• search
 • Live TV
ದಾವಣಗೆರೆ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ದಾವಣಗೆರೆ; ಪಿಜಿ-ಸಿಇಟಿ, ಡಿ-ಸಿಇಟಿ ಪರೀಕ್ಷೆಗೆ ಪೂರ್ವ ತಯಾರಿ

By ದಾವಣಗೆರೆ ಪ್ರತಿನಿಧಿ
|
Google Oneindia Kannada News

ದಾವಣಗೆರೆ, ಅಕ್ಟೋಬರ್ 9: ಅಕ್ಟೋಬರ್ 13 ಹಾಗೂ 14 ರಂದು ನಿಗದಿಯಾಗಿರುವ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿ-ಸಿಇಟಿ) ಮತ್ತು ಡಿಪ್ಲೊಮಾ ಸಾಮಾನ್ಯ ಪ್ರವೇಶ ಪರೀಕ್ಷೆ (ಡಿ-ಸಿಇಟಿ)ಗಳನ್ನು ಯಾವುದೇ ಅಕ್ರಮವಿಲ್ಲದ ಹಾಗೆ, ಜೊತೆಗೆ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಪೂಜಾರ್ ವೀರಮಲ್ಲಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲ ಇಂದು ಪಿಜಿ-ಸಿಇಟಿ ಮತ್ತು ಡಿ-ಸಿಇಟಿ ಪರೀಕ್ಷೆ ನಡೆಸುವ ಕುರಿತು ಜಿಲ್ಲಾಡಳಿತ ಭವನದ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, "ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸ್ಯಾನಿಟೈಸ್ ಮಾಡಿಸಬೇಕು. ಪ್ರತಿ ಕೊಠಡಿಯಲ್ಲಿ ಗರಿಷ್ಠ 24 ವಿದ್ಯಾರ್ಥಿಗಳಿಗೆ ಮಾತ್ರ ಆಸನ ವ್ಯವಸ್ಥೆ ಕಲ್ಪಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು" ಎಂದು ತಿಳಿಸಿದರು.

ಶಿವಮೊಗ್ಗದಲ್ಲಿ 21 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು ಶಿವಮೊಗ್ಗದಲ್ಲಿ 21 ಕೇಂದ್ರಗಳಲ್ಲಿ ಟಿಇಟಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ಮಾಸ್ಕ್‌ ಇಲ್ಲದೇ ಬರುವಂತಿಲ್ಲ: ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು. ಕೊರೊನಾ ಸೋಂಕಿನ ಲಕ್ಷಣ ಕಂಡುಬಂದವರಿಗೆ ಹಾಗೂ ಕಂಟೇನ್ಮೆಂಟ್ ವಲಯದಿಂದ ಬರುವ ಅಭ್ಯರ್ಥಿಗಳಿಗೆ ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ 2 ಹೆಚ್ಚುವರಿ ಕೊಠಡಿಗಳನ್ನು ಕಾಯ್ದಿರಿಸಬೇಕು. ಪ್ರತಿಯೊಬ್ಬರು ಮಾಸ್ಕ್ ಧರಿಸುವುದು ಕಡ್ಡಾಯ. ಪರೀಕ್ಷಾ ಕೇಂದ್ರಗಳಿಗೆ ಆರೋಗ್ಯ ಕಾರ್ಯಕರ್ತರನ್ನು ನೇಮಿಸಿ ಅಭ್ಯರ್ಥಿಗಳು, ನಿಯೋಜಿತ ಸಿಬ್ಬಂದಿಗಳ ಥರ್ಮಲ್ ಸ್ಕ್ಯಾನರ್ ಮಾಡಿಸಬೇಕು. ಪರೀಕ್ಷಾ ಪ್ರಕ್ರಿಯೆ ಸಲುವಾಗಿ ಮುಂಜಾಗ್ರತೆಗಾಗಿ ಒಂದು ಆಂಬ್ಯುಲೆನ್ಸ್ ನಿಯೋಜಿಸಬೇಕು ಎಂದು ಸೂಚಿಸಿದ್ದಾರೆ.

ನಿಷೇಧಾಜ್ಞೆ ಜಾರಿ: ಪ್ರಶ್ನೆಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಸಾಗಾಣಿಕೆ ಮಾಡುವ ಹೊಣೆಯನ್ನು ಮಾರ್ಗಾಧಿಕಾರಿಗಳಿಗೆ ನೀಡಲಾಗಿದ್ದು, ಇದರಲ್ಲಿ ಯಾವುದೇ ದೋಷಗಳಾಗಬಾರದು. ಜಾಗೃತ ದಳಕ್ಕಾಗಿ ಅಧಿಕಾರಿಗಳನ್ನು ನಿಯೋಜಿಸಬೇಕು. ಪರೀಕ್ಷೆಗಳನ್ನು ನ್ಯಾಯಬದ್ಧವಾಗಿ ನಡೆಸುವ ಸಂಬಂಧ ಪರೀಕ್ಷೆಗಳು ನಡೆಯುವ ದಿನದಂದು ಕೇಂದ್ರಗಳ ಸುತ್ತ 200 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದು, ನಿಷೇಧಿತ ಅವಧಿಯಲ್ಲಿ ಈ ವ್ಯಾಪ್ತಿಯಲ್ಲಿನ ಎಲ್ಲಾ ಜೆರಾಕ್ಸ್ ಅಂಗಡಿಗಳು, ಸೈಬರ್ ಕೆಫೆಗಳು ಮುಚ್ಚಲಾಗುವುದು ಎಂದರು.

ಬಳಿಕ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ನಾಗರಾಜ್ ಮಾತನಾಡಿ ಎಂಟೆಕ್, ಎಂಸಿಎ, ಎಂಬಿಎ ಸೇರಿದಂತೆ ವಿವಿಧ ಕೋರ್ಸ್ ‌ಗಳ ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ ಅ. 13 ಮತ್ತು 14 ರಂದು ಬೆಳಿಗ್ಗೆ 10.30 ರಿಂದ 12.30 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 4. 30ರವರೆಗೆ ಅಭ್ಯರ್ಥಿಗಳು ಆಯ್ಕೆ ಮಾಡಿಕೊಂಡಿರುವ ವಿಷಯಗಳಿಗೆ ಅನುಸಾರವಾಗಿ ನಗರದ ಸಿದ್ದಗಂಗಾ ವಿಜ್ಞಾನ ಪ.ಪೂ. ಕಾಲೇಜು, ಪಿಜೆ ಬಡಾವಣೆಯ ಸೆಂಟ್ ಪಾಲ್ ಪ.ಪೂ. ಕಾಲೇಜು, ಶಿವಕುಮಾರಸ್ವಾಮಿ ಬಡಾವಣೆಯ ಸೆಂಟ್ ಜಾನ್ ಪ.ಪೂ. ಕಾಲೇಜು, ಹಾಗೂ ಆರ್.ಸೀತಮ್ಮ ಬಾಲಕಿಯರ ಸರ್ಕಾರಿ ಪ.ಪೂ. ಕಾಲೇಜಿನಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಿದರು.

   Rain Alert : ರಾಜ್ಯದಂತ ಭಾರಿ ಮಳೆ ಸಾಧ್ಯತೆ | Oneindia Kannada

   ಡಿಪ್ಲೊಮೊ ಸಾಮಾನ್ಯ ಪರೀಕ್ಷೆ ಅ. 14 ರಂದು ಬೆಳಿಗ್ಗೆ 10 ಗಂಟೆಯಿಂದ 1 ಗಂಟೆಯವರೆಗೆ ನಗರದ ಮೋತಿ ವೀರಪ್ಪ ಸರ್ಕಾರಿ ಪ.ಪೂ. ಕಾಲೇಜು, ಬಾಲಕರ ಸರ್ಕಾರಿ ಪ.ಪೂ. ಕಾಲೇಜು, ವಿವೇಕಾನಂದ ಬಡಾವಣೆಯ ಎಸ್‍ಪಿಎಸ್ ‍ಎಂ ಪ.ಪೂ. ಕಾಲೇಜು, ಸೇರಿದಂತೆ ಒಟ್ಟು 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಒಟ್ಟು 1,220 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಪಾಲನೆಯಾಗುವ ಬಗ್ಗೆ ಅಧೀಕ್ಷಕರು ನಿಗಾ ವಹಿಸಬೇಕು. ಒಟ್ಟಾರೆ ಪರೀಕ್ಷೆ ಪ್ರಕ್ರಿಯೆ ಕಾನೂನು ಹಾಗೂ ನ್ಯಾಯಬದ್ಧವಾಗಿ ನಡೆಸಿರುವ ಬಗ್ಗೆ ಪರೀಕ್ಷಾ ವೀಕ್ಷಕರು ಪ್ರಮಾಣಪತ್ರವನ್ನು ಜಿಲ್ಲಾಡಳಿತ ಹಾಗೂ ಪರೀಕ್ಷಾ ಪ್ರಾಧಿಕಾರಕ್ಕೆ ಸಲ್ಲಿಸಬೇಕು ಎಂದು ತಿಳಿಸಿದರು.

   English summary
   The PG-CET) and D-CET scheduled on October 13 and 14 in davanagere. preparations are underway in exam centres,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X