Arecanut price: ಕ್ವಿಂಟಾಲ್‌ ಅಡಿಕೆ ಧಾರಣೆ ಶೀಘ್ರದಲ್ಲೇ 60,000 ರೂ.ಗೆ ಏರಿಕೆ ಸಾಧ್ಯತೆ

Arecanut Price: ರಾಜ್ಯದಲ್ಲಿ ಬೆಳ್ಳಿ, ಬಂಗಾರದಂತೆ ಅಡಿಕೆ ದರದಲ್ಲಿಯೂ ಏರಿಳಿತ ಆಗುತ್ತಿರುತ್ತಲೇ ಇರುತ್ತದೆ. ಅದರಲ್ಲೂ ಚನ್ನಗಿರಿ, ಹೊನ್ನಾಳಿ, ದಾವಣಗೆರೆ ತಾಲೂಕು ಸೇರಿದಂತೆ ಹಲವೆಡೆಯೂ ಅಡಿಕೆಯನ್ನು ಹೆಚ್ಚಾಗಿ ಬೆಳೆಯಲಾಗುತ್ತಿದೆ. ಹಾಗಾದ್ರೆ ಇದೀಗ ಜಿಲ್ಲೆಯಲ್ಲಿ ಇಂದು (ಜುಲೈ 29) ಅಡಿಕೆ ಧಾರಣೆ ಎಷ್ಟಿದೆ ಹಾಗೂ ಮುಂದಿನ ದಿನಗಳಲ್ಲಿ ಎಷ್ಟು ಏರಿಕೆಯಾಗುವ ನಿರೀಕ್ಷೆಯಿದೆ ಎನ್ನುವ ಅಂಕಿಅಂಶಗಳನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ದಾವಣಗೆರೆ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಆಗಿದೆ. ಇದೀಗ ಜಿಲ್ಲೆಯಲ್ಲಿ ಅಡಿಕೆ ಧಾರಣೆ ನಿಧಾನಗತಿಯಲ್ಲಿ ಏರಿಕೆಯಾಗುತ್ತಿದೆ. ಇದೀಗ ಸದ್ಯ ಕ್ವಿಂಟಾಲ್‌ ಅಡಿಕೆ ಗರಿಷ್ಠ ದರ 57,500 ರೂಪಾಯಿ ಆಗಿದೆ. ಇಳಿಕೆಯತ್ತ ಸಾಗಿದ್ದ ದರ ಮತ್ತೆ ಇದೀಗ ತುಸು ಏರಿಕೆ ಆಗಿದೆ. ಇದರಿಂದ ರೈತರ ಮುಖದಲ್ಲಿ ಮಂದಹಾಸ ಮನೆ ಮಾಡಿದೆ.

One Quintal Arecanut Prices Likely to Reach 60 000 in a Few Days

ಚನ್ನಗಿರಿ ರಾಶಿ ಅಡಿಕೆ ಧಾರಣೆ (ಕ್ವಿಂಟಾಲ್‌ಗಳಲ್ಲಿ) ಗರಿಷ್ಠ ದರ 57,500 ರೂಪಾಯಿ, ಕನಿಷ್ಠ ದರ 40,299 ರೂಪಾಯಿ ಇದ್ದು, ಸರಾಸರಿ ಬೆಲೆ 55,527 ರೂಪಾಯಿ ಇದೆ. ಕಳೆದ ಕೆಲ ದಿನಗಳ ಹಿಂದೆ 55,000 ರೂಪಾಯಿಗಿಂತ ಕೆಳಗಿಳಿದಿತ್ತು. ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ವಾಣಿಜ್ಯ ಬೆಳೆಯಾಗಿದೆ.

ಈ ಭಾಗದಲ್ಲಿ ಇದೇ ವರ್ಷದ ಅಂದರೆ 2025ರ ಜನವರಿ ಕೊನೆಯಲ್ಲಿ 52,000 ರೂಪಾಯಿ ಒಳಗಿದ್ದ ಕ್ವಿಂಟಾಲ್‌ ಅಡಿಕೆ ದರ, ಫೆಬ್ರವರಿಯಲ್ಲಿ ಮತ್ತೆ 53,000 ರೂಪಾಯಿ ಗಡಿ ದಾಟಿತ್ತು. ಆಗಿನಿಂದಲೂ ಸತತ ಏರಿಕೆಯಾಗುತ್ತಾ ಬಂದಿತ್ತು. ಏಪ್ರಿಲ್‌ ಅಂತ್ಯದಲ್ಲಿ 60,000 ರೂಪಾಯಿ ಗಡಿ ದಾಟಿತ್ತು. ಮತ್ತೆ ಇದೀಗ 2025ರ ಜುಲೈ ಅಂತ್ಯ ಅಥವಾ ಆಗಸ್ಟ್‌ ಆರಂಭದಲ್ಲೇ ಮತ್ತೆ 60,000 ರೂಪಾಯಿ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಯಾಕಂದ್ರೆ ಕಳೆದ ತಿಂಗಳಿಗೆ ಹೋಲಿಕೆ ಮಾಡಿದ್ರೆ ಈ ತಿಂಗಳು ನಿಧಾನಗತಿಯಲ್ಲಿ ಏರಿಕೆಯತ್ತ ಸಾಗಿದೆ.

ಆದರೆ, ಮೇ ಆರಂಭದಿಂದಲೂ ಜೂನ್‌ ಕೆಲವು ವಾರಗಳವರೆಗೆ ಇಳಿಕೆಯಾಗಿ ಮತ್ತೆ ಏರಿಕೆಯತ್ತ ಸಾಗಿತ್ತು. ಬಳಿಕ ಜೂನ್‌ ತಿಂಗಳ ಮಧ್ಯದಿಂದಲೂ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯಾಗುತ್ತಲೇ ಬಂದಿದೆ. ಆದರೆ, ಇದೀಗ ಮತ್ತೆ ಏರಿಕೆ ಆಗಿದೆ. 2023ರ ಜುಲೈ ತಿಂಗಳಲ್ಲಿ ಗರಿಷ್ಠ ದರ 57,000 ರೂಪಾಯಿ ಮುಟ್ಟಿತ್ತು. ಕಳೆದ ವರ್ಷ 2024ರ ಮೇ ತಿಂಗಳಿನಲ್ಲಿ ಗರಿಷ್ಠ 55,000 ರೂಪಾಯಿಗೆ ಬಂದು ತಲುಪಿತ್ತು.

2025ರ ಜುಲೈ ಮೊದಲ ವಾರದ ಮಧ್ಯದವರೆಗೂ ಇಳಿಕೆಯತ್ತ ಸಾಗುತ್ತಾ ಬಂದಿತ್ತು. ಬಳಿಕ ಏರಿಕೆ ಆಗುತ್ತಲಿದ್ದು, ಮುಂದಿನ ದಿನಗಳಲ್ಲಿ ಕ್ವಿಂಟಾಲ್‌ ಅಡಿಕೆ ದರ ಮತ್ತೆ 60,000 ರೂಪಾಯಿ ದಾಟುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಈಗಾಗಲೇ ಧಾರಣೆಯಲ್ಲಿ ಸುಧಾರಣೆ ಆಗಿದ್ದು, ಇದರಿಂದ ರೈತರು ಮುಖದಲ್ಲಿ ಸಂತಸ ಮನೆ ಮಾಡಿದೆ.

ಕಳೆದ ಬಾರಿ ಮುಂಗಾರು ಮಳೆ ಆರ್ಭಟದಿಂದ ಉತ್ತಮ ಫಸಲು ಏನೋ ಬಂದಿತ್ತು. ಇನ್ನೂ ಈ ಬಾರಿ ಅವಧಿಗೂ ಮುನ್ನ ಮುಂಗಾರು ಎಂಟ್ರಿ ಕೊಟ್ಟಿದೆ. ಈ ಹಿನ್ನೆಲೆ ಉತ್ತಮ ಫಸಲಿನ ಜೊತೆ, ಮತ್ತೆ ಬೆಲೆ ಏರಿಕೆ ಆಗುವ ಭರವಸೆಯಲ್ಲಿ ಅಡಿಕೆ ಬೆಳೆಗಾರರಿದ್ದಾರೆ. ಮತ್ತೊಂದೆಡೆ ಮಳೆಗಾಲದಲ್ಲಿ ಅಡಿಕೆಯನ್ನು ರಕ್ಷಣೆ ಮಾಡಿಕೊಳ್ಳುವುದು ಹೇಗೆ ಎಂಬ ಆತಂಕವೂ ಸಹ ಬೆಳೆಗಾರರನ್ನ ಕಾಡತೊಡಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+