿಕೆಟ್ ಘೋಷಿಸಲಾಗಿದೆ. ಹರಪನಹಳ್ಳಿಯೂ ಸೇರಿದಂತೆ ಏಳು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಎಲ್ಲರೂ ಚುನಾವಣೆಯಲ್ಲಿ ಗೆಲುವಿಗೆ ಶ್ರಮಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ನಮ್ಮದು ಯಾವುದೇ ಅಸ್ತ್ರ ಇಲ್ಲ, ಭಿವೃದ್ಧಿ ಕೆಲಸಗಳೇ ನಮಗೆ ಶ್ರೀರಕ್ಷೆ. ಬಿಜೆಪಿಯವರದ್ದು ಪ್ರಧಾನಿ ನರೇಂದ್ರ ಮೋದಿ ಅಲೆ ಇದ್ದರೆ, ನಮ್ಮದು ಮಾತ್ರ ಕಾಂಗ್ರೆಸ್ ಅಲೆ. ಜನರು ಅಭಿವೃದ್ಧಿ ಕೆಲಸಗಳನ್ನು ನೋಡಿಕೊಂಡು ನಮಗೆ ಮತ ನೀಡುತ್ತಾರೆ ಎಂದು ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications