ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಲಿತರಿಗೆ ಕ್ಷೌರ ಮಾಡಲು ನಿರಾಕರಣೆ; ಇನ್ನೂ ಜೀವಂತವಾಗಿದೆ ಅನಿಷ್ಟ ಪದ್ಧತಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜೂನ್ 12: ಸಾಮಾಜಿಕ ಅನಿಷ್ಟ ಪದ್ಧತಿಗಳು ದೇಶದಲ್ಲಿ ಇನ್ನೂ ಜೀವಂತವಾಗಿದೆ ಎನ್ನುವುದಕ್ಕೆ ಆಗಾಗ ಹಲವು ನಿದರ್ಶನಗಳು ಬೆಳಕಿಗೆ ಬರುತ್ತವೆ.

ದಲಿತರಿಗೆ ಕುಡಿಯುವ ನೀರು, ಕ್ಷೌರಿಕ ಅಂಗಡಿ, ಹೋಟೆಲ್‌ಗಳಲ್ಲಿ ಹಾಗೂ ದೇವಸ್ಥಾನದಲ್ಲೂ ಕೂಡ ಪ್ರವೇಶ ನಿಷೇಧ ಹೇರುವ ಘಟನೆಗಳು ನಡೆಯುತ್ತವೆ. ಈಗ ಅಂಥದ್ದೇ ಪರಿಸ್ಥಿತಿ ದಾವಣಗೆರೆ ಜಿಲ್ಲೆಯಲ್ಲಿ ವರದಿಯಾಗಿದೆ.

ದಲಿತ ಯುವಕನಿಗೆ ಪಿಎಸ್ಐ ಮೂತ್ರ ಕುಡಿಸಿದ ಪ್ರಕರಣಕ್ಕೆ ಮತ್ತೊಂದು ತಿರುವುದಲಿತ ಯುವಕನಿಗೆ ಪಿಎಸ್ಐ ಮೂತ್ರ ಕುಡಿಸಿದ ಪ್ರಕರಣಕ್ಕೆ ಮತ್ತೊಂದು ತಿರುವು

ದಲಿತರಿಗೆ ಕ್ಷೌರ ಮಾಡಲು ನಿರಾಕರಿಸಿದ್ದಾರೆ ಎಂಬ ಆರೋಪ ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಧೂಳೆಹೊಳೆ ಗ್ರಾಮದಲ್ಲಿ ನಡೆದಿದೆ. ಈ ಮೂಲಕ ಇನ್ನೂ ಈ ಗ್ರಾಮದಲ್ಲಿ ಅನಿಷ್ಟ ಪದ್ಧತಿ ಜೀವಂತವಾಗಿದೆಯಾ ಎಂಬ ಅನುಮಾನ ಮೂಡಿದೆ.

Davanagere: No Haircuts For Dalits In Dhulehole Village In Harihara Taluk. Know Why

ದಲಿತರಿಗೆ ಕ್ಷೌರ ಮಾಡಲ್ಲ ಎಂದಿದ್ದಕ್ಕೆ ಗಲಾಟೆ ನಡೆದಿದ್ದು, ಊರಿನ ಗೌಡರನ್ನು ಕೇಳಿ ಕ್ಷೌರ ಮಾಡುತ್ತೇನೆ ಎಂದು ಕ್ಷೌರಿಕ ಅಣ್ಣಪ್ಪ ಹೇಳಿರುವ ವಿಡಿಯೋ ವೈರಲ್ ಆಗಿದೆ.‌ ದಲಿತರಿಗೆ ಏಕೆ ಕ್ಷೌರ ಮಾಡುವುದಿಲ್ಲ ಎಂದು ದಲಿತ ಯುವಕರು ಕೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ಆಗಿದೆ.

ಈ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದ್ದು, ಧೂಳೆಹೊಳೆ ಗ್ರಾಮದಲ್ಲಿ ಕ್ಷೌರ ಮಾಡದೇ ಇರುವುದರಿಂದ ಹರಿಹರ ಪಟ್ಟಣಕ್ಕೆ ಜನರು ಹೋಗುತ್ತಿದ್ದಾರೆ. ಧೂಳೆಹೊಳೆ ಗ್ರಾಮದಲ್ಲಿ ದಲಿತರಿಗೆ ದೇವಸ್ಥಾನದಲ್ಲೂ ಕೂಡ ಪ್ರವೇಶ ನಿಷೇಧ ಮಾಡಲಾಗಿದೆ ಎನ್ನಲಾಗಿದೆ.

Recommended Video

Rohini Sindhuri ಪರ ಸಾಮಾಜಿಕ ಜಾಲತಾಣದಲ್ಲಿ ಭಾರೀ ಕೂಗು | Oneindia Kannada

ಶುಕ್ರವಾರ ಬೆಳಿಗ್ಗೆ ಗಲಾಟೆ ಆದರೂ ಕೂಡ ಸ್ಥಳಕ್ಕೆ ಯಾವುದೇ ಅಧಿಕಾರಿಗಳು ಭೇಟಿ ನೀಡಿರಲಿಲ್ಲ. ಜಿಲ್ಲಾ ಮಟ್ಟದ ಅಧಿಕಾರಿಗಳ ಗಮನಕ್ಕೆ ಬಂದ ನಂತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ವಿಚಾರಣೆ ನಡೆಸಿದ್ದಾರೆ.

English summary
No Haircuts for dalit youths In Dhulehole Village In Harihara Taluk In Davanagere District.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X