ದಾವಣಗೆರೆಗೆ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿ ಆಯ್ಕೆ?

Recommended Video

      Lok Sabha Elections 2019 : ದಾವಣಗೆರೆ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ನಿಂದ ಅಚ್ಚರಿಯ ಅಭ್ಯರ್ಥಿ

      ದಾವಣಗೆರೆ, ಮಾರ್ಚ್ 28 : ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾರು?. ಕಾಂಗ್ರೆಸ್ ಹೈ ಕಮಾಂಡ್ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಆದರೆ, 88 ವರ್ಷದ ಶಾಮನೂರು ಶಿವಶಂಕರಪ್ಪ ಅವರು ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿಲ್ಲ.

      ದಾವಣಗೆರೆ ಜಿಲ್ಲಾ ಕಾಂಗ್ರೆಸ್‌ ಗುರುವಾರ ಮಧ್ಯಾಹ್ನ ಫೇಸ್‌ ಬುಕ್ ಪುರದಲ್ಲಿ ಯುವ ನಾಯಕನಿಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಪೋಸ್ಟ್ ಒಂದನ್ನು ಹಾಕಿದೆ. ಏಪ್ರಿಲ್ 23ರಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಚುನಾವಣೆ ನಡೆಯಲಿದೆ.

      ಶಾಮನೂರು ಶಿವಶಂಕರಪ್ಪ ಅವರ ಕುಟುಂಬ ಸದಸ್ಯರಿಗೆ ಟಿಕೆಟ್ ನೀಡಬೇಕು ಎಂಬುದು ಕಾಂಗ್ರೆಸ್ ಹೈಕಮಾಂಡ್ ನಿಲುವು. ಆದರೆ, ಕುಟುಂಬದಲ್ಲಿ ಯಾರೂ ಸ್ಪರ್ಧೆಗೆ ಆಸಕ್ತಿ ತೋರಿಸುತ್ತಿಲ್ಲ. ಆದ್ದರಿಂದ, ಪರ್ಯಾಯ ಅಭ್ಯರ್ಥಿ ಹುಡುಕಾಟ ಅನಿವಾರ್ಯವಾಗಿದೆ.

      ಬಿಜೆಪಿಯಿಂದ ಈಗಾಗಲೇ ಜಿ.ಎಂ.ಸಿದ್ದೇಶ್ವರ ಅವರು ಕಣಕ್ಕಿಳಿಯುವುದು ಖಚಿತವಾಗಿದೆ. ಈಗಾಗಲೇ 3 ಚುನಾವಣೆಗಳಲ್ಲಿ ಜಯಗಳಿಸಿರುವ ಅವರು ನಾಲ್ಕನೇ ಭಾರಿ ಅಖಾಡಕ್ಕೆ ಇಳಿದಿದ್ದಾರೆ. ಆದರೆ, ಎದುರಾಳಿ ಯಾರು? ಎಂಬುದು ಇನ್ನೂ ಖಚಿತವಾಗಿಲ್ಲ....

      ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ

      ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ

      ದಾವಣಗೆರೆ ಕ್ಷೇತ್ರಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಇನ್ನೂ ಅಂತಿಮವಾಗಿಲ್ಲ. ಶಾಮನೂರು ಶಿವಶಂಕರಪ್ಪ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಿದೆ. ಆದರೆ, ಅವರು ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿಲ್ಲ. ಆದ್ದರಿಂದ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

      ಪುತ್ರನಿಗೆ ಟಿಕೆಟ್ ಕೊಡಿ

      ಪುತ್ರನಿಗೆ ಟಿಕೆಟ್ ಕೊಡಿ

      'ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಆಸಕ್ತಿ ಇಲ್ಲ. ನನ್ನ ಬದಲು ಪುತ್ರ ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಟಿಕೆಟ್ ಕೊಡಿ' ಎಂದು ಶಾಮನೂರು ಶಿವಶಂಕರಪ್ಪ ಹೈಕಮಾಂಡ್ ನಾಯಕರಿಗೆ ಮನವಿ ಮಾಡಿದ್ದಾರೆ. ಆದರೆ, ಎಸ್‌.ಎಸ್.ಮಲ್ಲಿಕಾರ್ಜುನ ಅವರು ಸಹ ಚುನಾವಣೆಗೆ ಸ್ಪರ್ಧಿಸಲು ಆಸಕ್ತಿ ತೋರಿಸುತ್ತಿಲ್ಲ.

      ಯುವ ನಾಯಕರ ಆಯ್ಕೆ

      ಯುವ ನಾಯಕರ ಆಯ್ಕೆ

      ದಾವಣಗೆರೆ ಕ್ಷೇತ್ರದಲ್ಲಿ ಲಿಂಗಾಯತ ಸಮುದಾಯಕ್ಕೆ ಸೇರಿದ ಯುವ ನಾಯಕನಿಗೆ ಟಿಕೆಟ್ ನೀಡಲಾಗುತ್ತದೆ ಎಂಬ ಸುದ್ದಿ ಹಬ್ಬಿದೆ. ಮಾಜಿ ಕೇಂದ್ರ ಸಚಿವ ಕೊಂಡಜ್ಜಿ ಬಸಪ್ಪ ಅವರ ಮೊಮ್ಮಗ, ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ (27) ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

      ಮತ್ತೊಬ್ಬರ ಹೆಸರು ಚಾಲ್ತಿಯಲ್ಲಿ

      ಮತ್ತೊಬ್ಬರ ಹೆಸರು ಚಾಲ್ತಿಯಲ್ಲಿ

      ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಎಚ್.ಬಿ.ಮಂಜಪ್ಪ ಅವರ ಹೆಸರು ಸಹ ಕೇಳಿಬರುತ್ತಿದೆ. ಶಾಮನೂರು ಕುಟುಂಬಕ್ಕೆ ಆತ್ಮೀಯರಾದ ಮಂಜಪ್ಪ ಅವರಿಗೆ ಟಿಕೆಟ್ ಕೊಡಲು ಶಾಮನೂರು ಶಿವಶಂಕರಪ್ಪ ಅವರು ಒಪ್ಪಿಗೆ ನೀಡುವ ಸಾಧ್ಯತೆ ಇದೆ.

      ಯುವ ನಾಯಕ ಅಭ್ಯರ್ಥಿ?

      ನಿಖಿಲ್ ಕೊಂಡಜ್ಜಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ ಎಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಪಕ್ಷದ ಫೇಸ್‌ಬುಕ್‌ನಲ್ಲಿ ತಿಳಿಸಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+