ಎಸ್ಟಿಗೆ ಕುರುಬ ಸಮುದಾಯ ಸೇರಿಸಲು ಆಗ್ರಹಿಸಿ ಜ.15ರಿಂದ ಪಾದಯಾತ್ರೆ
ದಾವಣಗೆರೆ, ಡಿಸೆಂಬರ್ 6; ರಾಜ್ಯದಲ್ಲಿರುವ 70 ಲಕ್ಷ ಕುರುಬ ಸಮುದಾಯದ ಜನರಿಗೆ ಸಾಮಾಜಿಕ ನ್ಯಾಯ ಕೊಡಿಸಬೇಕು ಎಂಬ ಉದ್ದೇಶದಿಂದ ಜನವರಿ 15ರಿಂದ ಕಾಗಿನೆಲೆಯಿಂದ ಬೆಂಗಳೂರಿಗೆ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ದಾವಣಗೆರೆಯಲ್ಲಿ ಎಸ್.ಟಿ ಹೋರಾಟ ಸಮಿತಿಯಿಂದ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಎಸ್‌ಟಿ ಹೋರಾಟದ ಬೇಡಿಕೆ ಇವತ್ತಿನದಲ್ಲ. ಬಹಳ ಹಿಂದಿನಿಂದಲೂ ಹೋರಾಟ ನಡೆದುಕೊಂಡು ಬಂದಿದೆ. ಕೆಲವೊಂದು ಮೇಲ್ವರ್ಗದ ಜಾತಿಯವರಿಗೆ ಏನು ಮಾಡದೇ ಇದ್ದರೂ ಸವಲತ್ತುಗಳು ಸಿಗುತ್ತವೆ. ಆದರೆ ಹಿಂದುಳಿದ ವರ್ಗದವರು ಅನಿವಾರ್ಯವಾಗಿ ಹೋರಾಟ ಮಾಡಿ ಸವಲತ್ತುಗಳನ್ನು ಪಡೆದುಕೊಳ್ಳಬೇಕಿದೆ' ಎಂದು ವಿಷಾದ ವ್ಯಕ್ತಪಡಿಸಿದರು.
'ಬೀದರ್, ಕಲಬುರ್ಗಿ, ಯಾದಗಿರಿಗಳ ಜೊತೆಗೆ ಅಖಂಡ ಕರ್ನಾಟಕದ ಕುರುಬರನ್ನು ಎಸ್‌ಟಿಗೆ ಸೇರಿಸಬೇಕು ಎಂದು ಕಳೆದ ವಾರ ದೆಹಲಿಗೆ ಹೋಗಿ ಮನವಿ ಮಾಡಿದ್ದೆವು. ಇದಕ್ಕೆ ಸ್ಪಂದಿಸಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವೆ ರೇಣುಕಾ ಸಿಂಗ್ ಮೀಸಲಾತಿ ಸಂಬಂಧ ಸಮುದಾಯದ ಮುಖಂಡರ ಜೊತೆ ಸಭೆ ನಡೆಸಿದ್ದಾರೆ' ಎಂದರು.

ಒಂದು ದಿನಕ್ಕೆ ಎರಡು ತಾಲ್ಲೂಕು, ಒಂದು ಜಿಲ್ಲೆ: '23 ದಿನಗಳ ಕಾಲ ನಡೆಯುವ ಪಾದಯಾತ್ರೆ ಹಾವೇರಿ, ದಾವಣಗೆರೆ, ಚಿತ್ರದುರ್ಗ, ತುಮಕೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ಒಂದು ದಿನಕ್ಕೆ ಎರಡು ತಾಲ್ಲೂಕು ಅದರ ಜೊತೆಗೆ ರಾಜ್ಯದ ಒಂದು ಜಿಲ್ಲೆ ಪಾಲ್ಗೊಳ್ಳಬೇಕು. ಆ ಪ್ರಕಾರ ದಿನಾಂಕ ನಿಗದಿಪಡಿಸುತ್ತೇವೆ' ಎಂದು ನಿರಂಜನಾನಂದಪುರಿ ಶ್ರೀ ಮಾಹಿತಿ ನೀಡಿದರು.
'ಎಸ್‌ಟಿ ಹೋರಾಟ ಸಮಿತಿ, ಕಾಗಿನೆಲೆ ಮಹಾ ಸಂಸ್ಥಾನ ಗುರುಪೀಠ ಹಾಗೂ ಎಲ್ಲಾ ಸಂಘಟನೆಗಳು ಪಾದಯಾತ್ರೆಯನ್ನು ವ್ಯವಸ್ಥಿತವಾಗಿ ಮಾಡಬೇಕು. ಎಲ್ಲ ಭಿನ್ನಾಭಿಪ್ರಾಯಗಳನ್ನು ಬಿಟ್ಟು ಗುರಿ ಮುಟ್ಟುವ ತನಕ ಹೋರಾಡಬೇಕು' ಎಂದರು. ಸಮಾಜದ ಮುಖಂಡರಾದ ಬಿ.ಎಂ.ಸತೀಶ್, ಮಂಜುನಾಥ್, ಹದಡಿ ನಿಂಗಪ್ಪ, ಬಿ.ಎಚ್. ಪರಶುರಾಮಪ್ಪ, ಕುಣೆಬೆಳೆಕೇರಿ ದೇವೇಂದ್ರಪ್ಪ, ಪಿ.ಜೆ. ರಮೇಶ್, ಕುಂಬಳೂರು ವಿರೂಪಾಕ್ಷಪ್ಪ, ಜಿ.ಸಿ.ಲಿಂಗಪ್ಪ, ರಾಜು ಮೌರ್ಯ ಮಾತನಾಡಿದರು. ಸಭೆಯಲ್ಲಿ ಸಮಾಜದ ಮುಖಂಡರಾದ ಎಚ್.ಬಿ. ಗೋಣೆಪ್ಪ, ಎಚ್.ಎನ್.ಗುರುನಾಥ್, ಎಚ್.ಜಿ. ಸಂಗಪ್ಪ, ಸುನಂದಮ್ಮ ಪರಶುರಾಮಪ್ಪ, ಮುದಹದಡಿ ದಿಳ್ಯಪ್ಪ ಭಾಗವಹಿಸಿದ್ದರು.
Recommended Video
-
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ












Click it and Unblock the Notifications