ಇಂದು ದಾವಣಗೆರೆ ಬಂದ್: ಪ್ರತಿಭಟನಾಕಾರರಿಗೆ ಪೊಲೀಸ್ ಇಲಾಖೆ ನೀಡಿರುವ ಸೂಚನೆಗಳೇನು..?
ದಾವಣಗೆರೆ, ಸೆಪ್ಟೆಂಬರ್ 25: ಭಾರತೀಯ ರೈತ ಒಕ್ಕೂಟದ ವತಿಯಿಂದ ಇಂದು(ಸೆಪ್ಟೆಂಬರ್,25) ಸೋಮವಾರ ಕರೆ ಕೊಟ್ಟಿರುವ ದಾವಣಗೆರೆ ಬಂದ್‌ಗೆ ಕರೆ ಕೊಡಲಾಗಿದ್ದು, ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು ಎಚ್ಚರಿಕೆ ಹಾಗೂ ಸೂಚನೆಗಳನ್ನು ಕೊಟ್ಟಿದೆ.
ಸೆಪ್ಟೆಂಬರ್, 25ಕ್ಕೆ ಭಾರತೀಯ ರೈತ ಒಕ್ಕೂಟದ ವತಿಯಿಂದ,ಜಿಲ್ಲಾಧ್ಯಕ್ಷರಾದ ಹೆಚ್.ಆರ್ ಲಿಂಗರಾಜು ಅವರ ನೇತೃತ್ವದಲ್ಲಿ ಭದ್ರಾ ಡ್ಯಾಂನಿಂದ ಬಲದಂಡೆ ನಾಲೆಯಲ್ಲಿ ನೀರು ನಿಲ್ಲಿಕೆ ಖಂಡಿಸಿ ಮತ್ತು ಭದ್ರಾ ನಾಲೆಯಿಂದ ತಕ್ಷಣವೇ ನಾಲೆಗೆ ನೀರು ಹರಿಸಬೇಕು.

ನಿರಂತರ 100 ದಿನ ನೀರು ಹರಿಸಬೇಕೆಂದು ಆಗ್ರಹಿಸಿ ದಾವಣಗೆರೆ ಬಂದ್ ಕರೆ ನೀಡಿರುವುದಾಗಿ ತಿಳಿದು ಬಂದಿದೆ. ಆದರೆ ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಕಾಪಾಡುವ ನಿಟ್ಟಿನಲ್ಲಿ ಬಂದ್ ಕರೆ ನೀಡಿದ ಆಯೋಜಕರು ಸೂಚನೆಗಳನ್ನು ಪಾಲಿಸಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆ ಸೂಚಿಸಿದೆ.
ಪೊಲೀಸ್ ಇಲಾಖೆಯಿಂದ ನೀಡಿದ ಸೂಚನೆಗಳೇನು ಗೊತ್ತಾ...?
ಬಂದ್ ಕರೆ ಸಂಬಂಧ ಘನ ಸವೋರ್ಚ್ಚ ನ್ಯಾಯಾಲಯದ ಆದೇಶಗಳನ್ನು ಉಲ್ಲಂಘನೆ ಮಾಡುವಂತಿಲ್ಲ
ಒತ್ತಾಯಪೂರ್ವಕವಾಗಿ ಅಥವಾ ಬಲವಂತವಾಗಿ ಯಾವುದೇ ಶಾಲಾ-ಕಾಲೇಜು, ಸರ್ಕಾರಿ/ಖಾಸಗಿ ಸಂಸ್ಥೇಗಳನ್ನು ಮತ್ತು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸುವಂತಿಲ್ಲ. ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು.

ಬಂದ್ ಸಂಬಂಧ ಸಾರ್ವಜನಿಕರ ಜನ-ಜೀವನಕ್ಕೆ, ವಾಹನ ಮತ್ತು ಆಸ್ತಿ-ಪಾಸ್ತಿ ನಾಶ ಮಾಡುವಂತಿಲ್ಲ.
ಯಾವುದೇ ರಸ್ತೆ ತಡೆಗೆ ಹಾಗೂ ವಾಹನ ಅಡ್ಡಗಟ್ಟುವುದಕ್ಕೆ ಅವಕಾಶ ಇಲ್ಲ ಮತ್ತು ಸಾರ್ವಜನಿಕ ಸಂಚಾರಕ್ಕೆ ಅಡ್ಡಿಪಡಿಸುವಂತಿಲ್ಲ. ಒಂದು ವೇಳೆ ಪ್ರಯತ್ನಿಸಿದ್ದಲ್ಲಿ ಕಾನೂನು ರೀತ್ಯ ಕ್ರಮವಹಿಸಲಾಗುವುದು.
ಯಾವುದೇ ಕಾರಣಕ್ಕೂ ತುರ್ತು ಸೇವೆಗಳಿಗೆ ಮತ್ತು ಅಗತ್ಯ ವಸ್ತುಗಳ ಸಾಗಾಣಿಕೆ ಅಡ್ಡಿಪಡಿಸುವಂತಿಲ್ಲ.
ಬಂದ್ ಸಂಬಂಧ ರಸ್ತೆ, ಸಾರ್ವಜನಿಕ ಸ್ಥಳಗಳಲ್ಲಿ ಟಯರ್‌ಗಳನ್ನು ಹಾಕಿ ಹಚ್ಚಲು ಮತ್ತು ಯಾವುದೇ ಪ್ರತಿಕೃತಿಗಳನ್ನು ದಹನ ಮಾಡಲು ಅವಕಾಶವಿರುವುದಿಲ್ಲ.
ಬಂದ್ ಹೆಸರಿನಲ್ಲಿ ಯಾರೇ ಆಗಲಿ ಕಾನೂನು ಕೈಗೆ ತೆಗೆದುಕೊಂಡರೆ ಅವರ ವಿರುದ್ಧ ಪೊಲೀಸ್ ಇಲಾಖೆ ಕಾನೂನು ಕ್ರಮ ಜರುಗಿಸಲಾಗುವುದು.
ಬಂದ್ ಸಂಬಂಧ ಸುಳ್ಳು ವದಂತಿ ಹಬ್ಬಿಸುವವರ ವಿರುದ್ಧ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸಂದೇಶ ಅಥವಾ ಪೋಸ್ಟರ್‌ಗಳನ್ನು ಹಾಕುವವರ ಮೇಲೆ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು.
ಇನ್ನು ಬಂದ್ ಗೆ ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲಾ ಪೊಲೀಸ್ ವತಿಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿ, ಸಶಸ್ತ್ರ ತುಕಡಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಅವರು ತಿಳಿಸಿದ್ದಾರೆ.












Click it and Unblock the Notifications