ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊರೊನಾ ಅಲ್ಲ; ಕೊರೊನೇತರ ಸಮಸ್ಯೆಗೆ ಚಿಕಿತ್ಸೆ ಸಿಗದೇ ಹೆಚ್ಚಿದೆ ಸಾವು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜುಲೈ 27: ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಎಲ್ಲರ ಚಿತ್ತವೂ ಕೊರೊನಾ ಸೋಂಕಿನತ್ತಲೇ ಇದೆ. ಹೀಗಾಗಿ ದಾವಣಗೆರೆಯಲ್ಲಿ ಕೊರೊನೇತರ ಸಮಸ್ಯೆಗಳಿಗೆ ಚಿಕಿತ್ಸೆ ಸಿಗದೇ ಸಾವನ್ನಪ್ಪುತ್ತಿರುವ ಸಂಗತಿಯೂ ನಡೆದಿದೆ.

Recommended Video

EMISAT ಪ್ರಕಾರ India China Border ನಲ್ಲಿ ಇನ್ನು ಬೆಂಕಿ ಆರಿಲ್ಲ | Oneindia Kannada

ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ರೋಗಿಗಳ ದಾಖಲಾತಿ ಮಾಡಿಕೊಂಡು ಚಿಕಿತ್ಸೆ ನೀಡಲು ಹಿಂದೇಟು‌ ಹಾಕುತ್ತಿದ್ದು, ಸಹಜ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಸಿಗದೇ ಸಾವು ಕಾಣುತ್ತಿರುವ ಉದಾಹರಣೆಗಳೂ ದೊರೆಯುತ್ತಿವೆ.

ಕೊರೊನಾ ವೈರಸ್ ನಿಂದ ದಾವಣಗೆರೆಯಲ್ಲಿ ಸಾವಿನ ಸಂಖ್ಯೆ ರಾಜ್ಯದ ಸರಾಸರಿಗಿಂತ ಹೆಚ್ಚಾಗಿದೆ: ಡಿಸಿಕೊರೊನಾ ವೈರಸ್ ನಿಂದ ದಾವಣಗೆರೆಯಲ್ಲಿ ಸಾವಿನ ಸಂಖ್ಯೆ ರಾಜ್ಯದ ಸರಾಸರಿಗಿಂತ ಹೆಚ್ಚಾಗಿದೆ: ಡಿಸಿ

ಜುಲೈ 24 ರಂದು ಹಾವೇರಿಯಿಂದ ಬಂದ ಕುಟುಂಬವೊಂದು ಇದೇ ಕಾರಣಕ್ಕೆ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಟ ನಡೆಸಿದೆ. ಹಾವೇರಿಯ ಮಂಜಪ್ಪ (40) ಎಂಬುವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದು, ಅವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಕೊರೊನಾ ಪರೀಕ್ಷೆ ಮಾಡಿಸಲಾಗಿದ್ದು, ನೆಗೆಟಿವ್‌ ಎಂದು ವರದಿ ಬಂದ ನಂತರ ಬೇರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ವೈದ್ಯರು ಶಿಫಾರಸು ಮಾಡಿದ್ದರು. ಅದರಂತೆ ಮೊದಲು ಚಿಗಟೇರಿ ಆಸ್ಪತ್ರೆಗೆ ಬಂದಿದ್ದಾರೆ. ಅಲ್ಲಿ ಕೊವಿಡ್ ಆಸ್ಪತ್ರೆ ಎಂದು ಸೇರಿಸಿಕೊಂಡಿಲ್ಲ. ಅಲ್ಲಿಂದ ಎಸ್‌ಎಸ್‌ ಹೈಟೆಕ್ ಆಸ್ಪತ್ರೆ, ಆರೈಕೆ, ಬಾಪೂಜಿ ಆಸ್ಪತ್ರೆಗಳಿಗೆ ಅಲೆದಿದ್ದಾರೆ. ಆದರೆ ಬೆಡ್ ಇಲ್ಲ ಎಂದು ನೆಪವೊಡ್ಡಿ ವಾಸಪ್ ಕಳಿಸಿದ್ದಾರೆ. ರೋಗಿ ಆಂಬುಲೆನ್ಸ್ ‌ನಲ್ಲೇ ದಿನವಿಡೀ ಕಳೆದಿದ್ದು, ಸಂಜೆಯವರೆಗೆ ಕಾದು ಕೊನೆಗೆ ಶಿವಮೊಗ್ಗಕ್ಕೆ ಹೋಗಿದ್ದಾರೆ.

Patients With Health Problems Other Than Covid Not Getting Treatment In Davanagere

ನಿನ್ನೆಯೂ ಇಂಥದ್ದೇ ಒಂದು ಘಟನೆ ನಡೆದಿದೆ. ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಪೌರಕಾರ್ಮಿಕರೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಕುಮಾರ್ (35) ಎಂಬಾತ ಸಿಜಿ ಆಸ್ಪತ್ರೆಯಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಗದೇ ಮೃತಪಟ್ಟಿದ್ದರು.

ಇದೀಗ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ರೋಗಿಗಳ ನಿರ್ಲಕ್ಷ್ಯ ಮಾಡಿದ್ದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಬೆಡ್‌ ಇಲ್ಲ ಎಂದು ವಾಪಸ್‌ ಕಳುಹಿಸಿದರೆ ಕ್ರಮ ತೆಗೆದುಕೊಳ್ಳುವುದಾಗಿ ಡಿಸಿ ಮಹಾಂತೇಶ ಬೀಳಗಿ ಎಚ್ಚರಿಸಿದ್ದಾರೆ.

English summary
Patients with health problems other than coronavirus not getting proper treatment in davanagere. Davangere dc Mahantesha beelagi warned the hospitals,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X