ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದಾವಣಗೆರೆ; ಎಲ್ಲಾ ತುರ್ತು ಸೇವೆಗೆ ಒಂದೇ ಸಂಖ್ಯೆ "112"

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 6; ಸಾರ್ವಜನಿಕರಿಗೆ ತುರ್ತು ಸಂದರ್ಭದಲ್ಲಿ ಅಗತ್ಯ ಸ್ಪಂದನೆಗಾಗಿ "ತುರ್ತು ಸ್ಪಂದನ ವ್ಯವಸ್ಥೆ-112" ಎಂಬ ಹೊಸ ವ್ಯವಸ್ಥೆಯನ್ನು ರಾಜ್ಯ ಸರ್ಕಾರ ಜಾರಿಗೊಳಿಸಿದ್ದು, ಪೊಲೀಸ್, ಅಗ್ನಿ ಶಾಮಕ, ಆಂಬುಲೆನ್ಸ್ ‍ಗಾಗಿ ಬೇರೆ ಬೇರೆ ಸಹಾಯವಾಣಿಗೆ ಕರೆ ಮಾಡುವ ಅಗತ್ಯವಿಲ್ಲ, 112 ಸಂಖ್ಯೆಗೆ ಕರೆ ಮಾಡಿದರೆ ಸಾಕು ಈ ಎಲ್ಲಾ ಸಮಸ್ಯೆಗಳಿಗೂ ತುರ್ತು ಸೇವೆ ಲಭಿಸಲಿದೆ ಎಂದು ಎಸ್ ಪಿ ಹನುಮಂತರಾಯ ಮಾಹಿತಿ ನೀಡಿದರು.

ಈ ಸೇವೆಯ ಕುರಿತು ಮಾತನಾಡಿದ ಅವರು, ಈ ಸೇವೆ ಅಕ್ಟೋಬರ್ 1 ರಿಂದ ಜಿಲ್ಲೆಯಲ್ಲಿ ಆರಂಭಗೊಂಡಿದೆ. ರಾಜ್ಯದ ಮೂರು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ ಈ ಸಹಾಯವಾಣಿ ಜಾರಿಯಾಗಿದ್ದು ಇದರಲ್ಲಿ ದಾವಣಗೆರೆ ಜಿಲ್ಲೆಯೂ ಇದೆ. ಅಗ್ನಿ ಶಾಮಕ ದಳದ ನೆರವು/ಆಂಬುಲೆನ್ಸ್ ನೆರವು/ಪೊಲೀಸ್ ನೆರವು ಸೇರಿದಂತೆ ಯಾವುದೇ ತುರ್ತು ಸಂದರ್ಭದಲ್ಲಿ 112 ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿದರೆ ಸಾಕು, ಎಮೆರ್ಜೆನ್ಸಿ ರೆಸ್ಪಾನ್ಸ್ ಸಪೋರ್ಟ್ ಸಿಸ್ಟಂ ವ್ಯವಸ್ಥೆಯಡಿ ತುರ್ತಾಗಿ ಸ್ಪಂದಿಸಿ ರಕ್ಷಣೆ ಒದಗಿಸಲಾಗುತ್ತದೆ ಎಂದರು.

ಲಾಕ್‌ಡೌನ್: ಪಡೆದಿದ್ದು ತುರ್ತು ಸೇವೆ ಪಾಸ್, ಆದರೆ ಮಾಡಿದ್ದೇನು ಗೊತ್ತಾ? ಲಾಕ್‌ಡೌನ್: ಪಡೆದಿದ್ದು ತುರ್ತು ಸೇವೆ ಪಾಸ್, ಆದರೆ ಮಾಡಿದ್ದೇನು ಗೊತ್ತಾ?

112ಕ್ಕೆ ಕರೆ ಮಾಡಿದರೆ ನೇರವಾಗಿ ಬೆಂಗಳೂರಿನಿಂದ ಏಕೀಕೃತ ತರ್ತು ಸ್ಪಂದನಾ ಕೇಂದ್ರದ ಮೂಲಕ ಜಿಲ್ಲಾ ಸಮನ್ವಯ ಕೇಂದ್ರಕ್ಕೆ ಸಂಪರ್ಕಿಸಲಾಗುತ್ತದೆ. ಕರೆ ಸ್ವೀಕರಿಸಿದ ತಕ್ಷಣ ಘಟನಾ ಸ್ಥಳಕ್ಕೆ 15 ನಿಮಿಷದಲ್ಲಿಯೇ ಇಆರ್ ‍ಎಸ್‍ಎಸ್ ವಾಹನ ಅಲ್ಲಿಗೆ ತಲುಪಿ ಸಂಕಷ್ಟದಲ್ಲಿರುವವರಿಗೆ ತುರ್ತು ನೆರವಾಗುವ ವ್ಯವಸ್ಥೆ ಇದಾಗಿದೆ ಎಂದರು.

Davanagere: One Number For All Emergency Services For Public

ಇಲಾಖೆಯಿಂದ ದಾವಣಗೆರೆಗೆ ಈ ಉದ್ದೇಶಕ್ಕಾಗಿಯೇ 13 ಬೀಟ್ ವಾಹನ ಪೂರೈಸಲಾಗಿದೆ. ಒಂದು ವಾಹನದಲ್ಲಿ ಎಎಸ್ ‍ಐ, ಕಾನ್ಸ್ ‍ಟೆಬಲ್, ಚಾಲಕ ಸೇರಿ ಮೂರು ಸಿಬ್ಬಂದಿಯಿರುತ್ತಾರೆ. ಸಂರಕ್ಷಣಾ ಸಲಕರಣೆಗಳು ಇಆರ್ ‍ಎಸ್‍ಎಸ್ ವಾಹನದಲ್ಲಿರುತ್ತವೆ. 24x7 ತುರ್ತು ಸ್ಪಂದನಾ ಕರ್ತವ್ಯಕ್ಕೆ ಈಗಾಗಲೇ 65 ಪೊಲೀಸ್ ಅಧಿಕಾರಿಗಳು, 26 ಚಾಲಕ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ದಿನದ 24 ತಾಸು ಪ್ರಾಯೋಗಿಕವಾಗಿ ಚಟುವಟಿಕೆ ಪ್ರಾರಂಭವಾಗಿದೆ ಎಂದು ತಿಳಿಸಿದರು.

ಆಪ್ ಕೂಡ ಲಭ್ಯ: 112 ತುರ್ತು ಸಹಾಯವಾಣಿ ನೆರವು ಪಡೆಯಲು ನೇರ ಕರೆ ಮಾಡಬಹುದು ಅಥವಾ ಗೂಗಲ್ ಪ್ಲೇ ಸ್ಟೋರ್ ಮತ್ತು ಐಓಎಸ್ ಆಪ್ ಸ್ಟೋರ್ ನಲ್ಲಿ ಕೆಪಿಎಸ್ ಆಪ್ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದರು.

Recommended Video

DKS ಮನೆ ಮೇಲೆ ನಡೆದ ದಾಳಿಯ ಹಿಂದಿದೆಯೇ Congress ಒಳಸಂಚು? | Oneindia Kannada

English summary
For emergency services like police, fire, ambulance, people need not to call for different helpline. People can call to "112" for all the emergency services, informed davanagere sp Hanumantharaya,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X