ಪೊಲೀಸ್ ಇಲಾಖೆಯಲ್ಲಿ ಅತ್ಯುನ್ನತ ಸೇವೆ: ದಾವಣಗೆರೆಯ ಆರಕ್ಷರಿಗೆ ರಾಷ್ಟ್ರಪತಿ ಪದಕ
ದಾವಣಗೆರೆ, ಜನವರಿ 9: ಸ್ವಾತಂತ್ರ್ಯೋತ್ಸವದ ನಿಮಿತ್ತ ನೀಡಲಾಗುವ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿರುವ ದಾವಣಗೆರೆ ಜಿಲ್ಲೆಯ ಇಬ್ಬರು ಪೊಲೀಸರಿಗೆ ರಾಜ್ಯಪಾಲ ವಿ.ಆರ್ ವಾಲಾ ಅವರು ರಾಜಭವನದಲ್ಲಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಗುರುವಾರ ಪ್ರಶಸ್ತಿ ನೀಡಿದರು.
ಪೊಲೀಸ್ ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ದಾವಣಗೆರೆಯ ಡಿಸಿಆರ್‌ಬಿ ಡಿವೈಎಸ್ಪಿ ಬಿ.ಎಸ್.ಬಸವರಾಜ್ ಹಾಗೂ ಎಸ್ಪಿ ಕಚೇರಿಯ ಗಣಯಂತ್ರ ವಿಭಾಗದ ರಾಮಚಂದ್ರ ಬಿ.ಜಾಧವ್ ಪ್ರಶಸ್ತಿ ಸ್ವೀಕರಿಸಿದರು.
ಡಿವೈಎಸ್ಪಿ ಬಸವರಾಜ್
ಡಿವೈಎಸ್ಪಿ ಬಸವರಾಜ್ ಅವರು ಮೂಲತಃ ಬಿಜಾಪುರ ಜಿಲ್ಲೆಯ ಬಸವನಬಾಗೆವಾಡಿಯವರಾಗಿದ್ದು, 2001ರಲ್ಲಿ ಪಿಎಸ್‌ಐ ಆಗಿ ಪೊಲೀಸ್ ಇಲಾಖೆಗೆ ಸೇರಿದರು. 18 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿದ್ದು, ಸೂಕ್ಷ್ಮ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ತಡೆಗಟ್ಟುವುದು, ಪ್ರಕರಣ ಪತ್ತೆ ಹೆಚ್ಚುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ನಕ್ಸಲ್ ನಿಗ್ರಹದಳ, ಶಿಕಾರ ಗ್ಯಾಂಗ್ ಪತ್ತೆ, ಸಮಾಜಮುಖಿ ಕಾರ್ಯಗಳನ್ನು ಮಾಡಿದ್ದಾರೆ. 2011ರಲ್ಲಿ ಸಿಎಂ ಪದಕ ಪಡೆದಿದ್ದಾರೆ. ಮುತ್ತುಕಟ್ಟುವ ಪದ್ಧತಿ ನಿಯಂತ್ರಿಸುವಲ್ಲಿ ಇವರ ಪಾತ್ರ ಪ್ರಮುಖವಾಗಿದೆ. 31 ರಿವಾರ್ಡ್‌ಗಳನ್ನು ಪಡೆದಿದ್ದಾರೆ. ಹಲವಾರು ಪುಸ್ತಕ ಬರೆದಿದ್ದಾರೆ. ಹರಪನಹಳ್ಳಿ, ತೀರ್ಥಹಳ್ಳಿ, ಎಸ್‌ಐಟಿ, ಲೋಕಾಯುಕ್ತದಲ್ಲಿ ಸೇವೆ ಸಲ್ಲಿಸಿದ್ದಾರೆ.
ರಾಮಚಂದ್ರ ಬಿ ಜಾಧವ್
ಇವರು ಜಿಲ್ಲಾ ಪೊಲೀಸ್ ಕಚೇರಿಯ ಗಣಕಯಂತ್ರ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದಾರೆ. 1994ರಲ್ಲಿ ಸೇವೆಗೆ ಸೇರಿದ್ದು, 25 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ. 68 ರಿವಾರ್ಡ್ ಪಡೆದಿದ್ದಾರೆ. 2014ರಲ್ಲಿ ಸಿಎಂ ಪದಕ ಸಿಕ್ಕಿದೆ. ಉತ್ತಮ ಕಂಪ್ಯೂಟರ್ ಜ್ಞಾನ, ವಿಶೇಷ ಕ್ರಿಯಾತ್ಮಕ ಕಾರ್ಯದಿಂದ ಪತ್ತೆಯಾಗದೇ ಇರುವಂತಹ ಹಲವಾರು ಸೂಕ್ಷ್ಮ ಪ್ರಕರಣಗಳನ್ನು ಪತ್ತೆ ಮಾಡಿಕೊಡುವಲ್ಲಿ ಸಹಕರಿಸಿದ್ದಾರೆ.

ಸೈಬರ್ ಕ್ರೈಂ ಮತ್ತು ತಾಂತ್ರಿಕ ಪರಿಣಿತಿಯ ಮೇಲೆ ಪ್ರಕರಣ ಪತ್ತೆ ಮಾಡುವ ಕೌಶಲ್ಯ ಹೊಂದಿದ್ದಾರೆ. 34 ಬಾರಿ ರಕ್ತದಾನ ಮಾಡಿದ್ದು, ಸೈಕ್ಲಿಂಗ್ ಮತ್ತು ಅತ್ಯುತ್ತಮ ಯೋಗಪಟುವಾಗಿದ್ದಾರೆ. ಅಲ್ಲದೇ ತಂತ್ರಜ್ಞಾನದಲ್ಲಿ ದಾವಣಗೆರೆ ಜಿಲ್ಲೆ ಮಂಚೂಣಿಯಾಗಿರಲು ಪ್ರಮುಖ ಪಾತ್ರವಹಿಸಿದ್ದಾರೆ. ಪದಕ ವಿಜೇತರಿಗೆ ಕಚೇರಿಯಲ್ಲಿ ಎಸ್ಪಿ ಹನುಮಂತರಾಯ, ಡಿವೈಎಸ್ಪಿ ರಾಜೀವ್ ಎಂ. ಅಭಿನಂದಿಸಿದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications