ದಾವಣಗೆರೆ : ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಪೊಲೀಸ್ ವಶಕ್ಕೆ
ದಾವಣಗೆರೆ, ಮೇ 31 : ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶುಕ್ರವಾರ ಸಂಜೆಯ ತನಕ ಅವರು ಪೊಲೀಸರ ವಶದಲ್ಲಿಯೇ ಇರಲಿದ್ದಾರೆ.
ಶುಕ್ರವಾರ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಂ.ಪಿ.ರೇಣುಕಾಚಾರ್ಯ ಅವರನ್ನು ಪೊಲೀಸರ ವಶಕ್ಕೆ ಪಡೆಯುವಂತೆ ಆದೇಶ ನೀಡಿದೆ. ಚುನಾವಣಾ ನೀತಿ ಸಂಹಿತೆ ಪ್ರಕರಣದಲ್ಲಿ ವಿಚಾರಣೆಗೆ ರೇಣುಕಾಚಾರ್ಯ ಅವರು ಪದೇ ಪದೇ ಗೈರಾಗುತ್ತಿದ್ದರು.
ನ್ಯಾಯಮೂರ್ತಿ ರಾಮಚಂದ್ರ ಡಿ.ಹುದ್ದಾರ್ ಅವರು ಎಂ.ಪಿ.ರೇಣುಚಾರ್ಯ ಅವರನ್ನು ವಶಕ್ಕೆ ಪಡೆಯುವಂತೆ ಪೊಲೀಸರಿಗೆ ಆದೇಶ ನೀಡಿದರು. ಶುಕ್ರವಾರ ಸಂಜೆಯ ತನಕ ಅವರು ಪೊಲೀಸರ ವಶದಲ್ಲಿಯೇ ಇರಬೇಕಿದೆ.

ಅನೇಕ ಬಾರಿ ರೇಣುಕಾಚಾರ್ಯ ಅವರಿಗೆ ಸಮನ್ಸ್ ನೀಡಿದರೂ ಉತ್ತರ ನೀಡಿರಲಿಲ್ಲ. ವಿಚಾರಣೆಗೆ ಸಹ ಹಾಜರಾಗಿರಲಿಲ್ಲ. ಶುಕ್ರವಾರ ಅವರು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಆಗಮಿಸಿದ್ದರು. ಆಗ ಅವರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ.
2016ರಲ್ಲಿ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ರೇಣುಕಾಚಾರ್ಯ ಅವರ ವಿರುದ್ಧ ಚುನಾವಣಾ ನೀತಿ ಸಂಹಿತೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಗೆ ಅವರು ಗೈರಾಗುತ್ತಿದ್ದರು.












Click it and Unblock the Notifications