ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಚಿತವಾಗಿ ಸಿಗಲಿದೆ ಜಾಗ; ಬೇಲಿ ಹಾಕಲು ಓಡೋಡಿ ಬಂದ ಜನರು!

|
Google Oneindia Kannada News

ದಾವಣಗೆರೆ, ಜನವರಿ 31; 150 ಎಕರೆ ಜಾಗವನ್ನು ಉಚಿತವಾಗಿ ನೀಡಲಾಗುತ್ತದೆ ಎಂಬ ಸುದ್ದಿ ಕೇಳಿದ ಜನರು ಬೇಲಿ ಹಾಕಲು ಓಡೋಡಿ ಬಂದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಶೆಡ್‌ ಗಳನ್ನು ನಿರ್ಮಿಸಿಕೊಳ್ಳಲು ಸರ್ಕಾರ ಅವಕಾಶ ನೀಡಿದೆ ಎಂಬ ವದಂತಿ ಕಾಡ್ಗಿಚ್ಚಿನಂತೆ ಹರಡಿತ್ತು.

ಭಾನುವಾರ ವದಂತಿ ನಂಬಿ ಓಡೋಡಿ ಬಂದಿದ್ದ ಜನರು ಬೇಸ್ತು ಬಿದ್ದು ವಾಪಸ್ ಆದ ಘಟನೆ ಚನ್ನಗಿರಿ ತಾಲೂಕಿನ ಚಿಕ್ಕುಲಿಕೆರೆ ಸರ್ವೆ ನಂ.91 ಹಾಗೂ ಲಕ್ಷ್ಮೀಸಾಗರ ಸರ್ವೆ ನಂ.15ರಲ್ಲಿ ನಡೆದಿದೆ. ಅರಣ್ಯ ನಿರ್ಮಾಣಕ್ಕಾಗಿ ಈ ಭೂಮಿಯನ್ನು ಕಾಯ್ದಿರಿಸಲಾಗಿತ್ತು.

120 ಕೋಟಿ ರೂ. ವೆಚ್ಚದಲ್ಲಿ ದಾವಣಗೆರೆ ಬಸ್ ನಿಲ್ದಾಣ ಪುನರ್ ನಿರ್ಮಾಣ120 ಕೋಟಿ ರೂ. ವೆಚ್ಚದಲ್ಲಿ ದಾವಣಗೆರೆ ಬಸ್ ನಿಲ್ದಾಣ ಪುನರ್ ನಿರ್ಮಾಣ

davanagere

ಪುರಸಭೆಯಿಂದ ನಿರ್ಮಾಣಗೊಂಡಿರುವ ಕಸ ತ್ಯಾಜ್ಯ ವಿಲೇವಾರಿ ಘಟಕದ ಸಮೀಪದಲ್ಲಿ ಅರಣ್ಯ ಇಲಾಖೆಗೆ ಸಂಬಂಧಿಸಿದ ಸುಮಾರು150 ಎಕರೆ ಸರ್ಕಾರಿ ಜಾಗವಿದೆ. ಈ ಜಾಗದಲ್ಲಿ ಶೆಡ್ ಗಳನ್ನು ನಿರ್ಮಿಸಿಕೊಳ್ಳಲು ಸರ್ಕಾರ ಅವಕಾಶ ನೀಡಿದೆ ಎಂಬ ವದಂತಿ ಹರಡಿತ್ತು.

ದಾವಣಗೆರೆ; 13 ಕುಟುಂಬಗಳಿಗೆ ಆಘಾತ ತಂದ ಧಾರವಾಡದ ಅಪಘಾತ ದಾವಣಗೆರೆ; 13 ಕುಟುಂಬಗಳಿಗೆ ಆಘಾತ ತಂದ ಧಾರವಾಡದ ಅಪಘಾತ

ಸಾವಿರಾರು ಜನರು ಗುಂಪು ಗುಂಪಾಗಿ ಸ್ಥಳಕ್ಕೆ ಆಗಮಿಸಿ ಶೆಡ್ ಗಳನ್ನು ನಿರ್ಮಿಸಲು ಮುಂದಾದರು. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯ ಇಲಾಖೆ ಸಿಬ್ಬಂದಿ, ಅರಣ್ಯ ಇಲಾಖೆ ಮತ್ತು ಗೋಮಾಳಕ್ಕೆ ಮೀಸಲಿಟ್ಟಿರುವ ಪ್ರದೇಶವಾಗಿದೆ. ಇಲ್ಲಿ ಮನೆಗಳನ್ನು ನಿರ್ಮಾಣ ಮಾಡಿಕೊಳ್ಳುವಂತಿಲ್ಲ ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟರು.

ಎಂಪಿಎಂ ಪೇಪರ್ ಮಿಲ್ಸ್, ನೀಲಗಿರಿ, ಅರಣ್ಯ, ಭೂ ಮಾಫಿಯಾ ಇತ್ಯಾದಿಎಂಪಿಎಂ ಪೇಪರ್ ಮಿಲ್ಸ್, ನೀಲಗಿರಿ, ಅರಣ್ಯ, ಭೂ ಮಾಫಿಯಾ ಇತ್ಯಾದಿ

ಸರ್ಕಾರದಿಂದ ಉಚಿತವಾಗಿ ಜಾಗ ಸಿಗುತ್ತದೆ ಎಂಬ ವದಂತಿ ಹರಡಿದ್ದರಿಂದ ಚನ್ನಗಿರಿ ಹಾಗೂ ಸುತ್ತಮುತ್ತಲಿನ ಸಾರ್ವಜನಿಕರು ಇಷ್ಟು ಜಾಗ ನನ್ನದು ಎಂದು ಗುದ್ದಲಿ ತಂದು ಮರದ ಗೂಟಗಳನ್ನು ನೆಟ್ಟು, ಅದಕ್ಕೆ ಹಳೆಯ ಸೀರೆಗಳನ್ನು ಸುತ್ತಲೂ ಕಟ್ಟಿಕೊಂಡು ಇಷ್ಟು ಜಾಗ ನನ್ನದು ಎಂದು ಗುರುತು ಮಾಡಿದ್ದರು.

land

ಮತ್ತೊಂದು ಕಡೆ ಮನೆ ನಿರ್ಮಾಣ ಮಾಡಿಕೊಳ್ಳಲು ಜಾಗ ಸಿಗುತ್ತದೆ ಎಂದು ಮನೆಯಿಲ್ಲದ ಜನರು ತಮ್ಮ ಕೆಲಸ ಕಾರ್ಯ ಬಿಟ್ಟು ಕುಟುಂಬ ಸಮೇತರಾಗಿ ಬಂದಿದ್ದರು. ಸ್ಥಳದಲ್ಲಿದ್ದ ಅಧಿಕಾರಿಗಳನ್ನು ಕಂಡು ಅಲ್ಲಿಂದ ಕಾಲ್ಕಿತ್ತರು.

ಪುರಸಭೆ ಸದಸ್ಯನಿಂದ ವದಂತಿ: ಕಸ ವಿಲೇವಾರಿ ಘಟಕದ ಸುತ್ತಮುತ್ತ ಸರ್ಕಾರಿ ಜಾಗವಿದೆ. ಅಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಿ ಯಾರೂ ಏನೂ ಮಾಡುವುದಿಲ್ಲ ಎಂದು ಪುರಸಭೆ ಸದಸ್ಯನೊಬ್ಬ ವದಂತಿ ಹಬ್ಬಿಸಿದ್ದಾನೆ .

Recommended Video

Union Budget : ನಮ್ಮ ರಾಜ್ಯದಲ್ಲಿ ಸಾಕಷ್ಟು ಬದಲಾವಣೆ ಆಗತ್ತೆ | R Ashok | Oneindia Kannada

ಆದರೆ, ಆತ ಯಾರೆಂಬುದು ಇದುವರೆಗೂ ತಿಳಿದುಬಂದಿಲ್ಲ ಎಂದು ಅಧಿಕಾರಿಗಳು ಹೇಳಿದರು.
"ಜನರು ಯಾರೋ ಹೇಳಿದ ವದಂತಿ ನಂಬಿ ಅರಣ್ಯ ಇಲಾಖೆ ಜಾಗದಲ್ಲಿ ಮನೆಗಳನ್ನು ನಿರ್ಮಿಸಿಕೊಳ್ಳಲು ಮುಂದಾಗಿದ್ದರು. ಜನರಿಗೆ ಮನವರಿಕೆ ಮಾಡಿ ಕಳುಹಿಸಲಾಗಿದೆ" ಎಂದು ಮಾವಿಕಟ್ಟೆ ವಲಯ ಅರಣ್ಯಧಿಕಾರಿ ಮಾವಿನಹೊಳೆಯಪ್ಪ ಹೇಳಿದರು.

English summary
People rushed to acquire 150 acre of land in Chennagiri, Davanagere. Land belongs to forest department.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X