ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದೆ ಸಾವನ್ನಪ್ಪಿದ ಗರ್ಭಿಣಿ
ದಾವಣಗೆರೆ, ಫೆಬ್ರವರಿ 04: ದಾವಣಗೆರೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಇಲ್ಲದಿರುವ ಕಾರಣ ಗರ್ಭಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗದ ಹುಲ್ಲೂರು ಗ್ರಾಮದ ಭವಾನಿ (24) ಸಾವನ್ನಪ್ಪಿದವರು.
ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆರು ವೆಂಟಿಲೇಟರ್ ಇದ್ದು, ಅದರಲ್ಲಿ ಎರಡು ವೆಂಟಿಲೇಟರ್ ಅನ್ನು ರಿಪೇರಿಗೆ ಕಳಿಸಲಾಗಿದೆ. ಉಳಿದ ನಾಲ್ಕು ವೆಂಟಿಲೇಟರ್ ಅನ್ನು ಬೇರೆ ರೋಗಿಗಳಿಗೆ ಅಳವಡಿಸಿದ್ದಾರೆ.
ಮಹಿಳೆಗೆ ವೆಂಟಿಲೇಟರ್ ಅವಶ್ಯಕತೆ ಬಂದಿದ್ದು, ಸರಿಯಾದ ಸಮಯಕ್ಕೆ ವೆಂಟಿಲೇಟರ್ ಸಿಗದಿದ್ದಕ್ಕೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ನಿರ್ಲಕ್ಷ್ಯದ ಹಿನ್ನೆಲೆ ಗರ್ಭಿಣಿ ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿದ್ದಾರೆ.

ವೈದ್ಯರ ಮೇಲೆ ಗರ್ಭಿಣಿ ಸಂಬಂಧಿಕರಿಂದ ಹಲ್ಲೆ
ಈ ಸಂಬಂಧ ಮೃತ ಗರ್ಭಿಣಿಯ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನುವ ಆರೋಪ ಕೂಡ ಕೇಳಿ ಬಂದಿದೆ.ವೈದ್ಯರ ನಿರ್ಲಕ್ಷ್ಯ ಹಾಗೂ ವೆಂಟಿಲೇಟರ್ ಅವಶ್ಯಕತೆ ಇದ್ದರೂ ಸಂಬಂಧಿಕರ ಮೇಲೆ ವೈದ್ಯರು ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ, ಮಹಿಳೆಯ ಸಂಬಂಧಿಕರು ಜಿಲ್ಲಾಸ್ಪತ್ರೆಯ ಮುಂಭಾಗದಲ್ಲಿ ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಲ್ಲದೆ ಮೃತ ಗರ್ಭಿಣಿ ಮಹಿಳೆಯ ಸಂಬಂಧಿಕರು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ, ವೈದ್ಯರು ಸಹ ತಮ್ಮ ಮೇಲಿನ ಹಲ್ಲೆ ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ.

ಜಿಲ್ಲಾಸ್ಪತ್ರೆಯಲ್ಲಿ ವೆಂಟಿಲೇಟರ್ ಮತ್ತು ಶುಶ್ರೂಷಕರ ಕೊರತೆ
ರೋಗಿಯ ಸಂಬಂಧಿಕರಿಗೆ ಪರಿಸ್ಥಿತಿಯ ಬಗ್ಗೆ ತಿಳಿ ಹೇಳಿದರೂ ನಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದಾರೆ. ನಾವು ನಿರ್ಲಕ್ಷ್ಯವಹಿಸಿಲ್ಲ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಗಳು ಹಾಗೂ ಶುಶ್ರೂಷಕರ ಸಮಸ್ಯೆ ಇದೆ ಎಂದು ವೈದ್ಯರು ತಿಳಿಸಿದ್ದಾರೆ.
ನೂರಾರು ವೈದ್ಯರು ಹಾಗೂ ವಿದ್ಯಾರ್ಥಿಗಳು ಜಿಲ್ಲಾಸ್ಪತ್ರೆಯ ಮುಂಭಾಗ ಕೆಲ ಕಾಲ ಪ್ರತಿಭಟನೆ ನಡೆಸಿದ್ದಾರೆ. ಆದರೆ ಇದನ್ನು ಒಪ್ಪದ ಗರ್ಭಿಣಿ ಸಂಬಂಧಿಕರು ವೈದ್ಯರು ಬೇಕೆಂದೇ ನಿರ್ಲಕ್ಷ್ಯ ತೋರಿದ್ದಾರೆ.

ವೈದ್ಯರು, ರೋಗಿ ಸಂಬಂಧಿಕರ ನಡುವೆ ಮಾತಿನ ಚಕಮಕಿ
ನಂತರ ಜ್ವರ ಬಂದರೂ ಸರಿಯಾಗಿ ತಪಾಸಣೆ ಮಾಡಿಲ್ಲ. ಕೇಳಿದರೆ ನಮ್ಮನ್ನೇ ಬೈದು ಹೊರಗಟ್ಟಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೈದ್ಯರು ಹಾಗೂ ರೋಗಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಪ್ರತಿಭಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದರು.
ಇನ್ನು ಈ ಬಗ್ಗೆ ಮಾತನಾಡಿದ ಜಿಲ್ಲಾಸ್ಪತ್ರೆಯ ಅಧೀಕ್ಷಕರು, "ಆಸ್ಪತ್ರೆಯಲ್ಲಿ 6 ವೆಂಟಿಲೇಟರ್ ಗಳಿವೆ. ಅದರಲ್ಲಿ 2 ರಲ್ಲಿ ತಾಂತ್ರಿಕ ಸಮಸ್ಯೆ ಇದೆ. ಅದನ್ನು ಅತೀ ಶೀಘ್ರದಲ್ಲಿ ಸರಿಪಡಿಸಲು ವ್ಯವಸ್ಥೆ ಮಾಡಲಾಗಿದೆ. ಯಾವುದೇ ಕಾರಣಕ್ಕೂ ವೈದ್ಯರು ನಿರ್ಲಕ್ಷ್ಯವಹಿಸಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.''

ಆಸ್ಪತ್ರೆಯಲ್ಲಿನ ಕೊರತೆಯ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ
"ರೋಗಿಯ ಸಂಬಂಧಿಕರು, ನಮ್ಮ ವೈದ್ಯರು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದಾರೆ. ರೋಗಿಯ ಸ್ಥಿತಿ ಗಂಭೀರವಾಗಿಯೇ ಇತ್ತು.ಇದು ಸಾರ್ವಜನಿಕ ಆಸ್ಪತ್ರೆ ಆದ್ದರಿಂದ 24 ಗಂಟೆಯೂ ವೆಂಟಿಲೇಟರ್ ಗಳು ಬಳಕೆಯಾಗುತ್ತವೆ. ತೊಂದರೆ ಬಂದಾಗ ತಕ್ಷಣವೇ ರಿಪೇರಿ ಮಾಡಿಸಲಾಗುತ್ತದೆ. ಹೆಚ್ಚಿನ ವೆಂಟಿಲೇಟರ್ ಗಳು ಹಾಗೂ ಶುಶ್ರೂಷಕರ ಅವಶ್ಯಕತೆ ಇದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲೂ ಮನವಿ ಮಾಡಿದ್ದೇವೆ'' ಎಂದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications