ಹರಿಹರ ಆಸ್ಪತ್ರೆಯಲ್ಲಿ ರೋಗಿಗೆ ಸಿಗದ ಸೂಕ್ತ ಚಿಕಿತ್ಸೆ: ಗೋಳಾಟದ ವಿಡಿಯೋ ವೈರಲ್
ದಾವಣಗೆರೆ, ಮೇ 12: ದಾವಣಗೆರೆ ಜಿಲ್ಲೆ ಹರಿಹರದ ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದ್ದು, ರೋಗಿಯೊಬ್ಬರ ಸಂಬಂಧಿಕರು ಗೋಳಾಡುವ ವಿಡಿಯೋ ವೈರಲ್ ಆಗಿದೆ.
ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಹಾಗೂ ಕೋವಿಡೇತರ ರೋಗಿಗಳು ಹೆಚ್ಚಾಗಿ ಬರುತ್ತಿದ್ದು, ಕೊರೊನಾ ಸೋಂಕಿಗೆ ಜನರು ಬಲಿಯಾಗುತ್ತಿದ್ದಾರೆ. ಚಿಕಿತ್ಸೆಗೆ ಬಂದರೆ ವೈದ್ಯರಾಗಲಿ, ದಾದಿಯರಾಗಲಿ ತಕ್ಷಣಕ್ಕೆ ಸ್ಪಂದಿಸುತ್ತಿಲ್ಲ. ಇದರಿಂದಾಗಿ ಹಲವು ರೀತಿಯ ಸಮಸ್ಯೆಯಾಗಿದೆ ಎಂದು ಆರೋಪಿಸಲಾಗಿದೆ.
ಯಾವ ಆರೋಗ್ಯ ಅಧಿಕಾರಿಗಳು ಇತ್ತ ಗಮನ ಹರಿಸುತ್ತಿಲ್ಲ. ಆಸ್ಪತ್ರೆಗೆ ಬಂದರೆ ಜನರು ಸಾಯುವುದು ಗ್ಯಾರಂಟಿ ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ದೂರು ಕೇಳಿಬಂದಿದೆ.

ಹರಿಹರದ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆಗೆ ಸಂಬಂಧಿಸಿದಂತೆ ಸಂಬಂಧಪಟ್ಟವರಿಗೆ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಆಸ್ಪತ್ರೆಯಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆ ಇಲ್ಲದೆ ಇರುವುದರಿಂದ ಗ್ರಾಮೀಣ ಭಾಗದಿಂದ ಬರುವವರು ಮತ್ತಷ್ಟು ಸಂಕಷ್ಟ ಅನುಭವಿಸುತ್ತಿದ್ದಾರೆ.
Recommended Video
ತಾಲೂಕು ದಂಡಾಧಿಕಾರಿಗಳು ಕೂಡಲೇ ಇತ್ತ ಗಮನ ಹರಿಸಿ ಉತ್ತಮ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಿ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಧಿಕಾರಿಗಳು ಕೂಡಲೇ ಸ್ಪಂದಿಸಬೇಕೆಂದು ಜನರು ಒತ್ತಾಯಿಸಿದ್ದಾರೆ.












Click it and Unblock the Notifications