ದಾವಣಗೆರೆ: ಪೊಲೀಸ್ ಕಾನ್‌ಸ್ಟೇಬಲ್‌ಗೆ ಗುಂಡೇಟು, ಎಸ್ಪಿ ಹೇಳಿದ್ದೇನು?
ದಾವಣಗೆರೆ, ಫೆಬ್ರವರಿ, 15: ನಗರದ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಕಾಸ್‌ಸ್ಟೆೇಬಲ್ ಗುರುಮೂರ್ತಿ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿದೆಯಾ ಅಥವಾ ಆತ್ಮಹತ್ಯೆಗೆ ಯತ್ನಿಸಿದ್ದರಾ ಎಂಬ ಕುರಿತಂತೆ ತನಿಖೆ ನಡೆಯುತ್ತಿದೆ. ಸದ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ನಗರದ ಸಿಟಿ ಸೆಂಟ್ರಲ್ ಆಸ್ಪತ್ರೆಯಲ್ಲಿ ಗುರುಮೂರ್ತಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಮುಂದುವರೆದಿದೆ. ಯಾವುದೇ ರೀತಿಯಲ್ಲಿಯೂ ಪ್ರಾಣಕ್ಕೆ ತೊಂದರೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಆಸ್ಪತ್ರೆಗೆ ಐಜಿಪಿ ತ್ಯಾಗರಾಜನ್ ಅವರ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ ಎಸ್ಪಿ ಉಮಾ ಪ್ರಶಾಂತ್ ಅವರು, ಗುರುಮೂರ್ತಿ ಕುಟುಂಬದವರು ಹಾಗೂ ವೈದ್ಯರಿಂದ ಮಾಹಿತಿ ಪಡೆದುಕೊಂಡರು. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಪೊಲೀಸ್ ಕಾನ್‌ಸ್ಟೇಬಲ್ ಗುರುಮೂರ್ತಿ ಅವರ ಭುಜಕ್ಕೆ ಗುಂಡು ತಗುಲಿದೆ ಎಂದು ತಿಳಿಸಿದರು.
ಘಟನೆ ನಡೆದ ಕೂಡಲೇ ಆ್ಯಂಬುಲೆನ್ಸ್ ಅವರಿಗೆ ಕರೆ ಮಾಡಲಾಗಿದೆ. ಆದರೆ ಅರ್ಧ ಗಂಟೆಯಾದರೂ ಆ್ಯಂಬುಲೆನ್ಸ್ ಸ್ಥಳಕ್ಕೆ ಬಾರದಿದ್ದಕ್ಕೆ ಸ್ಥಳದಲ್ಲಿದ್ದವರು ಆಕ್ರೋಶ ವ್ಯಕ್ತಪಡಿಸಿದರು. ಅರ್ಧ ಗಂಟೆಯಾದರೂ ಆ್ಯಂಬುಲೆನ್ಸ್ ಬಾರದ ಕಾರಣಕ್ಕ ಕೊನೆಗೆ ಪೊಲೀಸ್ ಜೀಪಿನಲ್ಲಿಯೇ ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ಸ್ಥಳದಲ್ಲಿದ್ದವರು ಮಾಹಿತಿ ನೀಡಿದರು.
ಗುರುಮೂರ್ತಿ ಅವರು ಪತ್ನಿ ಜೊತೆ ಮೊಬೈಲ್‌ನಲ್ಲಿ ಮಾತನಾಡುತ್ತಿದ್ದರು. ಈ ವೇಳೆ ಗುಂಡಿನ ಸದ್ದು ಕೇಳಿದೆ. ಪತ್ನಿ ಹಾಗೂ ಅವರ ಗುರುಮೂರ್ತಿ ಅವರ ತಂದೆ ಕೂಡಲೇ ಘಟನಾ ಸ್ಥಳಕ್ಕೆ ಓಡೋಡಿ ಬಂದಿದ್ದಾರೆ. ಬಳಿಕ ಪೊಲೀಸರೊಂದಿಗೆ ಗುರುಮೂರ್ತಿ ಅವರನ್ನು ಆಸ್ಪತ್ರೆ ಸೇರಿಸಲಾಗಿದೆ.
ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ವಾಸಿಯಾದ ಗುರುಮೂರ್ತಿ (34) ಎಂದು ಗುರುತಿಸಲಾಗಿದೆ. 2011-12ರ ಬ್ಯಾಚ್ ನವರಾಗಿದ್ದ ಗುರುಮೂರ್ತಿ 21ನೇ ವಯಸ್ಸಿಗೆ ಕೆಲಸಕ್ಕೆ ಸೇರಿದ್ದರು.
ಗುಂಡು ಹಾರಿಸಿಕೊಂಡು ಕೆಳಗಡೆ ಬಿದ್ದ ಗುರುಮೂರ್ತಿ ಅವರು ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದರು. ರಕ್ತದ ಮಡುವಿನಲ್ಲಿದ್ದ ಅವರನ್ನು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲ ದಿನಗಳಿಂದ ಇವಿಎಂ ಯಂತ್ರಗಳ ಕಾವಲು ಕಾಯುವ ಕೆಲಸ ಮಾಡುತ್ತಿದ್ದರು. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಯತ್ನ ಮಾಡಿರಬಹುದು ಎಂಬ ಅನುಮಾನ ವ್ಯಕ್ತವಾಗಿದೆ. ಸ್ಪಷ್ಟ ಕಾರಣ ತಿಳಿದುಬಂದಿಲ್ಲ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications