ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಜ್ಯ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ಕೊಟ್ಟ ವಾಲ್ಮೀಕಿ ಶ್ರೀ, ರಾಮುಲು

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಜನವರಿ 02: ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿ ವಾಲ್ಮೀಕಿ ಮಠದಲ್ಲಿ ಮಾತನಾಡಿದ ಶ್ರೀಗಳು, "ನಮ್ಮ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಆಗಬೇಕು, ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಒಂದು ತಿಂಗಳಲ್ಲಿ ವರದಿ ನೀಡಬೇಕು ಎಂದು ಕೇಳಿಕೊಂಡಿದ್ದೇವೆ, ಈ ವಿಚಾರವಾಗಿ ಇದೇ ಹತ್ತರೊಳಗೆ ವಾಲ್ಮೀಕಿ ಸ್ವಾಮೀಜಿ ನೇತೃತ್ವದಲ್ಲಿ ಸಿಎಂ ಭೇಟಿ ಮಾಡಿ ಮೀಸಲಾತಿ ಬಗ್ಗೆ ಚರ್ಚೆ ಮಾಡಲಾಗುವುದು" ಎಂದು ತಿಳಿಸಿದರು.

"ಶ್ರೀಗಳು ಒಂದು ಮಾತು ಹೇಳಿದರೆ ನಾವು ಆ ಮಾತನ್ನು ತೆಗೆದು ಹಾಕೊಲ್ಲ. ಯಾವುದೇ ತ್ಯಾಗಕ್ಕೂ ಸಿದ್ಧ" ಎಂದು ಶ್ರೀರಾಮುಲು ಪರೋಕ್ಷವಾಗಿ ರಾಜೀನಾಮೆ ನೀಡುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

Prasannanandapuri Swamiji Sriramulu Warned Government For Reservation To Valmiki Community

ಇದೇ ಸಂದರ್ಭದಲ್ಲಿ ವಾಲ್ಮೀಕಿ ಜಾತ್ರೆ ಕುರಿತು ಮಾತನಾಡಿದ ಶ್ರೀಗಳು, "ಈ ಬಾರಿ ಮಠದ ಆವರಣದಲ್ಲಿ ಎರಡನೇ ವರ್ಷದ ವಾಲ್ಮೀಕಿ ಜಾತ್ರೆ ಮಾಡಲು ನಿರ್ಧರಿಸಿದ್ದೇವೆ. ಜಾತ್ರೆಯ ಅಧ್ಯಕ್ಷತೆಯನ್ನು ಆರೋಗ್ಯ ಸಚಿವ ಶ್ರೀರಾಮುಲು ವಹಿಸಿಕೊಂಡಿದ್ದಾರೆ. ವಾಲ್ಮೀಕಿ ಜಾತ್ರೆ ಬರುವುದರೊಳಗೆ ಮೀಸಲಾತಿ ಬೇಡಿಕೆ ಈಡೇರಿಸಬೇಕು. ಮುಖ್ಯಮಂತ್ರಿಗಳ ಬಗ್ಗೆ ಅಪಾರ ನಂಬಿಕೆ‌ ಇದೆ. ಜಾತ್ರೆ ಬರುವ ಒಳಗೆ ಮೀಸಲಾತಿ ಬಿಡುಗಡೆ ಮಾಡದಿದ್ದರೆ ಎಲ್ಲಾ ಪಕ್ಷದ ವಾಲ್ಮೀಕಿ ಸಮಾಜದ ಶಾಸಕರ, ಸಚಿವರ ಸಭೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ. ಈ ನಿರ್ಧಾರ ಅತ್ಯಂತ ಕಠೋರವಾಗಿರುತ್ತದೆ" ಎಂದು ರಾಜ್ಯ ಸರ್ಕಾರಕ್ಕೆ ವಾಲ್ಮೀಕಿ ಶ್ರೀಗಳು ಖಡಕ್ ಎಚ್ಚರಿಕೆ ನೀಡಿದರು.

English summary
"Government should give a reservation of 7.5 percent for Valmiki society, otherwise I am ready for any sacrifice" said Minister Sriramulu. Prasannanandapuri swamiji also warned government,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X