ಪಾಕಿಸ್ತಾನಿ ಪ್ರಜೆಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರು-ಇಲ್ಲಿದೆ ರೋಚಕ ಕಹಾನಿ

ದಾವಣಗೆರೆ, ಅಕ್ಟೋಬರ್, 2: ಹಿಂದೂ ಎಂಬ ಹೆಸರಿನಲ್ಲಿ ಮುಖವಾಡ ಹಾಕಿಕೊಂಡು ಬೇರೆ ದೇಶದವರು ಭಾರತದಲ್ಲಿ ನೆಲೆಯೂರಿರುವರರನ್ನು ಪೊಲೀಸರು ಹೆಡೆಮುರಿಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ. ಇದೀಗ ಹಿಂದೂಗಳ ಹೆಸರಿಟ್ಟುಕೊಂಡು ದಾವಣಗೆರೆಯಲ್ಲಿ ವಾಸವಿದ್ದ ಪಾಕಿಸ್ತಾನಿ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಹಾಗಾದರೆ ಇವರೆಲ್ಲ ಇಷ್ಟು ದೊನ ಏನು ಕೆಲಸ ಮಾಡಿಕೊಂಡಿದ್ದರು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಹಿಂದೂಗಳ ಹೆಸರನ್ನು ಇಟ್ಟುಕೊಂಡು ದಾವಣಗೆರೆಯ ಶಿವಕುಮಾರ ಸ್ವಾಮಿ ಬಡಾವಣೆಯಲ್ಲಿ ವಾಸ ಇದ್ದ ಪಾಕಿಸ್ತಾನದ ಪ್ರಜೆಗಳನ್ನು ಬೆಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಮಹಿಳೆ ನಕಲಿ ದಾಖಲೆ ಸೃಷ್ಟಿಸಿ ಭಾರತದಲ್ಲಿ ನೆಲೆಯೂರಿದ್ದಾರು. ಈ ಮಹಿಳೆಯನ್ನು ಫಾತಿಮಾ ಎಂದು ಗುರುತಿಸಲಾಗಿದ್ದು, ದಾವಣಗೆರೆಯ ಅಲ್ತಾಫ್ ಜೊತೆ ವಿವಾಹವಾಗಿದ್ದಳು ಎಂದು ತಿಳಿದುಬಂದಿದೆ.

Police arrested Pakistani Citizens in Bengaluru Know details

ಇನ್ನು ಮೊಹಮ್ಮದ್ ಹನೀಫ್ ಎಂಬಾತನನ್ನು ಪೊಲೀಸರು ಬಂಧಿಸಿದ್ದು, ಈತ ಕೂಡ ಪಾಕಿಸ್ತಾನದವನಾಗಿದ್ದಾನೆ. ಹನೀಫ್ ಸೊಸೆ, ಮಗಳು, ಅಳಿಯನನ್ನೂ ಬಂಧಿಸಿದ್ದಾರೆ. ರಶೀದ್ ಅಲಿ ಸಿದ್ದಿಕಿ ಎಂಬಾತನ ಮಾವ ಮೊಹಮ್ಮದ್ ಹನೀಫ್ ಬೆಂಗಳೂರಿನಲ್ಲಿ ಸೆರೆ ಸಿಕ್ಕಿರುವ ಪ್ರಮುಖ ಆರೋಪಿ ಆಗಿದ್ದಾನೆ.

ಸಿದ್ದಿಕಿ ಮೊಹಮ್ಮದ್ ಯಾಸಿನ್ (ಮಗ), ಜೈನಾಬಿ ನೂರ್ (ಸೊಸೆ), ಫಾತಿಮಾ (ಮಗಳು), ಅಲ್ತಾಫ್ ಬಂಧಿತ ಆರೋಪಿಗಳಾಗಿದ್ದಾರೆ. ಅಲ್ತಾಫ್ ಪತ್ನಿ ಫಾತಿಮಾ ಪಾಕಿಸ್ತಾನದ ಪ್ರಜೆಯಾಗಿದ್ದಾಳೆ. ಬಂಧಿತರ ಪೈಕಿ ರಶೀದ್ ಅಲಿ ಸಿದ್ದಿಕಿ ಶಂಕರ್ ಶರ್ಮಾ (48) ಎಂದು ಹೆಸರಿಟ್ಟುಕೊಂಡಿದ್ದರೆ, ಆಯೇಷಾ ಹನೀಫ್ ಅಲಿಯಾಸ್ ಆಶಾ ಶರ್ಮಾ (38), ಮೊಹಮ್ಮದ್ ಹನೀಫ್ ಅಲಿಯಾಸ್ ರಾಮ್ ಬಾಬಾ ಶರ್ಮಾ (73) ರುಬೀನಾ ಅಲಿಯಾಸ್ ರಾಣಿ ಶರ್ಮಾ (61) ಎಂದು ಹೆಸರುಗಳನ್ನು ಇಟ್ಟುಕೊಂಡಿದ್ದರು ಎಂದು ಪೊಲೀಸರ ತನಿಖೆ ವೇಳೆ ತಿಳಿದುಬಂದಿದೆ.

ಇನ್ನು ಬೆಂಗಳೂರಿನ ಜಿಗಣಿಯಲ್ಲಿ ಪಾಕಿಸ್ತಾನ ಪ್ರಜೆಗಳು ಬಂಧನವಾಗಿರುವ ಸಂಬಂಧ ಹೆಚ್ಚಿನ ತನಿಖೆಗಾಗಿ ಡಿವೈಎಸ್​ಪಿ ಮೋಹನ್​ಕುಮಾರ್ ನೇತೃತ್ವದಲ್ಲಿ ಪೊಲೀಸರ 4 ತಂಡಗಳನ್ನು ರಚಿಸಲಾಗಿದೆ. ಬನ್ನೇರುಘಟ್ಟ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್, ಜಿಗಣಿ ಪೊಲೀಸ್ ಠಾಣೆ ಇನ್ಸ್‌​ಪೆಕ್ಟರ್ ಮಂಜುನಾಥ್, ಅತ್ತಿಬೆಲೆ ಪೊಲೀಸ್ ಠಾಣೆ ಇನ್ಸ್‌​ಪೆಕ್ಟರ್ ರಾಘವೇಂದ್ರ, ಸರ್ಜಾಪುರ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ನವೀನ್​, ಕುಮಾರ್ ಅವರ ತಂಡ ರಚನೆ ಮಾಡಲಾಗಿದೆ.

ಈ ತನಿಖಾ ತಂಡಗಳು ನವದೆಹಲಿ, ಚೆನ್ನೈ, ಬೆಳಗಾವಿ, ಮುಂಬೈ ಸೇರಿ ಹಲವೆಡೆ ತೆರಳಿ ಮಾಹಿತಿ ಸಂಗ್ರಹಿಲಿವೆ ಎಂದು ತಿಳಿದುಬಂದಿದೆ.

ಗ್ರಾಮ ಲೆಕ್ಕಾಧಿಕಾರಿ ಅಮಾನತು: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಕೆಆರ್ ಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾಸೇಗೌಡ ಅವರನ್ನು ಸೋಮವಾರ (ಅಕ್ಟೋಬರ್ 1) ಜಿಲ್ಲಾಧಿಕಾರಿ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದಕ್ಕೆ ಕಾರಣ ಏನು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಲಂಚ ತಗೊಂಡಿದ್ದಾರೆ ಎಂಬ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಪುಲ್ ವೈರಲ್ ಆಗಿದ್ದು, ಈ ಹಿನ್ನೆಲೆ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಅವರನ್ನು ಜಿಲ್ಲಾಧಿಕಾರಿ ಅಮಾನತು ಮಾಡಿ ಅದೇಶ ಹೊರಡಿಸಿದದ್ದಾರೆ.

ಆದೇಶ ಕಾಪಿ: ಸೆಪ್ಟೆಂಬರ್‌ 30ರಂದು ತಮ್ಮ ಜಮೀನು ಕೆಲಸದ ವಿಚಾರವಾಗಿ ಹಿರಿಯೂರು ತಾಲ್ಲೂಕಿನ ವ್ಯಕ್ತಿಯೊಬ್ಬರು ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಜಿ.ಎಂ. ಬಳಿ ಹೋಗಿದ್ದು, ಈ ವೇಳೆ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಆಗ ಆ ವ್ಯಕ್ತಿ "ಹಣ ತಗೊಳಿ ಸಾರ್‌ ಎಂದು ಹೇಳಿದ್ದಾರೆ. ಅಧಿಕಾರಿ ನಾನು ಆರ್.ಐ.ಗೆ ಕೊಡಬೇಕು, ಅವರಿಗೆ, ಇವರಿಗೆ ಕೊಡಬೇಕು. ನನಗೆ ಉಳಿಯುವುದು 500 ರೂಪಾಯಿ ಅಷ್ಟೇ," ಎನ್ನುವ ಸಂಭಾಷಣೆ ವೈರಲ್‌ ಆಗಿದೆ.

ಲಂಚ ಪಡೆಯುತ್ತಿರುವ ಪಡೆಯುತ್ತಿರುವ ದೃಶ್ಯ ಸೆರೆಯಾಗಿರುವ ವಿಡೀಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ನೌಕರರಿಗೆ ಸದರಿ ವಿಷಯವಾಗಿ ಕಾರಣ ಕೇಳಿ ನೋಟೀಸ್ ನೀಡಲಾಗಿರುತ್ತದೆ ಎಂದು ಈ ಪ್ರಾಧಿಕಾರಕ್ಕೆ ವರದಿ ಮಾಡಿರುತ್ತಾರೆ ಎಂದು ತಹಶೀಲ್ದಾರ್ ತಿಳಿಸಿದ್ದಾರೆ. ಇನ್ನು ದಾಸೇಗೌಡ ಜಿ.ಎಂ. ಅವರು ಸಾರ್ವಜನಿಕರಿಂದ ಲಂಚ ಸ್ವೀಕರಿಸುತ್ತಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಸದರಿಯವರ ವರ್ತನೆಯು ಕರ್ನಾಟಕ ನಾಗರೀಕ ಸೇವಾ (ನಡತೆ) ನಿಯಮಾವಳಿ 1966 ಹಾಗೂ ತಿದ್ದುಪಡಿ ನಿಯಮಗಳು 2021ರ ನಿಯಮ 3(i) (ii)(iii)ಕ್ಕೆ ವಿರುದ್ಧವಾಗಿರುವುದರಿಂದ ಈ ಕೆಳಕಂಡಂತೆ ಅದೇಶ ಹೊರಡಿಸಲಾಗಿದೆ.

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆ ಕರ್ನಾಟಕ ನಾಗರೀಕ ಸೇವಾ ನಿಯಮಗಳು 1957ರ ನಿಯಮ 10(1)(ಡಿ)ರ ಅಡಿಯಲ್ಲಿ ಶಿಸ್ತಕ್ರಮ ತೆಗೆದುಕೊಳ್ಳಲಾಗಿದೆ. ಕೆಆರ್ ಹಳ್ಳಿ ವೃತ್ತದ ಗ್ರಾಮ ಲೆಕ್ಕಾಧಿಕಾರಿ ದಾಸೇಗೌಡ ಜಿ.ಎಂ. ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಚಾರಣೆ ನಡೆಸಿ, ಸರ್ಕಾರಿ ಸೇವೆಯಿಂದ ಅಮಾನತ್ತುಗೊಳಿಸಿರುತ್ತೇನೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ತಿಳಿಸಿದ್ದಾರೆ.

ಅನುಮತಿ ಪಡೆಯದೇ ಕೇಂದ್ರಸ್ಥಾನ ಬಿಡತಕ್ಕದ್ದಲ್ಲ ಹಾಗೂ ಕರ್ನಾಟಕ ಸಿವಿಲ್ ಸೇವಾ ನಿಯಮ 98ರನ್ವಯ ಜೀವನಾಧಾರ ಭತ್ಯೆ ಪಡೆಯಲು ಅರ್ಹರಿರುತ್ತಾರೆ ಎಂದು ಆದೇಶಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+