"ಮೈತ್ರಿ ಸರ್ಕಾರವಿದ್ದಾಗ ನನ್ನ ಫೋನನ್ನೂ ಟ್ರ್ಯಾಪ್ ಮಾಡಿದ್ದರು": ಎಂ.ಪಿ. ರೇಣುಕಾಚಾರ್ಯ
Recommended Video
ಫೋನ್ ಕದ್ದಾಲಿಕೆ ಬಗ್ಗೆ ರೇಣುಕಾಚಾರ್ಯ ಹೇಳಿದ್ದೇನು? | Oneindia Kannada
ದಾವಣಗೆರೆ, ಆಗಸ್ಟ್ 14: "ಮೈತ್ರಿ ಸರ್ಕಾರದ ಆಡಳಿತವಿದ್ದಾಗ ನನ್ನ ಫೋನನ್ನೂ ಟ್ರ್ಯಾಪ್ ಮಾಡಿದ್ದರು" ಎಂದು ಶಾಸಕ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸ್ಫೋಟಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ಶಾಸಕ ರೇಣುಕಾಚಾರ್ಯ, "ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಧಿಕಾರ ಉಳಿಸಿಕೊಳ್ಳಬೇಕೆಂದು ಮಾಜಿ ಸಿಎಂ ಸಿದ್ದರಾಮಯ್ಯ, ನನ್ನ ಹಾಗೂ ಹಲವರ ಫೋನ್ ಟ್ರ್ಯಾಪ್ ಮಾಡಿದ್ದಾರೆ" ಎಂದು ಆರೋಪಿಸಿದ್ದಾರೆ.

"ನಾವು ಆಪರೇಶನ್ ಕಮಲ ಮಾಡಿಲ್ಲ, ಬಿಜೆಪಿಯ ಮುಂಚೂಣಿಯಲ್ಲಿ ಹೋರಾಟ ಮಾಡುತ್ತಿದ್ದವರ ಹಾಗೂ ಬಿಜೆಪಿಯ ಪ್ರಮುಖರ ಫೋನ್ ಟ್ರ್ಯಾಕ್ ಮಾಡಿದ್ದಾರೆ. ಈ ಕುರಿತು ಸಿಬಿಐ ತನಿಖೆ ನಡೆಯಬೇಕು" ಎಂದು ರೇಣುಕಾಚಾರ್ಯ ಆಗ್ರಹಿಸಿದ್ದಾರೆ. "ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ಆದರೆ ಸಚಿವ ಸ್ಥಾನ ನೀಡಿದರೆ ನಿಭಾಯಿಸುತ್ತೇನೆ" ಎಂದು ಹೇಳಿಕೊಂಡಿದ್ದಾರೆ.












Click it and Unblock the Notifications