• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ; ಕೋವಿಡ್ ನಿಯಮ ಉಲ್ಲಂಘನೆ, 51. 67 ಲಕ್ಷ ದಂಡ ಸಂಗ್ರಹ

|

ದಾವಣಗೆರೆ, ಅಕ್ಟೋಬರ್ 29: ಕೋವಿಡ್ ನಿಯಮ ಉಲ್ಲಂಘನೆ ಮಾಡುವವರಿಂದ ದಂಡವನ್ನು ಸಂಗ್ರಹ ಮಾಡಲಾಗುತ್ತಿದೆ. ಸೋಂಕು ನಿಯಂತ್ರಣಕ್ಕಾಗಿ ಪ್ರತಿಯೊಬ್ಬರು ಮಾಸ್ಕ್ ಧರಿಸಬೇಕು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ದಾವಣಗೆರೆ ಜಿಲ್ಲೆಯಲ್ಲಿ ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಪಾಡದ 30218 ಜನರಿಂದ ಪೊಲೀಸ್ ಇಲಾಖೆ ಇದುವರೆಗೆ 51.67 ಲಕ್ಷ ರೂ. ದಂಡ ಸಂಗ್ರಹ ಮಾಡಿದೆ. ದಸರಾ ಹಬ್ಬದ ಸಂದರ್ಭದಲ್ಲಿ ಹೆಚ್ಚಿನ ದಂಡವನ್ನು ಸಂಗ್ರಹ ಮಾಡಲಾಗಿದೆ.

ಆರ್. ಆರ್. ನಗರ ಚುನಾವಣೆ; ಕೋವಿಡ್ ಸೋಂಕಿತರು ಮತ ಹಾಕಬಹುದು

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಈ ಕುರಿತು ಮಾಹಿತಿ ನೀಡಿದ್ದಾರೆ. "ಕೋವಿಡ್ ಸೋಂಕು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದೆ. ಜನರೂ ಸಹ ತಮ್ಮ ಜವಾಬ್ದಾರಿಯನ್ನು ನಿರ್ವಹಣೆ ಮಾಡಬೇಕು" ಎಂದು ಹೇಳಿದ್ದಾರೆ.

ಹೊಸ ಕೋವಿಡ್ ಕೇಸ್‌ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ ಕಳವಳ

"ಮಾಸ್ಕ್ ಧರಿಸದರಿಂದ ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳದ ಜನರಿಗೆ ದಂಡ ವಿಧಿಸಲು ಸರ್ಕಾರ ಸೂಚನೆ ನೀಡಿದ್ದು, ಇದರನ್ವಯ ಜಿಲ್ಲೆಯಲ್ಲಿ ಈವರೆಗೆ ಪೊಲೀಸ್ ಇಲಾಖೆಯು 51.67 ಲಕ್ಷ ರೂ. ದಂಡ ಸಂಗ್ರಹಿಸಿದೆ" ಎಂದು ಮಾಹಿತಿ ನೀಡಿದ್ದಾರೆ.

ಪರಿಷತ್ ಚುನಾವಣೆ; ಮತದಾನ ಮಾಡಿದ ಕೋವಿಡ್ ಸೋಂಕಿತರು

ದಾವಣಗೆರೆಯಲ್ಲಿ ಅಕ್ಟೋಬರ್ 23 ರಿಂದ 29 ರವರೆಗೆ 741 ಜನರಿಂದ 1.10 ಲಕ್ಷ ರೂ. ದಂಡ ಸಂಗ್ರಹವಾಗಿದೆ. ಅಕ್ಟೋಬರ್ 25 ಮತ್ತು 26 ರಂದು ಎರಡು ದಿನಗಳ ಅವಧಿಯಲ್ಲಿ 181 ಜನರಿಂದ 29,350 ರೂ. ದಂಡ ಸಂಗ್ರಹಿಸಲಾಗಿದೆ.

"ಜನರು ದಂಡ ಪ್ರಕ್ರಿಯೆಗೆ ಅವಕಾಶ ನೀಡದೆ ಕೋವಿಡ್ ನಿಯಂತ್ರಿಸಲು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಸರ್ಕಾರದ ನಿಯಮಗಳನ್ನು ಪಾಲಿಸುವ ಮೂಲಕ ಸಹಕಾರ ನೀಡಬೇಕು" ಎಂದು ಜಿಲ್ಲಾ ಪೊಲೀಸರು ಕರೆ ನೀಡಿದ್ದಾರೆ.

   car allu mask ಹಾಕ್ಲೇಬೇಕಂತೆ!! ಇಲ್ಲಾ ಅಂದ್ರೆ ಫೈನ್!! | Oneindia kannada

   ಮಾಸ್ಕ್ ಧರಿಸದ ಜನರಿಂದ ನಗರ ಪ್ರದೇಶದಲ್ಲಿ 250 ರೂ.. ಗ್ರಾಮೀಣ ಪ್ರದೇಶದಲ್ಲಿ 100 ರೂ. ದಂಡವನ್ನು ಸಂಗ್ರಹ ಮಾಡಲಾಗುತ್ತಿದೆ. ದಾವಣಗೆರೆ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 20672.

   English summary
   Davanagere police collected 51.67 lakh fine from the people who not wear mask and not follow social distancing.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X